ಜೆಡಿಎಸ್ ಅಧಿಕಾರಕ್ಕೆ ಬಂದರೆ ಪಂಚರತ್ನ ಯೋಜನೆ ಜಾರಿ :

ದಾವಣಗೆರೆ : ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಶಿಕ್ಷಣ, ಆರೋಗ್ಯ, ರೈತರ ಅಭಿವೃದ್ಧಿ ಸೇರಿ ಪಂಚರತ್ನ ಯೋಜನೆ ಜಾರಿಗೊಳಿಸಲಾಗುವುದು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಜೆಡಿಎಸ್ ಪಕ್ಷದ ಜನತಾ ಜಲಧಾರೆ ರಥಯಾತ್ರೆಯ ಅಂಗವಾಗಿ ಹರಿಹರ ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಉಚಿತ ಶಿಕ್ಷಣ, ಆರೋಗ್ಯ, ರೈತರ ಉನ್ನತಿ, ಯುವಜನತೆಗೆ ಸ್ವ ಉದ್ಯೋಗ, ಪ್ರತಿ ಕುಟುಂಬಕ್ಕೂ ಸ್ವಂತ ಮನೆ ಸೌಕರ್ಯ ಒದಗಿಸುವ ಪಂಚರತ್ನ ಯೋಜನೆಯನ್ನು ಪಕ್ಷ ರೂಪಿಸಿದೆ ಎಂದು ಹೇಳಿದ್ದಾರೆ.

ಇನ್ನು ರೈತರ 25 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡಿದ್ದೆ. ಪಕ್ಷ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘಗಳ 1 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡಲಾಗುವುದು. ಹರಿಹರದ ಬೈರನಪಾದ ಏತ ನೀರಾವರಿ ಯೋಜನೆ, ಕೆರೆ ಭರ್ತಿ, ಮೆಡಿಕಲ್, ಎಂಜಿನಿಯರ್ ಕಾಲೇಜು ಸ್ಥಾಪನೆ ಇತ್ಯಾದಿ ಯೋಜನೆಗಳಿಗೆ ಆದ್ಯತೆ ನೀಡಲಾಗುವುದು ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮೇ.08: ಕಚ್ಚಾತೈಲ ಬೆಲೆ ಏರಿಕೆ,

Sun May 8 , 2022
ರಷ್ಯಾ- ಉಕ್ರೇನ್ ಯುದ್ಧದ ಹಿನ್ನೆಲೆ ಜಾಗತಿಕ ಕಚ್ಚಾತೈಲ ಬೆಲೆ ಕೆಲವು ದಿನಗಳಿಂದ ಮತ್ತೆ ಏರಿಕೆಯಾಗುತ್ತಿದೆ. ಸತತವಾಗಿ 110 ಪ್ಲಸ್ ಯುಎಸ್ ಡಾಲರ್ ಪ್ರತಿ ಬ್ಯಾರೆಲ್ ನಂತೆ ವ್ಯವಹರಿಸುತ್ತಿದೆ. ಇದಕ್ಕೂ ಮುನ್ನ ದೇಶದ ಪಂಚ ರಾಜ್ಯಗಳ ಚುನಾವಣೆಯ ಸಂದರ್ಭದಲ್ಲಿ ದೇಶದ ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರ ಪರಿಷ್ಕರಣೆಯನ್ನು ಸ್ಥಗಿತ ಮಾಡಿದ್ದವು. ಆದರೆ ವಿಧಾನಸಭೆ ಚುನಾವಣೆ ಮುಗಿಯುತ್ತಿದ್ದಂತೆ ದೇಶದಲ್ಲಿ ಪ್ರತಿದಿನ ಇಂಧನ ದರ ಪರಿಷ್ಕರಣೆ ಮಾಡಲು ಆರಂಭ ಮಾಡಿದ್ದ […]

Advertisement

Wordpress Social Share Plugin powered by Ultimatelysocial