ಬಿಜೆಪಿಗರು- ಬ್ರಿಟೀಷರು ಒಂದೇ: ಟಿಪ್ಪು ಸುಲ್ತಾನ್‌ ಪಠ್ಯ ಕಡಿತಕ್ಕೆ ಕುಮಾರಸ್ವಾಮಿ ಆಕ್ರೋಶ…

ಶಾಲಾ ಪಠ್ಯದಲ್ಲಿ ಟಿಪ್ಪು ಸುಲ್ತಾನ್‌ ವಿಷಯ ಕಡಿತ ಮಾಡಿರುವುದಕ್ಕೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿಗರು ಮತ್ತು ಬ್ರಿಟಿಷರು ಇಬ್ಬರೂ ಒಂದೇ ಎಂದಿದ್ದಾರೆ.

ಮಂಗಳವಾರ ಸರಣಿ ಟ್ವೀಟ್‌ ಮಾಡಿರುವ ಅವರು, ಪಠ್ಯಪುಸ್ತಕಗಳನ್ನು ʼಪಕ್ಷಪುಸ್ತಕʼಗಳನ್ನಾಗಿ ಮಾಡುವ ವ್ಯವಸ್ಥಿತ ಹುನ್ನಾರಕ್ಕೆ ನನ್ನ ಧಿಕ್ಕಾರವಿದೆ.

ಬಿಜೆಪಿಯ ನೈಜ ಬಣ್ಣದ ವಿಸ್ತೃತರೂಪವೇ ಆಯ್ದ ಪಠ್ಯಗಳನ್ನು ಟಾರ್ಗೆಟ್‌ ಮಾಡಿ ಡಿಲೀಟ್‌ ಮಾಡುವುದು ಎಂದಿದ್ದಾರೆ.

ಬಿಜೆಪಿಯ ಈ ಬುಡಮೇಲು ಕೃತ್ಯಗಳ ಬಗ್ಗೆ ನನಗೆ ಅಚ್ಚರಿಯೇನೂ ಇಲ್ಲ. ನನ್ನ ಜತೆ ಮೈತ್ರಿ ಸರಕಾರ ಮಾಡಿದಾಗ ಅವರ ಬೇಳೆ ಬೇಯಲಿಲ್ಲ. ʼಆಪರೇಷನ್‌ ಕಮಲʼದ ಅನೈತಿಕ ಮಾರ್ಗದಲ್ಲಿ ಅಧಿಕಾರಕ್ಕೆ ಬಂದ ʼಸ್ವಘೋಷಿತ ಡೋಂಗಿ ರಾಷ್ಟ್ರಭಕ್ತರುʼ ಇನ್ನೇನು ಮಾಡಲು ಸಾಧ್ಯ? ಎಂದು ಅವರು ಪ್ರಶ್ನಿಸಿದ್ದಾರೆ.

ಮಹಾನ್‌ ರಾಷ್ಟ್ರಪ್ರೇಮಿ, ಬ್ರಿಟೀಷರಿಗೆ ಸಿಂಹಸ್ವಪ್ನ, ಭಾರತಮಾತೆಯ ಹೆಮ್ಮೆಯ ಪುತ್ರ ಸರ್ದಾರ್‌ ಭಗತ್‌ ಸಿಂಗ್‌ ಅವರ ಪಠ್ಯಕ್ಕೆ ಕೊಕ್‌ ಕೊಟ್ಟು, ಆರೆಸ್ಸೆಸ್‌ ಸಂಸ್ಥಾಪಕ ಹೆಡಗೇವಾರ್‌ ಕುರಿತ ಮಾಹಿತಿಯನ್ನು ಪಠ್ಯಕ್ಕೆ ತುರುಕುತ್ತಿರುವ ಬಿಜೆಪಿ ಮತ್ತವರ ಪಟಾಲಂ ವಿಕೃತಿಗೆ ಇದು ಪರಾಕಾಷ್ಠೆ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಗತ್‌ ಸಿಂಗ್‌ ಸ್ವಾತಂತ್ರ್ಯಕ್ಕಾಗಿ ಬ್ರಿಟೀಷರ ವಿರುದ್ಧ ಹೋರಾಡಿ ಗಲ್ಲಿಗೇರಿದರು. ಸಂಘ ಪರಿವಾರಿಗಳು ಅದೇ ಬ್ರಿಟೀಷರಿಗೆ ಪರಿಚಾರಿಕೆ ಮಾಡಿಕೊಂಡು ಸ್ವಾತಂತ್ರ್ಯಕ್ಕಿಂತ ಗುಲಾಮಗಿರಿಯೇ ಲೇಸೆಂದುಕೊಂಡಿದ್ದರು. ಇಂಥವರು, ಭಗತ್‌ ಸಿಂಗ್‌ʼರಂಥ ರಾಷ್ಟ್ರಪ್ರೇಮಿಗಳನ್ನು ಸಹಿಸಿಕೊಳ್ಳುತ್ತಾರೆಯೇ? ಎಂದು ಅವರು ಪ್ರಶ್ನಿಸಿದ್ದಾರೆ.

ಪ್ರಜಾಪ್ರಭುತ್ವ ವಿರೋಧಿ ನಡವಳಿಕೆ, ಚಾರಿತ್ರ್ಯಹೀನತೆಯೇ ಮೈವೇತ್ತ ಬಿಜೆಪಿಗೆ ರಾಜ್ಯದ ಬೆಳವಣಿಗೆಯಲ್ಲಿ ನಂಬಿಕೆ ಇಲ್ಲ. ಹಿಜಾಬ್‌, ಆಹಾರ, ವ್ಯಾಪಾರ, ಹಲಾಲ್‌ ಎಲ್ಲಾ ಆಯಿತು. ಈಗ ಪಠ್ಯಕ್ಕೆ ನೇತಾಡುತ್ತಿದೆ. ಅಭಿವೃದ್ಧಿ ಎಂದರೆ ಆ ಪಕ್ಷಕ್ಕೆ ಅಪಥ್ಯ. ಬಿಜೆಪಿಗರು ಮತ್ತು ಬ್ರಿಟೀಷರು ಇಬ್ಬರೂ ಒಂದೇ. ಒಡೆದು ಆಳುವುದೇ ಇವರ ನೀತಿ & ಧರ್ಮ. ಬ್ರಿಟೀಷ್‌ ಪರಂಪರೆಯನ್ನು ಬಿಜೆಪಿಗರು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲೂ ಮುಂದುವರಿಸಿದ್ದಾರೆ. ಜನರ ಸ್ವಾತಂತ್ರ್ಯವನ್ನು ಸಹಿಸಲು ಅವರಿಗೆ ಆಗುತ್ತಿಲ್ಲ ಎಂದು ಅವರು ಹೇಳಿದ್ದಾರೆ.

ಪಠ್ಯವನ್ನು ವಿಕೃತಿಗೊಳಿಸುತ್ತಿರುವುದು ಎಂದರೆ, ಕನ್ನಡ ಆಸ್ಮಿತೆಯನ್ನು ಹತ್ತಿಕ್ಕುವ ಪಾತಕ ಯತ್ನ. ಕನ್ನಡಿಗರು ಎಚ್ಚೆತ್ತುಕೊಳ್ಳಬೇಕು, ಪ್ರಶ್ನಿಸಬೇಕು. ಹೋರಾಟಕ್ಕೂ ಇಳಿಯಬೇಕು. “ಅಯ್ಯೋ.. ಕರ್ನಾಟಕ ಕಟುಕರ ಕೈಯಲ್ಲಿ ಸಿಕ್ಕಿಕೊಂಡಿದೆ!! ಎಂದು ಅವರು ವಿಷಾದಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಭಾರತದ ಪ್ರತಿ 5 ಮನೆಗಳಲ್ಲಿ 3 ರಲ್ಲಿ ವಿದ್ಯುತ್ ಕಡಿತ!

Tue May 17 , 2022
ಭಾರತದ ಅನೇಕ ಭಾಗಗಳಲ್ಲಿ ಹಗಲಿನಲ್ಲಿ ತಾಪಮಾನವು ಸುಮಾರು 50 ಡಿಗ್ರಿ ಸೆಲ್ಸಿಯಸ್‌ವರೆಗೂ ತಲುಪುತ್ತಿದೆ. ಕರ್ನಾಟಕದಲ್ಲಿ ಅಲ್ಲಲ್ಲಿ ಮಳೆ   ಸುರಿಯುತ್ತಿದ್ದರೂ ದೆಹಲಿಯಂತಹ ನಗರಗಳಲ್ಲಿ ತಾಪಮಾನ   ಇನ್ನೂ ಕಡಿಮೆಯಾಗಿಲ್ಲ. ಇಂತಹ ಪರಿಸ್ಥಿತಿಯಲ್ಲಿ ದೇಶದಲ್ಲಿರುವ ಪ್ರತಿ ಐದು ಮನೆಗಳಲ್ಲಿ ಮೂರರಲ್ಲಿ ಪ್ರತಿದಿನ ಎರಡು ಗಂಟೆ ಅಥವಾ ಅದಕ್ಕಿಂತ ಹೆಚ್ಚು ಕಾಲ ವಿದ್ಯುತ್ ಕಡಿತ ಉಂಟಾಗಲಿದೆ ಎಂದು ಸಮುದಾಯ-ಆಧಾರಿತ ವೇದಿಕೆಯಾದ ಲೋಕಲ್ ಸರ್ಕಲ್ಸ್‌ನ ಸಮೀಕ್ಷೆಯಲ್ಲಿ  ತಿಳಿದುಬಂದಿದೆ. ಭಾರತದ 344 ಜಿಲ್ಲೆಗಳಲ್ಲಿ ನಡೆದ ಸಮೀಕ್ಷೆಯಲ್ಲಿ ನಾಗರಿಕರಿಂದ 35,000 […]

Advertisement

Wordpress Social Share Plugin powered by Ultimatelysocial