ಗ್ರಾಮ ಪಂಚಾಯತಿ ಅಧ್ಯಕ್ಷರ ಚುನಾವಣೆ

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಯರಂವಾರಪಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು ರಾಜೀನಾಮೆ ನೀಡಿ ತೆರವಾಗಿದ್ದ ಸ್ಥಾನಕ್ಕೆ ಇಂದು ಚುನಾವಣೆ ನಡೆದಿದ್ದು ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಕಾಂಗ್ರೇಸ್ ಬೆಂಬಲಿತ ವನಿತ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಯರಂವಾರಪಲ್ಲಿ ಗ್ರಾಮ ಪಂಚಾಯತಿಯಲ್ಲಿ ಒಟ್ಟು 16 ಸದಸ್ಯರಿದ್ದು ಕಾಂಗ್ರೇಸ್ ಬೆಂಬಲಿತ 7 ಸದಸ್ಯರು ಹಾಗೂ ಜೆಡಿಎಸ್ ಬೆಂಬಲಿತ 9 ಸದಸ್ಯರಿದ್ದು ಗ್ರಾಮ ಪಂಚಾಯತಿ ಅಧ್ಯಕ್ಷರ ಸ್ಥಾನ ಪರಿಶಿಷ್ಟ ಜಾತಿ ಮೀಸಲಾತಿಯಾಗಿರುವ ಕಾರಣ ಜೆಡಿಎಸ್ ಪಕ್ಷದಲ್ಲಿ ಪರಿಶಿಷ್ಟ ಜಾತಿ ಸದಸ್ಯರು ಇಲ್ಲದ ಕಾರಣ ಕಾಂಗ್ರೇಸ್ ಪಕ್ಷದ ಅಧ್ಯಕ್ಷರಾಗಿದ್ದ ರವಣಮ್ಮ ಅಧ್ಯಕ್ಷರಾಗಿದ್ದರು ಆದರೆ ಕೆಲವು ದಿನಗಳ ಹಿಂದೆ ರವಣಮ್ಮ ರವರು ತಮ್ಮ ಅಧ್ಯಕ್ಷ ಸ್ಥಾನವನ್ನು ಸ್ವಇಚ್ಛೆಯಿಂದ ರಾಜೀನಾಮೆ ನೀಡಿ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆದಿದ್ದು ಕಾಂಗ್ರೇಸ್ ಬೆಂಬಲಿತ ವನಿತ ರವರು ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಜೋಶಿಮಠ ಭೂಕುಸಿತಕ್ಕೆ ಕಾರಣ ಏನು ಗೊತ್ತಾ?

Mon Jan 9 , 2023
ಜೋಶಿಮಠದ ನಿವಾಸಿಗಳು ತಮ್ಮ ಮನೆಗಳು, ರಸ್ತೆಗಳು ಮತ್ತು ಕೃಷಿ ಕ್ಷೇತ್ರಗಳಲ್ಲಿ ಉಂಟಾಗಿರುವ ದೊಡ್ಡ ಬಿರುಕುಗಳಿಂದ ಅತೀವ ಅತಂಕಕ್ಕೀಡಾಗಿದ್ದಾರೆ. ಜೋಶಿಮಠದ ನಿವಾಸಿಗಳು ತಮ್ಮ ಮನೆಗಳು, ರಸ್ತೆಗಳು ಮತ್ತು ಕೃಷಿ ಕ್ಷೇತ್ರಗಳಲ್ಲಿ ಉಂಟಾಗಿರುವ ದೊಡ್ಡ ಬಿರುಕುಗಳಿಂದ ಅತೀವ ಅತಂಕಕ್ಕೀಡಾಗಿದ್ದಾರೆ. ಉತ್ತರಾಖಂಡದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳು ಇದೀಗ ದೈವನಾಡಿನಲ್ಲಿ ಅತೀದೊಡ್ಡ ಪ್ರಮಾಣದದ ಭೀತಿ ಹುಟ್ಟುಹಾಕಿದೆ. ಜನವರಿ 4 ರಂದು, ಉತ್ತರಾಖಂಡದ ಜೋಶಿಮಠದಲ್ಲಿ ವಾಸಿಸುತ್ತಿದ್ದ ಸುಮಾರು 34 ಮನೆಗಳಲ್ಲಿ ಆಳವಾದ ಬಿರುಕುಗಳು ಕಾಣಿಸಿಕೊಂಡಿದ್ದವು. ಇದೀಗ ಕೇವಲ […]

Advertisement

Wordpress Social Share Plugin powered by Ultimatelysocial