ಎಂಇಎಸ್ ವಿರುದ್ಧ  ಸಿಡಿದೆದ್ದ ಕನ್ನಡಪರ ಸಂಘಟನೆಗಳು:ಬೆಂಗಳೂರಿನಿಂದ ಬೆಳಗಾವಿ ಚಲೋ

ರಾಜ್ಯದಲ್ಲಿ ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ವಿರೂಪಗೊಳಿಸಿದಂತ ಎಂಇಎಸ್ ವಿರುದ್ಧ ಕನ್ನಡಪರ ಸಂಘಟನೆಗಳು ಸಿಡಿದೆದ್ದಿವೆ. ಬೆಂಗಳೂರಿನಿಂದ ಬೆಳಗಾವಿ ಚಲೋಗೆ ಚಾಲನೆ ನೀಡಲಾಗಿದ್ದು, ನಾಳೆ ಬೆಳಿಗ್ಗೆ ಸುವರ್ಣ ಸೌಧಕ್ಕೆ ಎಂಇಎಸ್ ಸಂಘಟನೆ ನಿಷೇಧಿಸುವಂತೆ ಮುತ್ತಿಗೆ ಕೂಡ ಹಾಕಲಿದ್ದಾವೆ.ಇಂದು ನಗರದಲ್ಲಿನ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ, ಕನ್ನಡಪರ ಸಂಘಟನೆಯ ಪ್ರವೀಣ್ ಶೆಟ್ಟಿ, ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗಾರಾಜ್ ಸೇರಿದಂತೆ ಅನೇಕರು ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟವನ್ನು ಖಂಡಿಸಿದರು. ಅಲ್ಲದೇ ಎಂಇಎಸ್ ಸಂಘಟನೆಯನ್ನು ನಿಷೇಧಿಸುವಂತೆಯೂ ಆಗ್ರಹಿಸಿದರು.ಈ ವೇಳೆ ಮಾತನಾಡಿದಂತ ವಾಟಾಳ್ ನಾಗರಾಜ್, ಎಂಇಎಸ್ ಸಂಘಟನೆಯನ್ನು ನಿಷೇಧಿಸಬೇಕು. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವಂತ ಚಳಿಗಾಲದ ಅಧಿವೇಶನದಲ್ಲಿ ನಿರ್ಧಾರ ಕೈಗೊಳ್ಳಬೇಕು. 2 ದಿನಗಳಲ್ಲಿ ಈ ನಿರ್ಧಾರವನ್ನು ಪ್ರಕಟಿಸಬೇಕು. ಇಂದು ಶಿವಾಜಿ ಪ್ರತಿಮೆಗೆ ಮಸಿಬಳಿದ ಕಾರಣದಿಂದ ಬಂಧಿಸಿರುವಂತ ಕನ್ನಡಪರ ಹೋರಾಟಗಾರರನ್ನು ಬಿಡುಗಡೆ ಮಾಡಬೇಕು. ಇಲ್ಲವಾದಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸೋದಾಗಿ ತಿಳಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕತ್ತಲಾದ ಮೇಲೆ ಕಳ್ಳರಂತೆ ನುಸುಳಿ ವಾಹನಗಳಿಗೆ ಕಲ್ಲು ಹೊಡೆಯುವುದು ಹೇಡಿತನ:ಹೆಚ್.ಡಿ ಕುಮಾರಸ್ವಾಮಿ

Sun Dec 19 , 2021
  ಕತ್ತಲಾದ ಮೇಲೆ ಕಳ್ಳರಂತೆ ನುಸುಳಿ ವಾಹನಗಳಿಗೆ ಕಲ್ಲು ಹೊಡೆಯುವುದು ಹೇಡಿತನ. ಮಹಾನ್ ರಾಷ್ಟ್ರಪ್ರೇಮಿ, ಕೆಚ್ಚದೆಯ ವೀರರಾದ ರಾಯಣ್ಣ ಅವರ ಪ್ರತಿಮೆಗೆ ಹಾನಿ ಮಾಡಿದ್ದು ನಿಜವಾದ ವಿಕೃತ. ಮಹಾರಾಷ್ಟ್ರ ಮುಖ್ಯಮಂತ್ರಿಗಳು ಇದನ್ನೆಲ್ಲ ಸಮರ್ಥನೆ ಮಾಡಿಕೊಳ್ಳುತ್ತಿರುವುದು ವಿಪರ್ಯಾಸ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮಹಾ ಸಿಎಂ ವಿರುದ್ಧ ಕಿಡಿಕಾರಿದ್ದಾರೆ.ಈ ಕುರಿತಂತೆ ಸರಣಿ ಟ್ವಿಟ್ ಮಾಡಿರುವಂತ ಅವರು, ಬೆಳಗಾವಿಯಲ್ಲಿ ಬೇರೆಯವರು ಬೇಳೆ ಬೇಯಿಸಿಕೊಳ್ಳುವುದು ಬೇಡ. ನಮ್ಮ ಹೆಮ್ಮೆಯ ಕಲಿ ಸಂಗೊಳ್ಳಿ […]

Advertisement

Wordpress Social Share Plugin powered by Ultimatelysocial