ಕೃಷ್ಣಾ ಜಲಾನಯನ ಪ್ರದೇಶದ ರೈತರಿಗೆ ‘ಡಬಲ್ ಇಂಜಿನ್’ ಸರ್ಕಾರದಿಂದ ದ್ರೋಹ

ರ್ನಾಟಕ ಮತ್ತು ಕೇಂದ್ರದ ಆಡಳಿತಾರೂಢ ಬಿಜೆಪಿ ಸರ್ಕಾರ ಉತ್ತರ ಕರ್ನಾಟಕದ ಜನರಿಗೆ, ಮುಖ್ಯವಾಗಿ ಕೃಷ್ಣಾ ಜಲಾನಯನ ಪ್ರದೇಶದ ರೈತರಿಗೆ ನೀರಾವರಿ ಯೋಜನೆಗಳಲ್ಲಿ ದ್ರೋಹ ಮಾಡುತ್ತಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಆರೋಪಿಸಿದ್ದಾರೆ. ವಿಜಯಪುರ: ಕರ್ನಾಟಕ ಮತ್ತು ಕೇಂದ್ರದ ಆಡಳಿತಾರೂಢ ಬಿಜೆಪಿ ಸರ್ಕಾರ ಉತ್ತರ ಕರ್ನಾಟಕದ ಜನರಿಗೆ, ಮುಖ್ಯವಾಗಿ ಕೃಷ್ಣಾ ಜಲಾನಯನ ಪ್ರದೇಶದ ರೈತರಿಗೆ ನೀರಾವರಿ ಯೋಜನೆಗಳಲ್ಲಿ ದ್ರೋಹ ಮಾಡುತ್ತಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಆರೋಪಿಸಿದ್ದಾರೆ.ಶುಕ್ರವಾರ ಕೃಷ್ಣಾ ಜಲಾನಯನ ನೀರಾವರಿ ಯೋಜನೆ ಕುರಿತ ಕಾಂಗ್ರೆಸ್ ಹಮ್ಮಿಕೊಂಡಿದ್ದ ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಜನತೆ ಬರುವ ಚುನಾವಣೆಯಲ್ಲಿ ನಮಗೆ ಆಶೀರ್ವದಿಸಿದರೆ ಖಂಡಿತವಾಗಿಯೂ ಪ್ರತಿ ವರ್ಷ ರೂ.40,000 ಕೋಟಿ ವೆಚ್ಚ ಮಾಡಿ ರಾಜ್ಯದ ಕೃಷ್ಣಾ, ಭದ್ರಾ, ಎತ್ತಿನಹೊಳೆ, ಮೇಕೆದಾಟು ಸೇರಿದಂತೆ ಎಲ್ಲಾ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಸಂಕಲ್ಪ ಮಾಡಲಾಗಿದೆ ೆಂದು ಹೇಳಿದರು. ಬಿಜೆಪಿ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ 600 ಭರವಸೆಗಳನ್ನು ನೀಡಿತ್ತು. ಈ ಪೈಕಿ ಕೇವಲ ಶೇ.10ರಷ್ಟು ಭರವಸೆಗಳನ್ನು ಮಾತ್ರ ಈಡೇರಿಸಿದೆ. ಆದರೆ, ಈ ಹಿಂದೆ ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ 165 ಭರವಸೆಗಳನ್ನು ಪ್ರಣಾಳಿಕೆಯಲ್ಲಿ ನೀಡಲಾಗಿತ್ತು.ಈ ಪೈಕಿ 158 ಭರವಸೆಗಳನ್ನು ಈಡೇರಿಸಿದ್ದೇವೆ. ಕಾಂಗ್ರೆಸ್ ನುಡಿದಂತೆ ನಡೆಯುವ ಸರ್ಕಾರವಾಗಿದೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ರೂ.1.5 ಲಕ್ಶಷ ಕೋಟಿ ನೀರಾವರಿ ಯೋಜನೆಗಳಿಗೆ ವೆಚ್ಚ ಮಾಡಲಾಗುವುದು ಎಂದು ಸದನದಲ್ಲಿಯೂ ಹಾಗೂ ಹೊರಡಗೆಯೂ ಬಿಜೆಪಿ ಹೇಳಿತ್ತು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹೊಸ ವರ್ಷದಲ್ಲಿ ತೆರೆ ಕಾಣಲಿರುವ ಬಹುನಿರೀಕ್ಷಿತ ಕನ್ನಡ ಸಿನಿಮಾಗಳಿವು...!!??

Sat Dec 31 , 2022
ಸ್ಯಾಂಡಲ್​​ವುಡ್​ ನಲ್ಲಿ 2022 ರಲ್ಲಿ 180 ಕ್ಕೂ ಹೆಚ್ಚು ಸಿನಿಮಾಗಳು ರಿಲೀಸ್ ಆಗಿವೆ. ಕಟ್ಟಕಡೆಯದಾಗಿ ನಾಲ್ಕು ಸಿನಿಮಾಗಳು ರಿಲೀಸ್ ಆಗುತ್ತಿವೆ. ಜಮಾಲಿಗುಡ್ಡ, ಪದವಿ ಪೂರ್ವ, ಮೇಡ್ ಇನ್ ಬೆಂಗಳೂರು, ಜೋರ್ಡನ್ ಅನ್ನೋ ಸಿನಿಮಾ ತೆರೆಗೆ ಬರ್ತಿವೆ.ಆದರೆ ಮುಂದಿನ ವರ್ಷ 2023 ರಲ್ಲಿ ಕನ್ನಡದ ಯಾವ ಸಿನಿಮಾ ರಿಲೀಸ್ ಆಗುತ್ತಿವೆ. ಅದರಲ್ಲಿ ಬಹು ನಿರೀಕ್ಷಿತ ಸಿನಿಮಾಗಳಾವವು. ಕಿಚ್ಚ ಸುದೀಪ್ ಸಿನಿಮಾ ಅನೌನ್ಸ್ ಆಗುತ್ತದೆಯೇ? ರಾಕಿಂಗ್ ಸ್ಟಾರ್ ಯಶ್ ಚಿತ್ರ ಜನವರಿ-8ಕ್ಕೆ ಅನೌನ್ಸ್ […]

Advertisement

Wordpress Social Share Plugin powered by Ultimatelysocial