ಹಲವು ರಾಜ್ಯಗಳಲ್ಲಿ ದರೋಡೆ ಮಾಡಿದ್ದ ಕೇಶವ್ ಗುರ್ಜರ್ ಸೆರೆ.

ಜೈಪುರ, ಜ.31- ಹಲವು ರಾಜ್ಯಗಳ ಪೊಲಿಸರಿಗೆ ಬೇಕಾಗಿದ್ದ ಹಾಗೂ ಲಕ್ಷಗಟ್ಟಲೆ ಬಹುಮಾನ ಘೋಷಿತ ದರೋಡೆಕೋರನನ್ನು ರಾಜಸ್ಥಾನದ ಪೊಲಿಸರು ಗುಂಡಿನ ಚಕಮಕಿಯ ಬಳಿಕ ಬಂಧಿಸಿದ್ದಾರೆ.

ಧೋಲ್ಪುರ ಜಿಲ್ಲೆಯಲ್ಲಿ ಬಂಧಿತ ಕೇಶವ್ ಗುರ್ಜರ್, ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ಸೇರಿ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದಾರೆ.

ಪೊಲೀಸರ ಜೊತೆಗಿನ ಗುಂಡಿನ ಚಕಮಕಿಯಲ್ಲಿ ಆತನ ಕಾಲಿಗೆ ಪೆಟ್ಟಾಗಿದೆ. ಚಿಕಿತ್ಸೆಗಾಗಿ ಆತನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೆಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಸಿಂಗ್ ತಿಳಿಸಿದ್ದಾರೆ.

ಖಚಿತ ಸುಳಿವಿನ ಮೇರೆಗೆ ಪೊಲೀಸರು ಭಾನುವಾರ ತಡರಾತ್ರಿ ಗುರ್ಜರ್ಗಾಗಿ ಕೂಂಬಿಂಗ್ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಸೋಮವಾರ ಬೆಳಗ್ಗೆ ಅವರನ್ನು ಸೋನೆ ಕಾ ಗುರ್ಜಾ ಅರಣ್ಯ ಪ್ರದೇಶದಲ್ಲಿ ಬಂಧಿಸಿದರು.

ಗುರ್ಜರ್ ಹಲವಾರು ರಾಜ್ಯಗಳಲ್ಲಿ ವಾಂಟೆಡ್ ಕ್ರಿಮಿನಲ್ ಆಗಿದ್ದು, ಆತನ ಬಂಧನಕ್ಕೆ 1.15 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು. ಬಂಧಿತನಿಂದ ಶಸ್ತ್ರಾಸ್ತ್ರಗಳು ಮತ್ತು ಜೀವಂತ ಕಾಟ್ರಿಡ್ಜ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿಂಗ್ ಹೇಳಿದ್ದಾರೆ.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಜೆಎನ್‍ಯು ಹಲ್ಲೆ ಖಂಡಿಸಿ ಪ್ರತಿಭಟಿಸಿದವರ ಮೇಲಿನ ಪ್ರಕರಣ ರದ್ದು.

Tue Jan 31 , 2023
ಮುಂಬೈ,ಜ.30- ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಮೇಲಿನ ಹಲ್ಲೆಯನ್ನು ಖಂಡಿಸಿ ಗೇಟ್ವೆ ಆಫ್ ಇಂಡಿಯಾದಲ್ಲಿ ಪ್ರತಿಭಟನೆ ನಡೆಸಿದ್ದ 36 ಜನರ ವಿರುದ್ಧದ ದಾಖಲಿಸಿದ್ದ ಪ್ರಕರಣವನ್ನು ಹಿಂಪಡೆಯಲು ಸ್ಥಳೀಯ ನ್ಯಾಯಾಲಯ ಅನುಮತಿಸಿದೆ. ಆರೋಪಿಗಳು ಯಾವುದೇ ವೈಯಕ್ತಿಕ ಹಿತಾಸಕ್ತಿ ಅಥವಾ ಪ್ರಯೋಜನಗಳಿಲ್ಲದೆ ಆಪಾದಿತ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದ ಪ್ರಸ್ತಾವನೆಯಲ್ಲಿ ತಿಳಿಸಿದ್ದಾರೆ. ಎಸ್‍ಪ್ಲಾನೆಡ್ ನ್ಯಾಯಾಲಯದ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಸ್.ವಿ.ದಿನೋಕರ್ ಪ್ರಕರಣಗಳನ್ನು ಹಿಂಪಡೆಯಲು ಅನುಮತಿಸಿದ್ದಾರೆ. ಜನವರಿಯಲ್ಲಿ ಹೊರಡಿಸಲಾದ […]

Advertisement

Wordpress Social Share Plugin powered by Ultimatelysocial