ಕರ್ನಾಟಕ ಸರ್ಕಾರಕ್ಕೆ ಕುಮಾರಣ್ಣ ಕೊಟ್ಟ ‘ಕರೆಂಟ್’ ಶಾಕ್

ಬೆಂಗಳೂರು, ಜೂನ್ 28: ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಯು ಇನ್ನೇನು ಹತ್ತಿರಕ್ಕೆ ಬರುತ್ತಿದೆ. ಈಗ ಬೆಲೆಯನ್ನು ಹೆಚ್ಚಿಸುವ ಸರ್ಕಾರ ಚುನಾವಣೆ ದಿನಾಂಕ ಹತ್ತಿರ ಬರುತ್ತಿದ್ದಂತೆ ದರ ಇಳಿಸುವ ಸಾಹಸ ಮಾಡುವುದಕ್ಕೆ ಸ್ಕೆಚ್ ಹಾಕಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ.

ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಸರಣಿ ಟ್ವೀಟ್ ಮಾಡಿರುವ ಎಚ್. ಡಿ. ಕುಮಾರಸ್ವಾಮಿ, ವೆಚ್ಚ ಮತ್ತು ಹೊಂದಾಣಿಕೆಯ ಹೊಸ ಐಡಿಯಾ ಎಂದರೆ ಇದೇನಾ ಎಂದು ಪ್ರಶ್ನೆ ಮಾಡಿದ್ದಾರೆ.

“ಬೆಲೆ ಏರಿಕೆ ಬರೆ ಎಳೆಯುವಲ್ಲಿ ಬಿಜೆಪಿ ಸರ್ಕಾರದ್ದು ಸಾರ್ವಕಾಲಿಕ ದಾಖಲೆ. ಏಪ್ರಿಲ್ 1ರಂದು ವಿದ್ಯುತ್ ದರ ಏರಿಸಿ ಜನರಿಗೆ ಶಾಕ್ ನೀಡಿದ್ದ ಸರಕಾರ, ಈಗ ಜುಲೈ 1ರಿಂದ ಮತ್ತೆ ವಿದ್ಯುತ್ ಬರೆ ಎಳೆಯಲು ಸಜ್ಜಾಗಿದೆ,” ಎಂದು ಕುಮಾರಸ್ವಾಮಿ ಟ್ವೀಟ್ ಮೂಲಕ ಸರ್ಕಾರದ ವಿರುದ್ಧ ಹರಿ ಹಾಯ್ದಿದ್ದಾರೆ. ಇದರ ಜೊತೆಗೆ ಸರಣಿ ಟ್ವೀಟ್ ಮೂಲಕ ಸರ್ಕಾರಕ್ಕೆ ಚುರುಕು ಮುಟ್ಟಿರುವ ಕೆಲಸವನ್ನು ಮಾಡಿದ್ದಾರೆ.

“ವಿದ್ಯುತ್ ಇರುವುದಾಗಲೂ ದರ ಏರಿಕೆ ಏಕೆ?””ರಾಜ್ಯದಲ್ಲಿ ಉತ್ತಮ ಮಳೆಯಾಗಿ ಎಲ್ಲ ಜಲಾಶಯಗಳು ಭರ್ತಿಯಾಗಿವೆ. ವಿದ್ಯುತ್ ಉತ್ಪಾದನೆಯೂ ಚೆನ್ನಾಗಿದೆ. ಹೆಚ್ಚುವರಿ ವಿದ್ಯುತ್ ಇದೆ ಎಂದು ಸರ್ಕಾರವೇ ಹೇಳುತ್ತಿದೆ. ಹೀಗಿದ್ದರೂ ದರ ಏರಿಕೆ!! ಇದರ ಹಿಂದಿನ ಹುನ್ನಾರ ಏನು?,” ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಬಡವರನ್ನು ಕತ್ತಲೆಗೆ ದೂಡುತ್ತೀರಾ ಎಂದು ಪ್ರಶ್ನೆ

ಮಾಸಿಕ 100 ಯೂನಿಟ್ ಬಳಸುವ ಗ್ರಾಹಕರು ಹೆಚ್ಚು ಬೆಲೆ ತೆರಬೇಕು. ಅಂದರೆ; ಬಡವರು ಮತ್ತು ಮಧ್ಯಮ ವರ್ಗದ ಜನರು ವಿದ್ಯುತ್ ಬಳಸದೇ ಕತ್ತಲಲ್ಲಿ ಕೊಳೆಯಬೇಕೆ?. ಗತಿಶಕ್ತಿ ಯೋಜನೆ ಮೂಲಕ ದೇಶಕ್ಕೆ ಹೊಸ ಗತಿ ಕಾಣಿಸುವುದು ಎಂದರೆ ಇದೇನಾ? ಎಂದು ಟ್ವೀಟ್ ಮಾಡಿದ್ದಾರೆ.

ಜನರಿಂದ ಹಣ ಸುಲಿಗೆಗೆ ನಿಂತುಕೊಂಡ ಸರ್ಕಾರ

“ಇಂಧನ ಇಲಾಖೆಯ ಅಸಮರ್ಪಕ ನಿರ್ವಹಣೆ ಹಾಗೂ ವಿದ್ಯುತ್ ಸೋರಿಕೆಯನ್ನು ತಡೆಯಲಾಗದ ಅದಕ್ಷತೆ ಬಗ್ಗೆ ಜನಕ್ಕೆ ಗೊತ್ತಿದೆ. ಆ ಹೊರೆಯನ್ನು ಜನರ ಮೇಲೆ ಹೇರಿ ಮೊದಲೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಲೂಟಿಗೆ ತುತ್ತಾಗಿರುವ ಜನರನ್ನು ಮತ್ತಷ್ಟು ಸುಲಿಗೆ ಮಾಡುವ ಪ್ರಯತ್ನ ಇದಾಗಿದೆ,” ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.

ಬೆಲೆ ಏರಿಕೆಗೆ ಇನ್ನೊಂದು ಹೆಸರೇ ಬಿಜೆಪಿ

“ರಾಜ್ಯದಲ್ಲಿ ಬಿಜೆಪಿ ಎಂದರೆ ಬೆಲೆ ಏರಿಕೆ, ಬೆಲೆ ಏರಿಕೆ ಎಂದರೆ ಬಿಜೆಪಿ. ಬಲಿಷ್ಟರು, ಬಲ್ಲಿದರ ಆಡಂಬೋಲ. ಬಿಸ್ನೆಸ್ ಕ್ಲಾಸಿನ ಕಾಮಧೇನು. ಬಡವರು ಮತ್ತು ಮಧ್ಯಮ ವರ್ಗದ ಜನರ ಪಾಲಿಗೆ ರಕ್ತಪಿಪಾಸು. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರದಲ್ಲೇ ಇದೆ. ಈಗ ಬೆಲೆ ಏರಿಸಿ, ಇನ್ನೇನು ಚುನಾವಣೆ ದಿನಾಂಕ ಹತ್ತಿರದಲ್ಲಿದೆ ಎನ್ನುವಾಗ ದರ ಇಳಿಸುವ ಸ್ಟಂಟ್ ಇದರ ಹಿಂದೆ ಇದೆ. ವೆಚ್ಚ ಹೊಂದಾಣಿಕೆಯ ಹೊಸ ಐಡಿಯಾ ಅಂದರೆ ಇದೇನಾ?,” ಎಂದು ಸರ್ಕಾರವನ್ನು ಕುಟುಕಿದ್ದಾರೆ.

“ಯಾವುದೇ ಕಾರಣಕ್ಕೂ ವಿದ್ಯುತ್ ದರ ಏರಿಕೆ ಮಾಡಬಾರದು. ಗ್ರಾಮೀಣ ಪ್ರದೇಶಕ್ಕೆ ಗುಣಮಟ್ಟದ, ನಿಯಮಿತ ವಿದ್ಯುತ್ ಪೂರೈಕೆ ಮಾಡದ ಸರ್ಕಾರಕ್ಕೆ ದರ ಏರಿಕೆ ಮಾಡುವ ನೈತಿಕ ಹಕ್ಕಿಲ್ಲ. ಒಂದು ವೇಳೆ ಏರಿಕೆ ಮಾಡಿದರೆ ಜನರನ್ನು ಒಗ್ಗೂಡಿಸಿ ಜನಾಂದೋಲನ ಇಳಿಯಬೇಕಾಗುತ್ತದೆ ಎಂದು,” ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಿಬಿಎಂಪಿಯ ಕ್ರಮವನ್ನು ಹೈಕೋರ್ಟ್ ಮತ್ತೆ ತರಾಟೆ ತೆಗೆದುಕೊಂಡಿದೆ.

Tue Jun 28 , 2022
  ಬೆಂಗಳೂರು, ಜೂ.28. ಪೈಥಾನ್ ಯಂತ್ರ ಬಳಸಿ ನಗರದ ರಸ್ತೆಗುಂಡಿಗಳನ್ನು ಮುಚ್ಚುವ ಕಾಮಗಾರಿ ನಡೆಸಲು ಅಮೆರಿಕನ್ ರೋಡ್ ಟೆಕ್ನಾಲಜಿ ಸಲ್ಯೂಷನ್ಸ್ (ಎಆರ್‌ಟಿಎಸ್) ಸಂಸ್ಥೆಯೊಂದಿಗೆ ಈವರೆಗೂ ಒಪ್ಪಂದ ಮಾಡಿಕೊಳ್ಳದ ಹಾಗೂ ಕಾರ್ಯಾದೇಶ ಹೊರಡಿಸದ ಬಿಬಿಎಂಪಿಯ ಕ್ರಮವನ್ನು ಹೈಕೋರ್ಟ್ ಮತ್ತೆ ತರಾಟೆ ತೆಗೆದುಕೊಂಡಿದೆ. ಈಗಾಗಲೇ ಹಲವು ಬಾರಿ ತರಾಟೆಗೆ ತೆಗೆದುಕೊಂಡರೂ ಬುದ್ದಿಕಲಿಯದ ಪಾಲಿಕೆ ತನ್ನ ಹಳೆಯ ಚಾಳಿ ಮುಂದುವರಿಸಿ ಮತ್ತೆ ಹೈಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡಿದೆ. ಅಷ್ಟೇ ಅಲ್ಲದೆ, ಸಾಕಷ್ಟು ಸಮಯ ನೀಡಲಾಗಿದ್ದರೂ, […]

Advertisement

Wordpress Social Share Plugin powered by Ultimatelysocial