ನಾಡಪ್ರಭು ಕೆಂಪೇಗೌಡರ 513ನೇ ಜಯಂತಿ :

ಬೆಂಗಳೂರು : ನಾಡಪ್ರಭು ಕೆಂಪೇಗೌಡರ 513ನೇ ಜಯಂತಿ ಆಚರಣೆ ಹಿನ್ನೆಲೆ ಬಿಬಿಎಂಪಿಯ ಕಚೇರಿ ಮುಂಭಾಗದ ಪ್ರತಿಮೆಗೆ ಮಾಲಾರ್ಪಣೆ ಹಾಗೂ ಪುಷ್ಪಾರ್ಪಣೆ ನೆರವೇರಿಸಿದರು.

ರಾಜ್ಯ ಸರ್ಕಾರವು ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಪ್ರತಿ ವರ್ಷ ಜೂನ್ 27 ರಂದು ಆಚರಿಸಲಾಗುತ್ತಿದೆ. ಅದರಂತೆ 513ನೇ ನಾಡ ಪ್ರಭು ಕೆಂಪೇಗೌಡರ ಜಯಂತಿಯ ಅಂಗವಾಗಿ ಬಿಬಿಎಂಪಿಯ ಕೇಂದ್ರ ಕಛೇರಿಯ ಮುಂಭಾಗದಲ್ಲಿರುವ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಹಾಗೂ ಕೆಂಪೇಗೌಡರ ಸೊಸೆ ಮಹಾತ್ಯಾಗಿ ಲಕ್ಷೀದೇವಿ ಪ್ರತಿಮೆಗೆ ಇಂದು ಮಾನ್ಯ ಆಡಳಿತಗಾರರಾದ ರಾಕೇಶ್ ಸಿಂಗ್ ಹಾಗೂ ಮಾನ್ಯ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಮಾಲಾರ್ಪಣೆ ಹಾಗೂ ಪುಷ್ಪಾರ್ಪಣೆ ನೆರವೇರಿಸಿದರು.

ಈ ವೇಳೆ ಬಿ‌.ಎಂ.ಆರ್.ಸಿ.ಎಲ್ ವ್ಯವಸ್ಥಾಪಕ ನಿರ್ದೇಶಕರಾದ ಅಂಜುಂ ಪರ್ವೇಜ್, ಬಿಡಿಎ ಆಯುಕ್ತರಾದ ರಾಜೇಶ್ ಗೌಡ, ಜಲಮಂಡಳಿ ಅಧ್ಯಕ್ಷರಾದ ಜಯರಾಮ್, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕರಾದ ರಾಜೇಂದ್ರ ಚೋಳನ್, ಪಾಲಿಕೆಯ ಎಲ್ಲಾ ವಿಶೇಷ ಆಯುಕ್ತರುಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ವಿಧಾನಪರಿಷತ್ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್,

Mon Jun 27 , 2022
  ಮೈಸೂರು: ವಿಧಾನಪರಿಷತ್ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್, ಆಜಾದಿ ಕಾ ಅಮೃತ ಮಹೋತ್ಸವದಂದು ಪಾದಯಾತ್ರೆ ನಡೆಸಲು ಮುಂದಾಗಿದೆ. ಬಿಜೆಪಿ ಸರ್ಕಾರವು ತನ್ನ ಮುಂದಿನ 25 ವರ್ಷಗಳ ಸಾಧನೆಗಳು ಮತ್ತು ದೂರದೃಷ್ಟಿಯನ್ನು ಪ್ರದರ್ಶಿಸಲು 75 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬಳಸುತ್ತಿದ್ದರೆ, ಕಾಂಗ್ರೆಸ್ ನಾಯಕರು ಪಕ್ಷವನ್ನು ಪುನರುಜ್ಜೀವನಗೊಳಿಸಲು ಬೀದಿಗಿಳಿಯಲು ಸಜ್ಜಾಗಿದ್ದಾರೆ. ಎಲ್ಲಾ ಜಿಲ್ಲೆಗಳಿಂದ 75 ಕಿಲೋಮೀಟರ್ ಪಾದಯಾತ್ರೆ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ. ದೇಶವನ್ನು ಕಟ್ಟಲು ಪಕ್ಷದ ಕೊಡುಗೆಯನ್ನು ಜನರಿಗೆ ತಿಳಿಸಲು ಹಾಗೂ […]

Advertisement

Wordpress Social Share Plugin powered by Ultimatelysocial