ನನ್ಗೆ ನನ್ನ ಬಾಲ್ಯದ ದಿನಗಳು ನೆನಪಾದವು: ಹೀಗೆ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದೇಕೆ ಗೊತ್ತಾ.?

ಬೆಂಗಳೂರು: ಮಕ್ಕಳು ನಲಿಯುತ್ತಾ ಶಾಲೆಗೆ ಬಂದ ದೃಶ್ಯಗಳನ್ನು ಕಂಡು ನನ್ನ ಮನಸ್ಸು ಪುಳಕಿತವಾಗಿದೆ. ನನ್ನ ಬಾಲ್ಯದ ದಿನಗಳು ನೆನಪಾದವು. ಅಪ್ಪ-ಅಮ್ಮನ ಬೆರಳಿಡಿದು ತರಗತಿಗಳತ್ತ ಬಂದ ಚಿಣ್ಣರ ಸಂಭ್ರಮ ಇಡೀ ನಾಡಿಗೆ ಹೊಸಕಳೆ ತಂದಿದೆ ಎಂದು ತಮ್ಮ ಬಾಲ್ಯದ ಶಾಲಾ ದಿನಗಳನ್ನು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ನೆನಪು ಮಾಡಿಕೊಂಡಿದ್ದಾರೆ.ಈ ಕುರಿತು ಸರಣಿ ಟ್ವಿಟ್ ಮಾಡಿರುವಂತ ಅವರು, ಶಾಲೆಗೆ ಬಂದ ಮಕ್ಕಳನ್ನು ಪ್ರೀತಿಯಿಂದ ಬರಮಾಡಿಕೊಂಡು ಸ್ವಾಗತಿಸಿದ ಸಮಸ್ತ ಶಿಕ್ಷಕ ಬಂಧುಗಳಿಗೆ ಅಭಿನಂದನೆಗಳು. ಮಕ್ಕಳ ಜತೆ ಮಕ್ಕಳಾಗಿ ಶಿಕ್ಷಕರು ವಹಿಸುವ ಜವಾವ್ದಾರಿ ಮಹತ್ವದ್ದು. ಕೋವಿಡ್‌ʼನಿಂದ ಬಳಲಿದ ಕಲಿಕಾ ವ್ಯವಸ್ಥೆಗೆ ನವಚೈತನ್ಯ ತುಂಬಿದವರೂ ಇವರೇ. ಅವರ ಸಮಸ್ಯೆ-ಬೇಡಿಕೆಗಳ ಬಗ್ಗೆ ರಾಜ್ಯ ಸರಕಾರ ಉದಾಸೀನ ಮಾಡಬಾರದು ಎಂದಿದ್ದಾರೆ.ಶಿಕ್ಷಣ ಇಲಾಖೆ ಅಧಿಕಾರಿಗಳು ಕಚೇರಿಗಳಲ್ಲಿ ಕೂತರೆ ಉಪಯೋಗವಿಲ್ಲ. ಶಾಲೆಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಕುಂದುಕೊರತೆಗಳನ್ನು ನೀಗಿಸಬೇಕು. ಸ್ವಚ್ಛತೆ-ನೈರ್ಮಲ್ಯ, ಮೂಲಸೌಕರ್ಯಗಳನ್ನು ಉತ್ತಮಪಡಿಸಲು ಶ್ರಮಿಸಬೇಕು ಎಂದಿದ್ದಾರೆ.ಗ್ರಾಮೀಣ ಭಾಗದ ಅನೇಕ ಕಡೆ ಶಾಲಾ ಕಟ್ಟಡಗಳು ಶಿಥಿಲವಾಗಿವೆ. ಮಳೆ ಬಂದರೆ ಹಳ್ಳಿಶಾಲೆಗಳು ಸೋರುತ್ತಿವೆ. ಕಿಟಕಿ ಬಾಗಿಲುಗಳೇ ಇಲ್ಲದ ದೃಶ್ಯಗಳನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಉತ್ತಮ ವಾತಾವರಣದಲ್ಲಿ ಮಕ್ಕಳು ಕಲಿಯುವ ವ್ಯವಸ್ಥೆ ಕಲ್ಪಿಸಬೇಕು. ಇದು ರಾಜ್ಯ ಸರಕಾರದ ಹೊಣೆ ಎಂಬುದಾಗಿ ಹಏಳಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯ ಒದಗಿಸಲು ಎಚ್‍ಡಿಕೆ ಒತ್ತಾಯ!

Tue May 17 , 2022
ಬೆಂಗಳೂರು, ಮೇ 17- ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಿಗೆ ಅಗತ್ಯ ಮೂಲಸೌಲಭ್ಯ ಕಲ್ಪಿಸಬೇಕು ಹಾಗೂ ಶಿಕ್ಷಕರ ಸಮಸ್ಯೆ-ಬೇಡಿಕೆಗಳ ಬಗ್ಗೆ ರಾಜ್ಯ ಸರ್ಕಾರ ಉದಾಸೀನ ಮಾಡಬಾರದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಗ್ರಾಮೀಣ ಭಾಗದ ಅನೇಕ ಕಡೆ ಶಾಲಾ ಕಟ್ಟಡಗಳು ಶಿಥಿಲವಾಗಿವೆ. ಮಳೆ ಬಂದರೆ ಹಳ್ಳಿ ಶಾಲೆಗಳು ಸೋರುತ್ತಿವೆ. ಕಿಟಕಿ ಬಾಗಿಲುಗಳೇ ಇಲ್ಲದ ದೃಶ್ಯಗಳನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಉತ್ತಮ ವಾತಾವರಣದಲ್ಲಿ ಮಕ್ಕಳು ಕಲಿಯುವ […]

Advertisement

Wordpress Social Share Plugin powered by Ultimatelysocial