ಶಿವಸೇನಾ ಕಾರ್ಯಕರ್ತರು ಕನ್ನಡ ಬಾವುಟವನ್ನು ಸುಟ್ಟಿರುವುದನ್ನು ಖಂಡಿಸಿ :ಕರವೇ ಪ್ರವೀಣ್ ಶೇಟ್ಟಿ ಬಣ ಪ್ರತಿಭಟನೆ

ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಶಿವಸೇನಾ ಕಾರ್ಯಕರ್ತರು ಕನ್ನಡ ಬಾವುಟವನ್ನು ಸುಟ್ಟು ಹಾಕಿರುವ ಘಟನೆಯನ್ನು ಖಂಡಿಸಿ ಲಕ್ಷ್ಮೇಶ್ವರ ಪಟ್ಟಣದಲ್ಲಿ ಕರವೇ ಪ್ರವೀಣ್ ಶೇಟ್ಟಿ ಬಣ ಪ್ರತಿಭಟನೆ ಮಾಡಿದರು, ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ. ‘ನಮ್ಮ ಕರುನಾಡ ಧ್ವಜ ಸುಟ್ಟ ಹೇಡಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು’ ಎಂದು ಆಗ್ರಹಿಸಿದ್ದಾರೆ.ಲಕ್ಷ್ಮೇಶ್ವರ ಪಟ್ಟಣದ ಹಾವಳಿ ಹನಮಂತ ದೇವಸ್ಥಾನದಿಂದ ಶಿಗ್ಲಿ ನಾಕಾವರೆಗೂ ಪಂಜಿನ ಮೆರವಣಿಗೆ ಹಾಗೂ ಮಹಾರಾಷ್ಟ್ರ ಮುಖಮಂತ್ರಿ ಉದ್ದತ ಠಾಕ್ರೆ ವೇಶದ ಸ್ಟಾಚು ಸುಡುವ ಮೂಲಕ ಕರವೇ ಪ್ರವೀಣ್ ಶೇಟ್ಟಿ ಬಣ ಆಕ್ರೋಶ ವ್ಯಕ್ತಪಡಿಸಿದರು.

ನಂತರ ಮಾತನಾಡಿದ ತಾಲೂಕ ಅಧ್ಯಕ್ಷ ಮಹೇಶ ಕಲಕಟಗಿ ನಮ್ಮ ನಾಡ ಧ್ವಜ ಸುಟ್ಟವರಿಗೆ ತಕ್ಕ ಶಿಕ್ಷೆ ಆಗಲಿ. ನಿಜವಾದ ಕನ್ನಡಪರ ಹೋರಾಟಗಾರರನ್ನು ಬಿಡುಗಡೆಗೊಳಿಸಬೇಕು ಅವರು ಸುಟ್ಟಿದ್ದು ಧ್ವಜವಲ್ಲ, ಕನ್ನಡಿಗರ ಸ್ವಾಭಿಮಾನದ ಕಿಚ್ಚು. ಭುವನೇಶ್ವರಿಯ ಮುಕುಟ ಎಂದೂ ಮುಕ್ಕಾಗದು. ಕಿಡಿಗೇಡಿಗಳಿಗೆ ತಕ್ಕ ಶಿಕ್ಷೆ ಆಗಲೇಬೇಕು. ನಾಡು, ನುಡಿ, ಭಾಷೆ ನಮ್ಮ ಉಸಿರಾಟದ ಒಂದು ಭಾಗ. ಕನ್ನಡಕ್ಕೆ ಮಾಡಿದ ಅವಮಾನವನ್ನು ಕನ್ನಡಾಂಬೆಯ ಮಕ್ಕಳಾಗಿ ನಾವ್ಯಾರು ಸಹಿಸೆವು. ನಾಡಧ್ವಜ ಸುಟ್ಟ ದ್ರೋಹಿಗಳನ್ನು ಬಂಧಿಸಿ ನಮ್ಮ ಕನ್ನಡಪರ ಹೋರಾಟಗಾರರನ್ನು ಬಿಡುಗಡೆಗೊಳಿ, ಎಂದರಲ್ಲದೇ ಘಟನೆ ಅತ್ಯಂತ ಹೇಯ. ಧ್ವಜವನ್ನು ಸುಟ್ಟು ವಿಕೃತಿ ಮೆರೆದಿರುವುದು ನೀಚ ಕೃತ್ಯ. ಅಖಂಡ ಕರ್ನಾಟಕದ ಆಸ್ಮಿತೆ ಸಾರುವ ನಮ್ಮ ಧ್ವಜದ ವಿಚಾರದಲ್ಲಿ ಆಗಿರುವ ಅಪಚಾರ ಕ್ಷಮಾರ್ಹವಲ್ಲ. ಬಹುಭಾಷಾ ಪ್ರೇಮ, ಸಾಮರಸ್ಯ ಕನ್ನಡಿಗರ ದೌರ್ಬಲ್ಯವಲ್ಲ, ಔದಾರ್ಯ. ಇದನ್ನು ಕಿಡಿಗೇಡಿಗಳು ಅರ್ಥ ಮಾಡಿಕೊಳ್ಳಬೇಕಿತ್ತು. ಈ ಪರಮ ಕಿರಾತಕ ಕೃತ್ಯದ ವಿರುದ್ಧ ರಾಜ್ಯ ಸರಕಾರ ಅತ್ಯಂತ ಕಠಿಣವಾಗಿ ವರ್ತಿಸಬೇಕು. ನಮ್ಮ ಧ್ವಜವನ್ನು ಅಪಮಾನಿಸಿದ ಕನ್ನಡ ದ್ರೋಹಿಗಳಿಗೆ ತಕ್ಕಶಾಸ್ತಿ ಮಾಡಬೇಕು. ಕನ್ನಡ ದ್ರೋಹಿಗಳನ್ನು ಹಾಗೆಯೇ ಬಿಟ್ಟರೆ ಕರ್ನಾಟಕ ನಿಮ್ಮನ್ನು ಕ್ಷಮಿಸುವುದಿಲ್ಲ. ತಕ್ಷಣವೇ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಕ್ರಮ ವಹಿಸಬೇಕು ಹಾಗೂ ಕನ್ನಡಕ್ಕಾಗಿ ಹೋರಾಡಿದವರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂಬುದು ನಮ್ಮ ಆಗ್ರಹ ಎಂದು ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಕರಡಿಯನ್ನು ಕೊಂದು ಮಾಂಸ ತಿಂದ ಆರೋಪಿಗಳು ಅಂದರ್

Sat Dec 18 , 2021
ಕೊರಟಗೆರೆ:- ಕೊರೊನಾ ಮತ್ತು ಪಾಶ್ಚುವಾರ್ಯ ರೋಗ ಬರೋದಿಲ್ಲ ಎಂಬ ಅನಾಮಿಕ ವ್ಯಕ್ತಿಯ ಮೂಢನಂಬಿಕೆಯ ಮಾತಿನಿಂದ ಅರಣ್ಯದಲ್ಲಿ ವಾಸಿಸುತ್ತೀದ್ದ ಕರಡಿಯನ್ನು ಸೆರೆಹಿಡಿದು ಸಾಯಿಸಿ ದೇಹವನ್ನು ಬೇಟ್ಟದ ಮೇಲೆ ಕತ್ತರಿಸಿ ಮಾಂಸವನ್ನಾಗಿ ಪರಿವರ್ತಿಸಿ ಸೇವಿಸಿರುವ ಘಟನೆ ಕೊರಟಗೆರೆ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ನಡೆದಿದೆ.ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಸಿದ್ದರಬೇಟ್ಟ ಗ್ರಾಪಂ ವ್ಯಾಪ್ತಿಯ ಗೌಜಗಲ್ಲು ಗ್ರಾಮದ ಚಿಕ್ಕಬಸವಯ್ಯ ಎಂಬುವರ ಮನೆಯ ಮೇಲೆ ಕೊರಟಗೆರೆ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಸುರೇಶ್ ನೇತೃತ್ವದ ತಂಡ ಖಚಿತ […]

Advertisement

Wordpress Social Share Plugin powered by Ultimatelysocial