ಕೊನೆಗೂ ‘ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್’ ಸ್ವಯಂ ನಿವೃತ್ತಿಗೆ ರಾಜ್ಯ ಸರ್ಕಾರ ಅನುಮೋದನೆ

ಬೆಂಗಳೂರು: ನಗರದ ಮಾಜಿ ಪೊಲೀಸ್ ಆಯುಕ್ತ ಹಾಗೂ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಭಾಸ್ಕರ್ ರಾವ್  ಅವರು ಸ್ವಯಂ ನಿವೃತ್ತಿಗಾಗಿ ಅರ್ಜಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದರು. ಐಪಿಎಸ್ ಅಧಿಕಾರಿಗ ಭಾಸ್ಕರ್ ರಾವ್ ಅವರು ಸಲ್ಲಿಸಿದ್ದಂತ ಸ್ವಯಂ ನಿವೃತ್ತಿಯ ಅರ್ಜಿಗೆ ರಾಜ್ಯ ಸರ್ಕಾರ  ಅನುಮೋದನೆ ಸೂಚಿಸಿದೆ ಎಂಬುದಾಗಿ ತಿಳಿದು ಬಂದಿದೆ.

ಸ್ವಯಂ ನಿವೃತ್ತಿಗೆ ಸರ್ಕಾರ ಒಪ್ಪಿಗೆ ಸೂಚಿಸಿದ ಕಾರಣ, ಭಾಸ್ಕರ್ ರಾವ್ ಅವರು ಡಿಸೆಂಬರ್ 31ರಂದು ಸ್ವಯಂ ನಿವೃತ್ತಿಯಾಗಲಿದ್ದಾರೆ.

2019-20ರ ಅವಧಿಯಲ್ಲಿ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಆಗಿದ್ದಂತ ಐಪಿಎಸ್ ಅಧಿಕಾರಿ, ಆ ಬಳಿಕ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ನೇಮಕ ಗೊಂಡಿದ್ದರು. ಈ ಬಳಿಕ ಐಪಿಎಸ್ ಹುದ್ದೆಗೆ ಸ್ವಯಂ ನಿವೃತ್ತಿ ಹೊಂದುವ ಬಗ್ಗೆ ಸರ್ಕಾರಕ್ಕೆ ಮನವಿ ಮಾಡಿದ್ದರು. ಅವರ ಮನವಿಯನ್ನು ಈಗ ಸರ್ಕಾರ ಒಪ್ಪಿಗೆ ಸೂಚಿಸಿದೆ ಎನ್ನಲಾಗಿದೆ.

ಈ ಬಗ್ಗೆ ಸ್ವತಹ ಭಾಸ್ಕರ್ ರಾವ್ ಅವರೇ ಮಾಹಿತಿ ನೀಡಿದ್ದು, ತಾವು ಸ್ವಯಂ ನಿವೃತ್ತಿಗಾಗಿ ಸಲ್ಲಿಸಿದ್ದಂತ ಅರ್ಜಿಗೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿರೋದಾಗಿ ತಿಳಿಸಿದ್ದಾರೆ. ಹೀಗಾಗಿ ಕೊನೆಗೂ ಎಡಿಜಿಪಿ ಭಾಸ್ಕರ್ ರಾವ್ ಅವರು ಸಲ್ಲಿಸಿದ್ದಂತ ಸ್ವಯಂ ನಿವೃತ್ತಿಗೆ ಸರ್ಕಾರ ಅನುಮೋದಿಸಿದ್ದು, ಡಿಸೆಂಬರ್ 31ಕ್ಕೆ ಐಪಿಎಸ್ ಹುದ್ದೆಯಿಂದ ನಿವೃತ್ತಿಯಾಗಲಿದ್ದಾರೆ.

ಅಂದಹಾಗೇ ಐಪಿಎಸ್ ಹುದ್ದೆಯಿಂದ ಸ್ವಯಂ ನಿವೃತ್ತಿಯನ್ನು ಹೊಂದಲಿರುವಂತ ಭಾಸ್ಕರ್ ರಾವ್ ಅವರು, ರಾಜಕೀಯ ಪ್ರವೇಶಿಸಲಿದ್ದಾರೆ ಎನ್ನಲಾಗುತ್ತಿದೆ. ಆ ಬಗ್ಗೆ ಖಚಿತ ಮಾಹಿತಿ ಮುಂದಿನ ದಿನಗಳಲ್ಲಿ ತಿಳಿಯಬೇಕಿದೆ.

Please follow and like us:

Leave a Reply

Your email address will not be published. Required fields are marked *

Next Post

ISHA PANT:ಅಪರಾಧಿಗಳೊಂದಿಗೆ ಸಂಪರ್ಕ ಇಟ್ಟುಕೊಂಡರೆ ಕ್ರಮ;

Wed Dec 29 , 2021
ಚಿತ್ತಾಪುರ: ‘ಕಾನೂನು ಬಾಹಿರ ಚಟುವಟಿಕೆ ಮತ್ತು ಅಪರಾಧ ಕೃತ್ಯ ಎಸಗುವವರೊಂದಿಗೆ ಸಂಪರ್ಕ ಇರುವ ಪೊಲೀಸ್ ಸಿಬ್ಬಂದಿ ವಿರುದ್ದ ಮುಲಾಜಿಲ್ಲದೆ ಶಿಸ್ತು ಕ್ರಮ ಕೈಗೊಳ್ಳುತ್ತೇವೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂತ್ ಹೇಳಿದರು. ತಾಲ್ಲೂಕಿನ ದಂಡೋತಿ ಗ್ರಾಮಕ್ಕೆ ಮಂಗಳವಾರ ಭೇಟಿ ನೀಡಿದ ಸಂದರ್ಭದಲ್ಲಿ ‘‍ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಅವರು, ‘ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಅಪರಾಧ ಹಿನ್ನೆಯಲ್ಲಿರುವ ಹಾಗೂ ಕಾನೂನು ಬಾಹಿರ ಚಟುವಟಿಕೆ ಮತ್ತು ಕೃತ್ಯ ಎಸಗುವವರೊಂದಿಗೆ ಐದಾರು ಜನ ಪೊಲೀಸ್ ಸಿಬ್ಬಂದಿ […]

Advertisement

Wordpress Social Share Plugin powered by Ultimatelysocial