ಕೊರೊನಾ ರೂಪಾಂತರಿ ಓಮಿಕ್ರಾನ್ ಆತಂಕ; ವಿಮಾನ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ ಪ್ರಕಟ…!

ನವದೆಹಲಿ : ಕೊರೊನಾ ರೂಪಾಂತರಿ ಓಮಿಕ್ರಾನ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವು ಮಾರ್ಗಸೂಚಿಗಳನ್ನು ಪ್ರಕಟಿಸುತ್ತಿವೆ. ಸದ್ಯ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ವಿಮಾನ ಪ್ರಯಾಣಿಕರಿಗಾಗಿ ಹೊಸ ಮಾರ್ಗಸೂಚಿ ಪ್ರಕಟಿಸಿದೆ.

ಸದ್ಯ ದೆಹಲಿಗೆ ಪ್ರಯಾಣಿಸುವ ಅಂತಾರಾಷ್ಟ್ರೀಯ ಹಾಗೂ ದೇಶೀಯ ಪ್ರಯಾಣಿಕರಿಗಾಗಿ ಹೊಸ ಮಾರ್ಗಸೂಚಿ ಬಿಡುಗಡೆಯಾಗಿದೆ.
ವಿಮಾನಗಳ ಮೂಲಕ ದೆಹಲಿಗೆ ಬರುವ ಪ್ರಯಾಣಿಕರು ಆರೋಗ್ಯ ಸೇತು ಆಪ್ ನ್ನು ಮೊಬೈಲ್ ನಲ್ಲಿ ಡೌನ್ ಲೋಡ್ ಮಾಡಿಕೊಳ್ಳಬೇಕು. ಎಲ್ಲ ಪ್ರಯಾಣಿಕರ ಮಾದರಿ ಸಂಗ್ರಹಣೆ ಹಾಗೂ ಥರ್ಮಲ್ ಸ್ಕ್ರೀನಿಂಗ್ ನ್ನು ಕಡ್ಡಾಯಗೊಳಿಸಲಾಗಿದೆ.

ಅಲ್ಲದೇ, ಕೊರೊನಾ ಹೆಚ್ಚಾಗಿ ಕಂಡು ಬರುತ್ತಿರುವ ರಾಜ್ಯಗಳಿಂದ ಆಗಮಿಸುವ ಪ್ರಯಾಣಿಕರ ರ್ಯಾಂಡಮ್ ಟೆಸ್ಟ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಆನಂತರವೇ ಪ್ರಯಾಣಿಕರು ವಿಮಾನ ನಿಲ್ದಾಣ ತೊರೆಯಬೇಕು. ಈ ಸಂದರ್ಭದಲ್ಲಿ ಕೊರೊನಾ ಪಾಸಿಟಿವ್‌ ಕಂಡು ಬಂದಲ್ಲಿ ಕ್ವಾರಂಟೈನ್ ಮಾಡಲಾಗುತ್ತದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನಟ ನಿಖಿಲ್ ಕುಮಾರಸ್ವಾಮಿ ನಟನೆಯ ''ರೈಡರ್''ಸಿನಿಮಾ ರಿಲೀಸ್

Fri Dec 24 , 2021
ಬೆಂಗಳೂರು: ಇಂದು ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಅದ್ಧೂರಿಯಾಗಿ ರೈಡರ್ ಸಿನಿಮಾ ರಿಲೀಸ್ ಆಗಿದೆ. ಸ್ಯಾಂಡಲ್ ವುಡ್ ಯುವರಾಜ ನಿಖಿಲ್ ಅಭಿನಯದ ಸಿನಿಮಾ ಇದಾಗಿದೆ. ಬೆಂಗಳೂರಿನ ಆನಂದರಾವ್ ವೃತ್ತದಿಂದ ಅನುಪಮ ಚಿತ್ರಮಂದಿರಕ್ಕೆ ಮೆರವಣಿಗೆ ಮೂಲಕ ನಿಖಿಲ್ ಹೋಗಲಿದ್ದಾರೆ. ಅಲ್ಲದೇ ಆನಂದ್ ರಾವ್ ವೃತ್ತದಲ್ಲಿರುವ ಭವಹರ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಮೆರವಣಿಗೆ ಮೂಲಕ ಚಿತ್ರಮಂದಿರಕ್ಕೆ ಬರಲಿದ್ದು, ಅನುಪಮ ಚಿತ್ರಮಂದಿರದಲ್ಲಿ ಅಭಿಮಾನಿಗಳ ಜೊತೆ ನಿಖಿಲ್ ಚಿತ್ರ ನೋಡಲಿದ್ದಾರೆ. ನಂತರ ಮಧ್ಯಾಹ್ನದ ನಂತರ ಬೆಂಗಳೂರಿನ ಚಿತ್ರಮಂದಿರಗಳಿಗೆ […]

Advertisement

Wordpress Social Share Plugin powered by Ultimatelysocial