Jharkhand CM:ಕೇಂದ್ರದಲ್ಲಿ ‘ರಾವಣ’ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಗುಂಪು ಹತ್ಯೆ ತಡೆ ಕಾನೂನು ತರಬೇಕಾಗಿದೆ;

ರಾಂಚಿ: ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು, ಕೇಂದ್ರದಲ್ಲಿ “ರಾವಣ” ಪಕ್ಷ ಅಧಿಕಾರಕ್ಕೆ ಬಂದ ನಂತರ ನಮ್ಮ ಸರ್ಕಾರವು ಗುಂಪು ಹತ್ಯೆ ತಡೆ ಕಾನೂನನ್ನು ಜಾರಿಗೆ ತರಬೇಕಾಯಿತು ಎಂದು ಸೋಮವಾರ ಹೇಳಿದ್ದಾರೆ.

ಬಿಜೆಪಿ ಒಂದು ಕಡೆ ದೇಶದಲ್ಲಿ ರಾಮರಾಜ್ಯ ತರಲು ಪ್ರಯತ್ನಿಸುತ್ತಿರುವುದಾಗಿ ಹೇಳುತ್ತಿದೆ. ಮತ್ತೊಂದು ಕಡೆ ಭ್ರಷ್ಟಚಾರ ಮತ್ತು “ಅಸಂವಿಧಾನಿಕ” ಗುಂಪು ಹತ್ಯೆ ನಡೆಸುತ್ತಿದೆ ಎಂದು ಜಾರ್ಖಂಡ್ ಸಿಎಂ ಆರೋಪಿಸಿದ್ದಾರೆ.

ಕೇಂದ್ರ ಸರ್ಕಾರ ದೇಶದಲ್ಲಿ ಗುಂಪು ಹತ್ಯೆ ತಡೆ ಕಾನೂನು ತರಬೇಕಿದೆ. ಇದು ಸರ್ಕಾರದ ಪ್ರಮುಖ ಆದ್ಯತೆಯಾಗಬೇಕು. ಆದರೆ ಸಮಾಜದ ಸಾಮರಸ್ಯ ಹಾಳು ಮಾಡುವುದು ಹಾಗೂ ಜನರ ಮಧ್ಯೆ ತಾರತಮ್ಯ ಉಂಟು ಮಾಡುವುದು ಬಿಜೆಪಿಯ ಆದ್ಯತೆಯಾಗಿದೆ. ದೇಶದಲ್ಲಿ ಗುಂಪು ಹತ್ಯೆ ತಂಡೆ ಕಾನೂನು ಅಗತ್ಯವಾಗಿದೆ ಎಂದು ಪುನರುಚ್ಛರಿಸಿದರು.

ಜಾರ್ಖಂಡ್ ಸರ್ಕಾರ ಇತ್ತೀಚೆಗೆ ಮುಕ್ತಾಯಗೊಂಡ ಚಳಿಗಾಲದ ಅಧಿವೇಶನದಲ್ಲಿ ಗುಂಪು ಹಿಂಸಾಚಾರ ಮತ್ತು ಗುಂಪು ಹತ್ಯೆ ತಡೆ ಮಸೂದೆ 2021 ಅನ್ನು ಅಂಗೀಕರಿಸಿದೆ. ಇದು ಸಮಾಜ ವಿರೋಧಿ ಶಕ್ತಿಗಳು ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳುವುದನ್ನು ತಡೆಯುತ್ತದೆ ಎಂದು ಸೊರೆನ್ ಪ್ರತಿಪಾದಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

 

Please follow and like us:

Leave a Reply

Your email address will not be published. Required fields are marked *

Next Post

ಸ್ಯಾಂಡಲ್’ವುಡ್ ಬೆಡಗಿ ದಾವಣಗೆರೆ ಮೂಲದ ಅದಿತಿ ಪ್ರಭುದೇವ ಕೊಡಗಿನ ಸೊಸೆಯಾಗುತ್ತಿದ್ದಾರೆ.

Tue Dec 28 , 2021
ಇತ್ತೀಚೆಗಷ್ಟೇ ಎರಡೂ ಕುಟುಂಬಗಳು ತಾಂಬೂಲ ಬದಲಾಯಿಸಿಕೊಂಡಿದ್ದು, ವಿವಾಹದ ನಿಶ್ಚಿತಾರ್ಥವಾಗಿದೆ.ಸೋಮವಾರಪೇಟೆಯ ಕಾಫಿ ಬೆಳೆಗಾರ ಪಿ.ಡಿ.ಚಂದ್ರಕಾಂತ್ ಹಾಗೂ ಸುಚರಿತಾ ದಂಪತಿಯ ಪುತ್ರ ಯಶಸ್ವಿಯನ್ನು ಅದಿತಿ ವರಿಸಲಿದ್ದಾರೆ. ಯಶಸ್ವಿ ಬೆಂಗಳೂರಿನಲ್ಲಿ ಉದ್ಯಮಿಯಾಗಿದ್ದು, ಕೃಷಿ ಕ್ಷೇತ್ರದ ಕಡೆಗೂ ಒಲವು ಹೊಂದಿದ್ದಾರೆ. ಗ್ರಾಮೀಣ ಭಾಗದ ಸೊಗಡಿನ ಬಗ್ಗೆ ಅತೀವ ಅಭಿಮಾನ ಹೊಂದಿರುವ ಮತ್ತು ಕೃಷಿಕ ಕುಟುಂಬದ ಬಗ್ಗೆ ಆಸಕ್ತಿಯಿದ್ದ ಅದಿತಿ ತಮ್ಮ ನಿರೀಕ್ಷೆಯ ಹುಡುಗನೊಂದಿಗೆ ದಾಂಪತ್ಯ ಜೀವನಕ್ಕೆ ಹೆಜ್ಜೆ ಇಡಲು ನಿರ್ಧರಿಸಿದ್ದಾರೆ. ಈಗಾಗಲೇ ನಿಶ್ಚಿತಾರ್ಥದ ಫೋಟೋಗಳು ವೈರಲ್ […]

Advertisement

Wordpress Social Share Plugin powered by Ultimatelysocial