ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಗೆ ಜೆ.ಪಿ.ನಡ್ಡಾ ಆಗಮನ!

 

ಬೆಂಗಳೂರು,ಏ.3- ಕೇಂದ್ ಗೃಹ ಸಚಿವ ಅಮಿತ್ ಶಾ ಕರ್ನಾಟಕಕ್ಕೆ ಭೇಟಿ ನೀಡಿದ ಬೆನ್ನಲ್ಲೇ ಅಂದರೆ ಕೇವಲ ಎರಡು ವಾರಗಳ ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸಹ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ.

2023ರ ವಿಧಾನಸಭಾ ಚುನಾವಣೆಗೆ ಒಂದು ವರ್ಷ ಮುಂಚಿತವಾಗಿಯೇ ಆಡಳಿತಾರೂಢ ಬಿಜೆಪಿಯಲ್ಲಿ ತಯಾರಿ ಆರಂಭವಾಗಿದೆ. ಪಕ್ಷದ ಕಾರ್ಯತಂತ್ರದ ಕುರಿತು ಚರ್ಚಿಸಲು ಬಿಜೆಪಿ ಅಧ್ಯಕ್ಷ ಜೆಸಿ ನಡ್ಡಾ ಅವರು ಏ.16 ಮತ್ತು 17ರಂದು ರಾಜ್ಯಕ್ಕೆ ಬರಲಿದ್ದಾರೆ.

ವಿಜಯನಗರ ಜಿಲ್ಲೆಯಲ್ಲಿ ನಡೆಯಲಿರುವ ಪಕ್ಷದ ರಾಜ್ಯ ಕಾರ್ಯಕಾರಿ ಸಮಿತಿ ವಿಶೇಷ ಸಭೆಯ ಅಧ್ಯಕ್ಷತೆಯನ್ನು ನಡ್ಡಾ ವಹಿಸಲಿದ್ದಾರೆ. ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಪಕ್ಷದ ಮಾರ್ಗಸೂಚಿಯ ಬಗ್ಗೆ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚರ್ಚಿಸಲಿದ್ದಾರೆ.

ನಡ್ಡಾ ಅವರು ಪಕ್ಷ ಸಂಘಟನೆಯನ್ನು ಬಲಪಡಿಸಲು ಮತ್ತು ಪಕ್ಷದ ಕಾರ್ಯಕರ್ತರನ್ನು ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ರಾಜ್ಯ ನಾಯಕರಿಗೆ ಮಾರ್ಗದರ್ಶನ ನೀಡಲಿದ್ದಾರೆ.

ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ಗೆದ್ದು ಬಿಜೆಪಿ ಬೀಗುತ್ತಿದೆ. ಪಕ್ಷದ ಬಹುತೇಕ ನಾಯಕರು ಮತ್ತು ಕಾರ್ಯಕರ್ತರು ಚುನಾವಣೆಗಾಗಿ ಉತ್ಸುಕರಾಗಿದ್ದಾರೆ. ಅನುಕೂಲಕರ ಪರಿಸ್ಥಿತಿಯ ಲಾ ಪಡೆಯಲು ಸಿದ್ಧರಾಗಿದ್ದಾರೆ ಎಂದು ತಿಳಿದು ಬಂದಿದೆ.

ಕಳೆದ ಒಂದು ತಿಂಗಳಿಂದ ಹಿಜಾಬ್ ವಿಷಯದೊಂದಿಗೆ ವಿರೋಧ ಪಕ್ಷಕಾಂಗ್ರೆಸ್ ಜೊತೆ ಬಿಜೆಪಿ ಸಂಘರ್ಷ ನಡೆಸುತ್ತಿದೆ, ಇದರೊಂದಿಗೆ ಜನತೆಯ ನಾಡಿ ಮಿಡಿತವನ್ನು ಅರ್ಥ ಮಾಡಿಕೊಂಡಿದೆ. ಹೀಗಾಗಿ ಪಠ್ಯದಲ್ಲಿ ಭಗವದ್ಗೀತೆ ಅಳವಡಿಸುವುದು ಸೇರಿದಂತೆ ಹಲವು ಸೂಕ್ಷ್ಮ ವಿಷಯಗಳಲ್ಲಿ ಜನರ ಭಾವನೆ ಅರ್ಥ ಮಾಡಿಕೊಂಡಿದೆ. ಮೂರ್ನಾಲ್ಕು ತಂಡಗಳಾಗಿ ರಾಜ್ಯದಲ್ಲಿ ಬಿಜೆಪಿ ನಾಯಕರು ಪ್ರವಾಸ ಮಾಡಲಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಇಮ್ರಾನ್​ ಖಾನ್ ಸೋತರೆ ಏನಾಗಬಹುದು? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಪಾಕ್​ ಸಚಿವ​!

Sun Apr 3 , 2022
  ಇಸ್ಲಮಾಬಾದ್​: ಇಂದು ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ನಡೆಯುತ್ತಿರುವ ಅವಿಶ್ವಾಸ ನಿರ್ಣಯದಲ್ಲಿ ಸೋತರೆ ಪ್ರಧಾನಿ ಇಮ್ರಾನ್​ ಖಾನ್​ ಅಧಿಕಾರದಿಂದ ಕೆಳಗೆ ಇಳಿಯಲಿದ್ದು, ಬಂಧನವಾಗುವ ಸಾಧ್ಯತೆ ಇದೆ ಎಂದು ಪಾಕ್​ ಆಂತರಿಕ ಸಚಿವ ಶೇಖ್​ ರಶೀದ್​ ಅಹ್ಮದ್​ ಭಾನುವಾರ ತಿಳಿಸಿದ್ದಾರೆ. ಇಂಡಿಯಾ ಟುಡೆ ಜತೆ ಮಾತನಾಡಿರುವ ಸಚಿವ ಶೇಖ್​ ರಶೀದ್ ಅಹ್ಮದ್​, ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷದ ನೇತೃತ್ವದ ಆಡಳಿತಾರೂಢ ಒಕ್ಕೂಟದ 155 ಸದಸ್ಯರು ಅವಿಶ್ವಾಸ ನಿರ್ಣಯಕ್ಕೆ ಮುನ್ನ ಸಾಮೂಹಿಕ ರಾಜೀನಾಮೆ […]

Advertisement

Wordpress Social Share Plugin powered by Ultimatelysocial