ಕೆಪಿಸಿಸಿ ಮಹಿಳಾ ಘಟಕದಿಂದ ಮತದಾರರ ಪಟ್ಟಿ ಪರಿಶೀಲನೆ ಅಭಿಯಾನ : ಪುಷ್ಪಾ ಅಮರನಾಥ ಪಾರಮ್ಯಾಟ್ : ಎ ವಿ ಬಿ.

ಮಹಿಳಾ ಕಾಂಗ್ರೆಸ್ ನಡೆಗೆ ಮತದಾರರ ಬಳಿಗೆ ನಾರೀಶಕ್ತಿ ಮತ್ತು ಮತದಾರರ ಪಟ್ಟಿ ಪರಿಶೀಲನೆ ಅಭಿಯಾನವನ್ನು ಕೆಪಿಸಿಸಿ ಮಹಿಳಾ ಘಟಕದಿಂದ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ ಹೇಳಿದರು.ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ನೇರವಾಗಿ ಚುನಾವಣೆಯನ್ನು ಎದುರಿಸುವುದನ್ನು ಬಿಟ್ಟು ಒಂದು ಮನೆ ಒಂದು ಮತ ಡಿಲಿಟ್ ಎಂಬ ಅಜೆಂಡಾ ಹಾಕಿಕೊಂಡಿದ್ದಾರೆ. ಇಂತಹ ನೀಚ್ ಕೃತ್ಯಕ್ಕೆ ಕೈ ಹಾಕಿದ್ದು, ಇದೊಂದು ಮನುಷ್ಯತ್ವ ಇಲ್ಲದ ಸರ್ಕಾರವಾಗಿದೆ ಎಂದು ದೂರಿದರು.ಬಿಜೆಪಿ ಸರ್ಕಾರದಲ್ಲಿ ಮಹಿಳೆಯರಿಗೆ ರಕ್ಷಣೆಯಿಲ್ಲ, ಬೆಲೆ ಏರಿಕೆ ಹೆಚ್ಚಾಗಿದೆ. ಮಹಿಳಾ ಮೀಸಲಾತಿ ಬಗ್ಗೆ ಚಕಾರ ಎತ್ತಿಲ್ಲ. ಯುವಕ-ಯುವತಿಯರಿಗೆ ಉದ್ಯೋಗವಿಲ್ಲ. ಹಲವಾರು ವೈಫಲ್ಯಗಳನ್ನು ಬಿಜೆಪಿ ಒಳಗೊಂಡಿದೆ. ಹೀಗಾಗಿ ಮಹಿಳಾ ಕಾಂಗ್ರೆಸ್ 20 ಪ್ರಶ್ನೆಗಳನ್ನು ಇಟ್ಟುಕೊಂಡು ಬೂತಮಟ್ಟದಲ್ಲಿ ಜನರ ಬಳಿಗೆ ತೆರಳಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುವುದು ಎಂದು ಹೇಳಿದರು.ಕಾಂಗ್ರೆಸ್ ನಲ್ಲಿ ಮುಂಬರುವ ಚುನಾವಣೆಗಾಗಿ 85 ಮಹಿಳೆಯರು ಅರ್ಜಿ ಸಲ್ಲಿಸಿದ್ದಾರೆ. ಈ ಪೈಕಿ 18 ಜನರನ್ನು ಶಾರ್ಟ್ ಜನರನ್ನು ಶಾರ್ಟ್ ಲಿಸ್ಟ್ ಮಾಡಲಾಗಿದೆ. ಜನವರಿಯಲ್ಲಿ ಚಿತ್ರದುರ್ಗದಲ್ಲಿ ಪಕ್ಷದ ವತಿಯಿಂದ ಬೃಹತ್ ಎಸ್.ಸಿ, ಎಸ್ ಟಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಇದರ ಜೊತೆಗೆ ಮಹಿಳೆಯರಿಗಾಗಿಯೇ ಪ್ರತ್ಯೇಕ ಸಮಾವೇಶ, ಚುನಾವಣೆಯಲ್ಲಿ ಪ್ರತ್ಯೇಕ ಮಹಿಳಾ ಪ್ರಣಾಳಿಕೆ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಿಜೆಪಿ ಟಿಕೆಟ್ ಆಕಾಂಕ್ಷಿಗಳ‌ ಆಗ್ರಹ.

Tue Dec 13 , 2022
ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಶಿರಹಟ್ಟಿ ಮತಕ್ಷೇತ್ರದ ಬಿಜೆಪಿ ಪಕ್ಷದ ಟಿಕೆಟ್ ಸ್ಥಳೀಯರಿಗೆ ನೀಡಬೇಕು ಹೊರಗಿವನರಿಗೆ ನೀಡಿದಲ್ಲಿ ಜನರೇ ಅವರಿಗೆ ಪಾಠ ಕಲಿಸುತ್ತಾರೆ ಎಂದು ಬಿಜೆಪಿ ಟಿಕೆಟ್ ಆಕಾಂಕ್ಷಿಗಳು ಹೇಳಿದರು.ಲಕ್ಷ್ಮೇಶ್ವರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ಕರೆದು ಮಾತನಾಡಿದರು.ಬಿಜೆಪಿ ಮುಖಂಡ ಜಾನು ಲಮಾಣಿ, ಪಿ.ಬಿ.ಕರಾಟೆ ಮಾತನಾಡಿ ಸ್ಥಳೀಯವಾಗಿ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತರಿಗೂ ಟಿಕೆಟ್ ನೀಡಿದರೆ ನಾವು ದುಡಿಯುತ್ತೇವೆ ಹೊರಗಿನವರಿಗೆ ಪಕ್ಷ ಅವಕಾಶ ನೀಡಬಾರದು ಎಂದು ಹೇಳಿದರು.ನಂತರ ಮಾತನಾಡಿದ ಡಾ. ಪ್ರಕಾಶ […]

Advertisement

Wordpress Social Share Plugin powered by Ultimatelysocial