ಕರುನಾಡಿಗೆ ಕಾಡ್ಗಿಚ್ಚು ಆತಂಕ.

 

ಬೇಸಿಗೆ ಬಿರುಸುಗೊಳ್ಳುತ್ತಿದ್ದು ಬಿಸಿಲಿನ ತಾಪಕ್ಕೆ ಕಾಡ್ಗಿಚ್ಚಿನ ಆತಂಕ ಶುರುವಾಗಿದೆ. ಕಳೆದ 15 ದಿನಗಳಿಂದೀಚೆಗೆ ಮೈಸೂರು, ದಕ್ಷಿಣ ಕನ್ನಡ, ಕೊಡಗು, ಗದಗ, ಶಿವಮೊಗ್ಗ, ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಕಾಡ್ಗಿಚ್ಚು ಕಾಣಿಸಿ ಕೊಂಡಿದೆ.ಅರಣ್ಯ ಇಲಾಖೆಯ ಕಟ್ಟೆಚ್ಚರದ ನಡುವೆಯೂ ಅರಣ್ಯಕ್ಕೆ ಸಂಕಷ್ಟ ಎದುರಾಗಿದ್ದು, ಬೆಂಕಿ ನಂದಿಸಲು ಅತ್ಯಾಧುನಿಕ ಸಾಮಗ್ರಿಗಳ ಕೊರತೆ ಜತೆಗೆ, ಇಲಾಖೆ ಸಿಬ್ಬಂದಿ ಜೀವ ಕಳೆದುಕೊಳ್ಳುವಂತಾಗಿದೆ.ದಿನೇದಿನೆ ತಾಪಮಾನದಲ್ಲಿ ಏರಿಕೆ ಕಂಡುಬರುತ್ತಿದ್ದು ಮಾರ್ಚ್ ಮೊದಲ ವಾರದಲ್ಲೇ ಉಷ್ಣಾಂಶವು ಗರಿಷ್ಠ 36-38 ಡಿಗ್ರಿವರೆಗೆ ತಲುಪಿದೆ. ಬಿಸಿ ಗಾಳಿ, ಬಿಸಿಲಿನ ಹೊಡೆತಕ್ಕೆ ಹಚ್ಚ ಹಸಿರಿನ ಕಾಡುಗಳಲ್ಲೂ ಎಲೆಗಳು ಉದುರುತ್ತಿವೆ. ಆಕಸ್ಮಿಕ ಅಥವಾ ಕಿಡಿಗೇಡಿಗಳ ಕೃತ್ಯದಿಂದಲೋ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದೆ. ಆದರೆ, ಕಾಡ್ಗಿಚ್ಚು ನಂದಿಸಲು ಅರಣ್ಯ ಇಲಾಖೆ ಸರ್ವಸನ್ನದ್ಧವಾಗದೆ ಜೀವ ಸಂಕುಲ ಮತ್ತು ಅಪಾರ ಪ್ರಮಾಣದ ಸಸ್ಯಸಂಪತ್ತು ನಾಶವಾಗುತ್ತಿದೆ.ರಾಜ್ಯವು ಪ್ರಸ್ತುತ 30 ಲಕ್ಷಕ್ಕೂ ಅಧಿಕ ಹೆಕ್ಟೇರ್ ಅರಣ್ಯ ಹೊಂದಿದೆ. ಪ್ರತಿವರ್ಷವೂ ನಾನಾ ಕಾರಣಗಳಿಂದ ಅರಣ್ಯ ಪ್ರದೇಶದ ವಿಸ್ತೀರ್ಣ ಕಡಿಮೆಯಾಗುತ್ತಿದೆ. ಅಕ್ರಮವಾಗಿ ಮರಗಳ ಕಡಿತಲೆ ಒಂದೆಡೆಯಾದರೆ, ಬೆಂಕಿ ಬಿದ್ದು ನೂರಾರು ಹೆಕ್ಟೇರ್ ಅರಣ್ಯದಲ್ಲಿನ ಗಿಡಮರಗಳು ಸುಟ್ಟು ಕರಕಲಾಗುತ್ತಿರುವುದು ಮತ್ತೊಂದೆಡೆ. ಬೆಂಕಿಯ ರುದ್ರ ನರ್ತನದಿಂದ ಪರಿಸರ ಅಸಮತೋಲನ ಉಂಟಾಗುತ್ತಿದೆ.ಕಾಡ್ಗಿಚ್ಚು ತಪ್ಪಿಸಲು ಅರಣ್ಯ ಇಲಾಖೆ ಕಾಡಿನ ರಸ್ತೆ ಬದಿ ಎಲೆ ತೆರವುಗೊಳಿಸಿ, ಕಂದಕ ನಿರ್ವಿುಸಿ ಸಾರ್ವಜನಿಕರು ಬೆಂಕಿ ಹಚ್ಚುವುದಕ್ಕೆ ಬ್ರೇಕ್ ಹಾಕುತ್ತಿದೆ. ಆದರೆ, ಅರಣ್ಯ ರಕ್ಷಕರಿಗೆ ಶೂ, ಗ್ಲೌಸ್ ಬಿಟ್ಟರೆ ಬೇರೆ ಅತ್ಯಾಧುನಿಕ ಸಾಮಗ್ರಿಗಳನ್ನು ಇಲಾಖೆ ನೀಡುತ್ತಿಲ್ಲ. ಹೀಗಾಗಿ ಜೀವದ ಹಂಗು ತೊರೆದು ಸಿಬ್ಬಂದಿ ಬೆಂಕಿ ನಂದಿಸಬೇಕಿದೆ. ಕಳೆದ ಫೆಬ್ರವರಿಯಲ್ಲಿ ಸಕಲೇಪುರದಲ್ಲಿ ಬೆಂಕಿ ನಂದಿಸುವಾಗ ಅರಣ್ಯ ವೀಕ್ಷಕ ತೀರ್ಥಹಳ್ಳಿಯ ಸುಂದರೇಶ್ ಬಲಿಯಾಗಿದ್ದರೆ, ಹಲವರು ಗಾಯಗೊಂಡಿದ್ದು ಇದಕ್ಕೆ ತಾಜಾ ಉದಾಹರಣೆ.ರಾಜ್ಯದ ಆರೇಳು ಜಿಲ್ಲೆಗಳಲ್ಲಿ ಈಗಾಗಲೇ ವಿಮಾನ ನಿಲ್ದಾಣ ನಿರ್ವಣಗೊಂಡಿದ್ದು, 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ವಿಮಾನ ನಿಲ್ದಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಗೊಂದು ಏರ್​ಪೋರ್ಟ್ ಆಗುವ ಸಾಧ್ಯತೆಗಳಿದ್ದು,ವಿದೇಶಗಳಂತೆ ಫ್ಲೈಟ್ ಅಥವಾ ಹೆಲಿಕಾಪ್ಟರ್​ಗಳ ಮೂಲಕ ಬೆಂಕಿ ನಂದಿಸುವ ಕೆಲಸ ಕರುನಾಡಲ್ಲೂ ಆಗಬೇಕಿದೆ.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕರ್ಕಟ ರಾಶಿ ಭವಿಷ್ಯ.

Mon Mar 6 , 2023
ಇಂದು ನೀವು ಆರಾಮವಾಗಿರುವ ಭಾವನೆ ಹೊಂದಿರುತ್ತೀರಿ ಮತ್ತು ಆನಂದಿಸಲು ಸೂಕ್ತ ಮನೋಭಾವದಲ್ಲಿರುತ್ತೀರಿ. ನಿಮ್ಮ ಹಣವನ್ನು ಸಂಗ್ರಹಿಸಿದಾಗ ಮಾತ್ರ ಹಣ ನಿಮ್ಮ ಕೆಲಸಕ್ಕೆ ಬರುತ್ತದೆ. ಇದನ್ನು ನೀವು ಚೆನ್ನಾಗಿ ಅರ್ಥಮಾಡಿಕೊಳ್ಳಿ ಇಲ್ಲದಿದ್ದರೆ ನೀವು ಮುಂಬರುವ ಸಮಯದಲ್ಲಿ ವಿಷಾದಿಸಬೇಕಾಗುತ್ತದೆ. ನಿಮ್ಮ ಕುಟುಂಬಕ್ಕೆ ಸೂಕ್ತ ಸಮಯ ನೀಡಿ. ನೀವು ಅವರ ಸಲುವಾಗಿ ಕಾಳಜಿ ವಹಿಸುತ್ತೀರೆಂದು ಅವರಿಗೆ ಅರ್ಥವಾಗಲಿ. ಅವರೊಂದಿಗೆ ನಿಮ್ಮ ಗುಣಮಟ್ಟದ ಸಮಯ ಕಳೆಯಿರಿ. ದೂರು ನೀಡಲು ಯಾವುದೇ ಅವಕಾಶ ನೀಡಬೇಡಿ. ನಿಮ್ಮ ಕಣ್ಣುಗಳು […]

Advertisement

Wordpress Social Share Plugin powered by Ultimatelysocial