ರಾತ್ರೋರಾತ್ರಿ ವಿಮಾನ ಏರಿದ ಮಾಜಿ ಸಿಎಂ ಕುಮಾರಸ್ವಾಮಿ!

 

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರು ಶನಿವಾರ (ಮೇ 28) ರಾತ್ರಿ ಸಿಂಗಪುರಕ್ಕೆ ಪ್ರಯಾಣ ಬೆಳೆಸಿದ್ದಾರೆ. ಮಾಜಿ ಸಚಿವ ಸಾ.ರಾ.ಮಹೇಶ್ ಮತ್ತು ವಿಧಾನಪರಿಷತ್ ಸದಸ್ಯ ಭೋಜೇಗೌಡ ಅವರ ಜತೆಗೆ ಸಿಂಗಪುರದಲ್ಲಿ ಕುಮಾರಸ್ವಾಮಿ ತೆರಳಿದ್ದಾರೆ.

ಜೆಡಿಎಸ್‌ನ ಮಹತ್ವಾಕಾಂಕ್ಷಿ ಜನತಾ ಜಲಧಾರೆ, ಜನತಾ ಪರ್ವ ಕಾರ್ಯಕ್ರಮ ಹಾಗೂ ಪಕ್ಷ ಸಂಘಟನೆಗಾಗಿ ಸರಣಿ ಸಭೆಗಳಿಂದ ಬಳಲಿದ್ದ ಹಿನ್ನೆಲೆಯಲ್ಲಿ ವಿಶ್ರಾಂತಿಗಾಗಿ ಸಿಂಗಪುರಕ್ಕೆ ಹೋಗಿದ್ದಾರೆ ಎನ್ನಲಾಗಿದೆ. ನಾಲ್ಕು ದಿನಗಳ ಕಾಲ ಸಿಂಗಪುರದಲ್ಲಿದ್ದು, ಜೂನ್ 2ರಂದು ನಗರಕ್ಕೆ ವಾಪಸ್ ಆಗಲಿದ್ದಾರೆ ಎಂದು ತಿಳಿದುಬಂದಿದೆ.

ಜಲಧಾರೆ ಕಾರ್ಯಕ್ರಮದಲ್ಲಿ ಸುಮಾರು ಒಂದು ತಿಂಗಳ ಕಾಲ ನಿರಂತರ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದರು. ಸಭೆ, ಸಮಾರಂಭಗಳಲ್ಲಿ ಭಾಗಿಯಾಗಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಇಂದು ಸಂಜೆಯೊಳಗೆ ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಅಂತಿಮ:

Sun May 29 , 2022
  ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ವಿಚಾರದ ಬಗ್ಗೆ ಇಂದು ಸಂಜೆಯೊಳಗೆ ತೀರ್ಮಾನವಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಸಭೆ ಅಭ್ಯರ್ಥಿ ಆಯ್ಕೆ ಬಗ್ಗೆ ನಮ್ಮ ರಾಷ್ಟ್ರೀಯ ನಾಯಕರು ಇಂದು ಸಂಜೆಯೊಳಗೆ ತೀರ್ಮಾನ ಮಾಡುತ್ತಾರೆ. ಮೂರನೇ ಅಭ್ಯರ್ಥಿಯ ಬಗ್ಗೆಯೂ ಇಂದು ಸಂಜೆಯೊಳಗೆ ತೀರ್ಮಾನವಾಗಲಿದೆ ಎಂದರು. ಸಿಎಂ ಭೇಟಿ ಮಾಡಿದ ಜಿಟಿಡಿ: ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರು ರವಿವಾರ ಬೆಳಗ್ಗೆ ಮುಖ್ಯಮಂತ್ರಿ […]

Advertisement

Wordpress Social Share Plugin powered by Ultimatelysocial