ಡಿ. 5ರಂದು ಕರ್ನಾಟಕ ಬಂದ್

ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಖಂಡಿಸಿ ಡಿಸೆಂಬರ್ 5 ಕರ್ನಾಟಕ ಬಂದ್ಗೆ ಕರೆ ಕೊಟ್ಟಿರುವ ಹಿನ್ನೆಲೆ, ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ಗೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ವಿಶೇಷ ಸೂಚನೆ ನೀಡಿದ್ದಾರೆ. ಡಿಸೆಂಬರ್ 4 ರ ಮಧ್ಯರಾತ್ರಿಯಿಂದಲೇ ನಗರದಾದ್ಯಂತ ಬಿಗಿ ಪೊಲೀಸ್ ಭದ್ರತೆ ಇದ್ದು, ಡಿಸೆಂಬರ್ 5ರ ಬೆಳಗ್ಗೆ 4:30ರಿಂದ ಹೊಯ್ಸಳ ಪೊಲೀಸ್ ಸಿಬ್ಬಂದಿ ಗಸ್ತು ತಿರುಗಲಿದ್ದಾರೆ. ವಿಶೇಷವಾಗಿ ಕೆಎಸ್ಆರ್ಟಿಸಿ, ಬಿಎಂಟಿಸಿ, ಮೆಟ್ರೋ ನಿಲ್ದಾಣಗಳಲ್ಲಿ ಬಿಗಿ ಭದ್ರತೆ ಇರುತ್ತದೆ. ಬಂದ್ ಹಿನ್ನೆಲೆ ಕೂಡ ಸೂಕ್ತ ಬಂದೋಬಸ್ತ್ ಮಾಡಲಾಗುತ್ತದೆ. ಮುಷ್ಕರ ತಿಳಿಯಾಗುವವರೆಗೂ ಗರಿಷ್ಠ ಪೊಲೀಸ್ ನಿಯೋಜನೆ ಕಡ್ಡಾಯ, ಅಧಿಕಾರಿಗಳು ಹೆಲ್ಮೆಟ್, ರಿವಾಲ್ವರ್, ವಾಕಿಟಾಕಿಯೊಂದಿಗೆ ಕರ್ತವ್ಯ ನಿರ್ವಹಿಸಬೇಕು, ಭದ್ರತಾ ಮೇಲ್ವಿಚಾರಣೆಯನ್ನ ಡಿಸಿಪಿಗಳು ನಿರ್ವಹಿಸಬೇಕು, ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು, ಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟುನಿಟ್ಟಾಗಿ ಭದ್ರತಾ ಕ್ರಮ ಕೈಗೊಳ್ಳತಕ್ಕದ್ದು, ಸಂಚಾರ ಪೊಲೀಸರು ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸತಕ್ಕದ್ದು, ಸಿಎಂ, ಸಚಿವರ ನಿವಾಸಗಳ ಬಳಿ ಹೆಚ್ಚಿನ ಭದ್ರತೆ ವಹಿಸತಕ್ಕದ್ದು, ಕೆಎಸ್ಆರ್ಪಿ ತುಕಡಿಗಳ ನಿಯೋಜನೆ ಮಾಡಬೇಕೆಂದು ಆದೇಶದಲ್ಲಿ ತಿಳಿಸಿದ್ದಾರೆ.

ಇದನ್ನು ಓದಿ:ಸಂಪೂರ್ಣ ಹದಗೆಟ್ಟಿರುವ ಆದರಹಳ್ಳಿ ರಸ್ತೆ

Please follow and like us:

Leave a Reply

Your email address will not be published. Required fields are marked *

Next Post

ಬೆಂಗಳೂರಿನಲ್ಲಿ ಬೆಳಂ ಬೆಳಗ್ಗೆ ಜಟಿಜಟಿ ಮಳೆ

Thu Dec 3 , 2020
ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಮಳೆಯ ಸಿಂಚನವಾಗಿದ್ದು, ನಗರದಲ್ಲಿ ಇಂದು ಮುಂಜಾನೆಯಿಂದ ತುಂತುರು ಮಳೆಯಾಗಿದೆ. ತಮಿಳುನಾಡನ್ನು ಇಂದು ಪ್ರವೇಶಿಸಲಿರುವ ಬುರೇವಿ ಚಂಡಮಾರುತದ ಪರಿಣಾಮದಿಂದ ಬೆಂಗಳೂರಿನಲ್ಲಿ ಮಳೆಯ ಆಗಮನವಾಗಿದೆ.ಇನ್ನೂ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಇದೇ ರೀತಿ ಮಳೆ ಸುರಿಯುವ ಸಾಧ್ಯತೆಯಿದೆ. ಇಂದು ಮಧ್ಯಾಹ್ನ ತಮಿಳುನಾಡಿಗೆ ಬುರೇವಿ ಚಂಡಮಾರುತ ಪ್ರವೇಶ ಮಾಡುವುದರಿಂದ ಬೆಂಗಳೂರಿನಲ್ಲಿ ಸಂಜೆಯ ಬಳಿಕ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಬೆಂಗಳೂರಿನ ಕೆಲವು ಭಾಗಗಳಲ್ಲಿ ಮಾತ್ರ ಮಳೆಯಾಗಲಿದ್ದು, ಉಳಿದೆಡೆ ಮೋಡ ಕವಿದ ವಾತಾವರಣ […]

Advertisement

Wordpress Social Share Plugin powered by Ultimatelysocial