206 ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

KSP Recruitment 2021 : 206 ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ನ್ಯಾಯ ವಿಜ್ಞಾನ ಪ್ರಯೋಗಾಲಯ, ಮಡಿವಾಳ, ಬೆಂಗಳೂರು ಮತ್ತು ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯಗಳಲ್ಲಿ ಖಾಲಿ ಇರುವ ಸ್ಥಳೀಯ ಮತ್ತು ಮಿಕ್ಕುಳಿದ ವೃಂದದ 206 ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ (ಸೀನ್ ಆಫ್ ಕ್ರೈಂ ಆಫೀಸರ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 15,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

KSP ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅರ್ಹತೆ :
 ಕರ್ನಾಟಕ ಪೊಲೀಸ್ ಇಲಾಖೆ, ರಾಜ್ಯ ನ್ಯಾಯ ವಿಜ್ಞಾನ ಪ್ರಯೋಗಾಲಯ ನೇಮಕಾತಿಯ ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕಾನೂನಿನ ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾನಿಲಯದಿಂದ ವಿಧಿ ವಿಜ್ಞಾನ ವಿಷಯದಲ್ಲಿ ಕನಿಷ್ಟ 55ರಷ್ಟು ಅಂಕಗಳೊಂದಿಗೆ ಪದವಿ ವಿದ್ಯಾರ್ಹತೆ ಅಥವಾ ಕಾನೂನಿನ ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾನಿಲಯದಿಂದ ವಿಜ್ಞಾನ ವಿಷಯದಲ್ಲಿ ಕನಿಷ್ಟ ಶೇಕಡ 55ರಷ್ಟು ಅಂಕಗಳೊಂದಿಗೆ ಪದವಿಯನ್ನು ಹೊಂದಿರತಕ್ಕದ್ದು ಹಾಗೂ ಜೊತೆಗೆ ಮಾನ್ಯತೆ ಪಡೆದ ಸಂಸ್ಥೆಯಿಂದ ವಿಧಿ ವಿಜ್ಞಾನ ವಿಷಯದಲ್ಲಿ ಕನಿಷ್ಟ ಶೇಕಡ 55 ರಷ್ಟು ಅಂಕಗಳೊಂದಿಗೆ 1 ವರ್ಷದ ಡಿಪ್ಲೋಮಾ ವಿದ್ಯಾರ್ಹತೆ ಅಥವಾ ಕಾನೂನಿನ ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾನಿಲಯದಿಂದ ವಿಜ್ಞಾನ ವಿಷಯದಲ್ಲಿ ಕನಿಷ್ಟ ಶೇಕಡ 55 ರಷ್ಟು ಅಂಕಗಳೊಂದಿಗೆ ಪದವಿಯನ್ನು ಹೊಂದಿರತಕ್ಕದ್ದು ಜೊತೆಗೆ ವಿಧಿ ವಿಜ್ಞಾನಗಳ ವಿಷಯದಲ್ಲಿ ಶೇಕಡ 55 ರಷ್ಟು ಅಂಕಗಳೊಂದಿಗೆ ಸ್ನಾತಕೋತ್ತರ ಪದವಿಯನ್ನು ಹೊಂದಿರತಕ್ಕದ್ದು.

ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ವ್ಯಕ್ತಿಗಳು ಸ್ಥಳೀಯ ವೃಂದದ ಹುದ್ದೆ ಹಾಗೂ ಮಿಕ್ಕುಳಿದ ವೃಂದದ ಹುದ್ದೆ ಈ ಎರಡೂ ವೃಂದದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

Please follow and like us:

Leave a Reply

Your email address will not be published. Required fields are marked *

Next Post

35 ಜಿಲ್ಲಾ ಮತ್ತು ತಾಲ್ಲೂಕು ಸಾಮಾಜಿಕ ಪರಿಶೋಧನಾ ಸಂಪನ್ಮೂಲ ವ್ಯಕ್ತಿ ಹುದ್ದೆಗಳಿಗೆ ಅರ್ಜಿ ಆಹ್ವಾನ

Fri Dec 17 , 2021
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (ಆರ್‌ಡಿಪಿಆರ್) ಯ ಎಂ.ಜಿ ನರೇಗಾ ಸಾಮಾಜಿಕ ಪರಿಶೋಧನಾ ಸಂಘದಲ್ಲಿ ಖಾಲಿ ಇರುವ 35 ಜಿಲ್ಲಾ ಮತ್ತು ತಾಲ್ಲೂಕು ಸಾಮಾಜಿಕ ಪರಿಶೋಧನಾ ಸಂಪನ್ಮೂಲ ವ್ಯಕ್ತಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಜನವರಿ 5,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ […]

Advertisement

Wordpress Social Share Plugin powered by Ultimatelysocial