ಕನ್ನಡ ಬಾವುಟಕ್ಕೆ ಬೆಂಕಿ ಇಟ್ಟವರಿಗೆ ಸೂಕ್ತ ಶಿಕ್ಷೆಯಾಗಬೇಕು:ನಟಿ ಹರಿಪ್ರಿಯಾ ಆಗ್ರಹ

ಮಹಾರಾಷ್ಟ್ರದಲ್ಲಿ ಕೆಲ ಕಿಡಗೇಡಿಗಳು ಕನ್ನಡ ಬಾವುಟಕ್ಕೆ ಬೆಂಕಿ ಇಟ್ಟಿರುವುದಕ್ಕೆ ಕನ್ನಡ ಚಿತ್ರರಂಗದ ಅನೇಕ ಕಲಾವಿದರು ತೀವ್ರ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.ಈ ಬಗ್ಗೆ ನಟಿ ಹರಿಪ್ರಿಯಾ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದು, ‘ಕನ್ನಡ ಬಾವುಟಕ್ಕೆ ಬೆಂಕಿ ಇಟ್ಟವರಿಗೆ ಸೂಕ್ತ ಶಿಕ್ಷೆಯಾಗಬೇಕು’ ಎಂದು ಆಗ್ರಹಿಸಿದ್ದಾರೆ.ಈ ಕುರಿತು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿರುವ ಅವರು, ‘ದ್ವೇಷದ ಬೆಂಕಿ ಆರಲಿ.. ಕನ್ನಡದ ಬಾವುಟ ಹಾರಲಿ. ಕನ್ನಡ ಬಾವುಟಕ್ಕೆ ಬೆಂಕಿ ಇಟ್ಟವರಿಗೆ ಸೂಕ್ತ ಶಿಕ್ಷೆಯಾಗಬೇಕು’ ಎಂದು ಒತ್ತಾಯಿಸಿ, ರಾರಾಜಿಸುತ್ತಿರುವ ಕನ್ನಡ ಭಾವುಟದ ವಿಡಿಯೊ ಹಂಚಿಕೊಂಡಿದ್ದಾರೆ.ಇನ್ನು ಹುಬ್ಬಳ್ಳಿಯಲ್ಲಿ ಮಾತನಾಡಿರುವ ನಟ ಪ್ರೇಮ್ ಅವರು, ‘ರಾಜ್ಯದಲ್ಲಿ ಕನ್ನಡಿಗರು ಮತ್ತು ಮರಾಠಿಗರು ಪ್ರೀತಿ, ವಿಶ್ವಾಸದಿಂದ ಇದ್ದಾರೆ. ಅದನ್ನು ಹಾಳು ಮಾಡುವ ಕೆಲಸಕ್ಕೆ ಎಂಇಎಸ್ ಕೈ ಹಾಕಬಾರದು. ರಾಜ್ಯದಲ್ಲಿ ಮರಾಠಿ ಮತ್ತು ಹಿಂದಿ ಚಿತ್ರಗಳಿಗೂ ಅವಕಾಶ ನೀಡಲಾಗಿದೆ. ಇವುಗಳನ್ನು ಎಂಇಎಸ್ ಅರ್ಥ ಮಾಡಿಕೊಳ್ಳಬೇಕು. ಬಾವುಟ ಸುಟ್ಟವರಿಗೆ ಶಿಕ್ಷೆಯಾಗಬೇಕು’ ಎಂದಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಚಾಮರಾಜನಗರದ ಪಚ್ಚಪ್ಪ ಸರ್ಕಲ್ ಬಳಿ ಗಡಿ ನಾಡು ಕನ್ನಡ ರಕ್ಷಣೆ ವೇದಿಕೆ ವತಿಯಿಂದ ಪ್ರತಿಭಟನೆ

Sun Dec 19 , 2021
ಚಾಮರಾಜನಗರದ ಪಚ್ಚಪ್ಪ ಸರ್ಕಲ್ ಬಳಿ ಗಡಿ ನಾಡು ಕನ್ನಡ ರಕ್ಷಣೆ ವೇದಿಕೆ ವತಿಯಿಂದ ಪ್ರತಿಭಟನೆ ಮಾಡಲಾಯಿತು..ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಕನ್ನಡಧ್ವಜ ಸುಟ್ಟ, ಬೆಳಗಾವಿಯಲ್ಲಿ ಕಲ್ಲು ತೂರಾಟ, ಮಹಾರಾಷ್ಟ್ರದಲ್ಲಿ ಕನ್ನಡಿಗರು, ಅವರ ವಾಹನಗಳ ಮೇಲೆ ಶಿವಸೇನೆ ಹಾಗೂ ಎಂಇಎಸ್‌ ಕಾರ್ಯಕರ್ತರು ದಾಳಿ ನಡೆಸಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿದರು.ಶಿವಸೇನೆ ಹಾಗೂ ಎಂಇಎಸ್‌ ಸಂಘಟನೆ ನಿಷೇಧಿಸಬೇಕು, ಕನ್ನಡ ಧ್ವಜ ಸುಟ್ಟವರು, ಕನ್ನಡಿಗರ ಮೇಲೆ ದಾಳಿ ನಡೆಸಿದವರನ್ನು ಶಿಕ್ಷಿಸಬೇಕು ಎಂದು ಆಗ್ರಹಿಸಿದರು…ಕೆಲ ಕಾಲ ರಸ್ತೆ ತಡೆ ನಡೆಸಿ, […]

Advertisement

Wordpress Social Share Plugin powered by Ultimatelysocial