ಯುಐಡಿಎಐ ನೇಮಕಾತಿ; ಬೆಂಗಳೂರಿನಲ್ಲಿ ಕೆಲಸ

ಯುಐಡಿಎಐ ನೇಮಕಾತಿ; ಬೆಂಗಳೂರಿನಲ್ಲಿ ಕೆಲಸ

ಬೆಂಗಳೂರು, ಡಿಸೆಂಬರ್ 16; ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು 24 ಜನವರಿ ಕೊನೆಯ ದಿನವಾಗಿದೆ.

ಡೆಪ್ಯೂಟಿ ಡೈರೆಕ್ಟರ್ 5, ಅಸಿಸ್ಟೆಂಟ್ ಡೈರೆಕ್ಟರ್ 2, ಟೆಕ್ನಿಕಲ್ ಆಫೀಸರ್ 3, ಅಸಿಸ್ಟೆಂಟ್ ಸೆಕ್ಷನ್ ಆಫೀಸರ್ 1 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ.

ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ.

ಡೆಪ್ಯೂಟಿ ಡೈರೆಕ್ಟರ್, ಅಸಿಸ್ಟೆಂಟ್ ಡೈರೆಕ್ಟರ್ ಹುದ್ದೆಗಳಿಗೆ ಇಂಜಿನಿಯರಿಂಗ್‌ನಲ್ಲಿ ಪದವಿ ಪಡೆದವರು, ಸ್ನಾತಕೋತ್ತರ ಪದವಿ ಪಡೆದವರು, ಎಂಸಿಎ ವ್ಯಾಸಂಗ ಮಾಡಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಟೆಕ್ನಿಕಲ ಆಫೀಸರ್, ಅಸಿಸ್ಟೆಂಟ್ ಟೆಕ್ನಿಕಲ್ ಆಫೀಸರ್ ಹುದ್ದೆಗೆ ಯುಐಡಿಎಐ ನೇಮಕಾತಿ ನಿಯಮಗಳ ಅನ್ವಯ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.ಡೆಪ್ಯೂಟಿ ಡೈರೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಾಫ್ಟ್‌ವೇರ್ ಡೆವಲಪ್‌ಮೆಂಟ್, ಡೇಟಾಬೇಸ್, ನೆಟ್‌ವರ್ಕ್ ಸೆಕ್ಯೂರಿಟಿ ವಿಭಾಗದಲ್ಲಿ ಕೆಲಸ ಮಾಡಿದ ಅನುಭವ ಹೊಂದಿರಬೇಕು.

ಯುಐಡಿಎಐ ನೇಮಕಾತಿ ನಿಯಮಗಳ ಅನ್ವಯ ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 56 ವರ್ಷಗಳು. 24/1/2022ಕ್ಕೆ ಅನ್ವಯವಾಗುವಂತೆ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಭರ್ತಿ ಮಾಡಿ, ನಿಗದಿತ ದಾಖಲೆಗಳನ್ನು ಲಗತ್ತಿಸಿ, ಸ್ವಯಂ ದೃಢೀಕರಣ ಮಾಡಿ ಸಲ್ಲಿಸಬೇಕು.

Please follow and like us:

Leave a Reply

Your email address will not be published. Required fields are marked *

Next Post

ಮ್ಯಾಕ್ಸ್ ವೆಲ್ ದಂಡಯಾತ್ರೆ.. ಫೋರು.. ಸಿಕ್ಸರ್ ಗಳ ಸುನಾಮಿ

Thu Dec 16 , 2021
ಮ್ಯಾಕ್ಸ್ ವೆಲ್ ದಂಡಯಾತ್ರೆ.. ಫೋರು.. ಸಿಕ್ಸರ್ ಗಳ ಸುನಾಮಿ ಬಿಗ್ ಬ್ಯಾಷ್ ಲೀಗ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬ್ಯಾಟರ್, ಆಸ್ಟ್ರೇಲಿಯಾ ಕ್ರಿಕೆಟರ್ ಗ್ಲೇನ್ ಮ್ಯಾಕ್ಸ್ ವೆಲ್ ಧೂಳೆಬ್ಬಿಸಿದ್ದಾರೆ. ಪ್ರಸಕ್ತ ಬಿಗ್ ಬ್ಯಾಷ್ ಲೀಗ್ ನಲ್ಲಿ ಮೆಲ್ಬೋರ್ನ್ ಸ್ಟಾರ್ಸ್ ತಂಡ ಸಾರಥ್ಯ ವಹಿಸಿರುವ ಮ್ಯಾಕ್ಸಿ, ಪ್ರತಿ ಮ್ಯಾಚ್ ನಲ್ಲೂ ಹೌರಾ ಎನ್ನುವಂತಹ ಪ್ರದರ್ಶನ ನೀಡುತ್ತಿದ್ದಾರೆ. ಅದರಂತೆ ನಿನ್ನೆ ಸಿಡ್ನಿ ಸಿಕ್ಸರ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಮ್ಯಾಕ್ಸಿ ರನ್ ಸುನಾಮಿ […]

Advertisement

Wordpress Social Share Plugin powered by Ultimatelysocial