ಕೊಹ್ಲಿ- ಸಚಿನ್ ದಾಖಲೆ ಮುರಿಯುವ ಸನಿಹದಲ್ಲಿ ರೋಹಿತ್ ಶರ್ಮ

ಅಹಮದಾಬಾದ್: ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ಸೋಲಿನ ಬಳಿಕ ಭಾರತ ತಂಡ ರವಿವಾರದಿಂದ ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಸರಣಿ ಆಡಲಿದೆ. ಮೂರು ಪಂದ್ಯಗಳ ಸರಣಿ ಅಹಮದಾಬಾದ್ ನಲ್ಲಿ ನಡೆಯಲಿದೆ.ಪೂರ್ಣಪ್ರಮಾಣದ ನಾಯಕನಾಗಿ ರೋಹಿತ್ ಶರ್ಮ ಮೊದಲ ಸರಣಿ ಆಡುತ್ತಿದ್ದಾರೆ.ಇದೇ ವೇಳೆ ಭಾರತ ತಂಡ 1000ನೇ ಏಕದಿನ ಪಂದ್ಯವಾಡುತ್ತಿದೆ. ಸಹಸ್ರ ಏಕದಿನ ಪಂದ್ಯವಾಡಿದ ಮೊದಲ ದೇಶ ಎಂಬ ಗರಿಮೆಗೆ ಪಾತ್ರವಾಗಲಿದೆ.ತವರಿನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಹೆಚ್ಚು ರನ್ ಗಳಿಸಿದ ದಾಖಲೆ ವಿರಾಟ್ ಹೆಸರಲ್ಲಿದೆ. 20 ಪಂದ್ಯದಲ್ಲಿ ವಿರಾಟ್ 1239 ರನ್ ಗಳಿಸಿದರೆ, ರೋಹಿತ್ 13 ಪಂದ್ಯಗಳಿಂದ 1040 ರನ್ ಗಳಿಸಿದ್ದಾರೆ ವೆಸ್ಟ್ ಇಂಡೀಸ್ ವಿರುದ್ಧ ಒಟ್ಟು ರನ್ ಗಳಿಸಿದವರ ಪಟ್ಟಿಯಲ್ಲೂ ವಿರಾಟ್ ಕೊಹ್ಲಿ ಮೊದಲ ಸ್ಥಾನದಲ್ಲಿದ್ದಾರೆ. ವಿರಾಟ್ ಕೊಹ್ಲಿ 39 ಪಂದ್ಯಗಳಿಂದ 2235 ರನ್ ಗಳಿಸಿದ್ದು, ಸಚಿನ್ ತೆಂಡೂಲ್ಕರ್ ಅವರು 39 ಪಂದ್ಯಗಳಲ್ಲಿ 1573 ರನ್ ಗಳಿಸಿದ್ದಾರೆ. ರೋಹಿತ್ ಅವರು 33 ಪಂದ್ಯಗಳಲ್ಲಿ 1523 ರನ್ ಗಳಿಸಿದ್ದಾರೆ. ರೋಹಿತ್ ಶರ್ಮಾ ಅವರು ಈ ಸರಣಿಯಲ್ಲಿ ಸಚಿನ್ ತೆಂಡೂಲ್ಕರ್ ದಾಖಲೆ ಮುರಿಯುವುದು ಬಹುತೇಕ ಖಚಿತವಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮೊಹಮ್ಮದ್ ಶಹಜಾದ್ ಮೈದಾನದಲ್ಲಿ ಧೂಮಪಾನ ಮಾಡುತ್ತಿದ್ದರು; ಶಿಕ್ಷೆಯಾಗಿ 'ಡಿಮೆರಿಟ್ ಪಾಯಿಂಟ್'ಗಳನ್ನು ಪಡೆಯುತ್ತದೆ

Sat Feb 5 , 2022
ಅಫ್ಘಾನಿಸ್ತಾನದ ಸ್ಫೋಟಕ ಬ್ಯಾಟರ್ ಮೊಹಮ್ಮದ್ ಶಹಜಾದ್ ಫೆಬ್ರವರಿ 4 ರಂದು ಮೈದಾನದಲ್ಲಿ ನಾಚಿಕೆಗೇಡಿನ ಕೃತ್ಯ ಎಸಗಿರುವುದು ಕಂಡುಬಂದಿದೆ. ಮೈದಾನದಲ್ಲಿ ಅಫ್ಘಾನಿಸ್ತಾನ ಧೂಮಪಾನ ಮಾಡುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನೆಟಿಜನ್‌ಗಳು ಆಟಗಾರನನ್ನು ಟೀಕಿಸುತ್ತಿದ್ದಾರೆ. ಬಾಂಗ್ಲಾದೇಶದ ಶೇರ್ ಇ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ಪ್ರೀಮಿಯರ್ ಲೀಗ್‌ನಲ್ಲಿ (ಬಿಪಿಎಲ್) ಈ ಘಟನೆ ನಡೆದಿದೆ. ಮಿನಿಸ್ಟರ್ ಗ್ರೂಪ್ ಢಾಕಾ ಮತ್ತು ಕೊಮಿಲ್ಲಾ ವಿಕ್ಟೋರಿಯನ್ಸ್ ನಡುವಿನ ಪಂದ್ಯದ […]

Advertisement

Wordpress Social Share Plugin powered by Ultimatelysocial