ನಾನು ಲಕ್ಕಿಡಿಪ್‌ ಸಿಎಂ, ಏನೀಗ? ಎಂದ ಹೆಚ್.ಡಿ.ಕುಮಾರಸ್ವಾಮಿ !

ಬೆಂಗಳೂರು : ನಾನು ಲಕ್ಕಿಡಿಪ್‌ ಸಿಎಂ, ಏನೀಗ? ಈಗ ಪಟ್ಟದಲ್ಲಿ ಕೂತಿರುವ ನಿಮ್ಮ ಸಿಎಂ ಅವರೇನು ಚುನಾವಣೆಯಲ್ಲಿ ಜನಾದೇಶ ಪಡೆದ ಘೋಷಿತ ಮುಖ್ಯಮಂತ್ರಿಯಾ? ಎಂದು ಬಿಜೆಪಿ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಹೌದು. ನಾನು ಲಕ್ಕಿಡಿಪ್‌ ಸಿಎಂ, ಏನೀಗ? ಈಗ ಪಟ್ಟದಲ್ಲಿ ಕೂತಿರುವ ನಿಮ್ಮ ಸಿಎಂ ಅವರೇನು ಚುನಾವಣೆಯಲ್ಲಿ ಜನಾದೇಶ ಪಡೆದ ಘೋಷಿತ ಮುಖ್ಯಮಂತ್ರಿಯಾ? ಅವರೂ ಲಕ್ಕಿಡಿಪ್ಪು ಎಂಬುದನ್ನು ಮರೆತರೆ ಹೇಗೆ?

ಅಧಿಕಾರದ ನೆರಳೂ ಕಾಣದೆ ಬೆಂಗೆಟ್ಟಿದ್ದ ಬಿಜೆಪಿಗೆ ರಾಜ್ಯದಲ್ಲಿ ಕುರ್ಚಿರುಚಿ ತೋರಿಸಿದ ಅಂದಿನ 20:20 ಸರಕಾರದ ಡಿಸಿಎಂ ಆಗಿದ್ದ ನಿಮ್ಮವರನ್ನೇ ಕೇಳಿ. ನಿಮ್ಮಲ್ಲೆಷ್ಟು ಲಕ್ಕಿಡಿಪ್‌ʼಗಳಿದ್ದಾರೆ ಎಂಬುದನ್ನು ಅವರೇ ಹೇಳುತ್ತಾರೆ, ಸತ್ಯ ಸಾಕ್ಷಾತ್ಕಾರ ಮಾಡಿಸುತ್ತಾರೆ ಎಂದು ಕಿಡಿಕಾರಿದ್ದಾರೆ.

ಲಕ್ಕಡಿಪ್‌ ಸಿಎಂ ಎಂದರೆ ಅಪಮಾನವೇನೂ ಅಲ್ಲ ನನಗೆ. ಆಕಸ್ಮಿಕ ಮುಖ್ಯಮಂತ್ರಿ ಎಂದು ಅನೇಕ ಸಲ ಹೇಳಿದ್ದೇನೆ. ಆದರೆ, ʼಆಪರೇಷನ್‌ ಕಮಲದ ಸಿಎಂʼ ಎನ್ನುವುದಕ್ಕಿಂತಾ ಕೀಳಾ ಅದು? ಯಾವುದು ಮೇಲು? ಯಾವುದು ಕೀಳು? ಸ್ವಲ್ಪ ಹೇಳಿ? ಎಂದು ವ್ಯಂಗ್ಯವಾಡಿದ್ದಾರೆ.

ಇನ್ನು, ಜಗತ್ತಿನ ಅಂಕುಡೊಂಕಿನ ಮಾತು ಹಾಗಿರಲಿ. ಪ್ರಧಾನಿಮಂತ್ರಿ ಸಂಚರಿಸಿದ ರಸ್ತೆಯನ್ನೇ ನೋಡಿದರೆ ಸಾಕು, ಅರಿವಾಗುತ್ತದೆ ನಿಮ್ಮ ಅಂಕೆಷ್ಟು, ಡೊಂಕೆಷ್ಟು! ಮಿಷನ್‌ ದಕ್ಷಿಣ್‌ʼ ಮೂಲ ತಾತ್ಪರ್ಯ ಏನು? ಮೈಸೂರಿನಲ್ಲಿ ಯೋಗಾಸನ, ಹೈದರಾಬಾದ್‌ʼನಲ್ಲಿ ಮಂಥನ. ಅದರ ಮರ್ಮ ಅರಿಯದವರು ಯಾರೂ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕದಲ್ಲಿ ನೀವು ಅಧಿಕಾರಕ್ಕೆ ಬಂದಿದ್ದೇ ಜೆಡಿಎಸ್‌ ಕೃಪೆಯಿಂದ. ಸ್ವಪಕ್ಷವನ್ನೇ ಒಡೆದು ನನ್ನ ಜತೆ ಬರಲು ರೆಡಿ ಇದ್ದ ಆ ನಿಮ್ಮ ನಾಯಕರನ್ನು ನಾನೇ ತಡೆಯದೇ ಇದ್ದಿದ್ದರೆ, ನೀವು ಮತ್ತು ನಿಮ್ಮ ಪಕ್ಷ ಆವತ್ತೇ ನಡುನೀರಿನಲ್ಲಿ ಮುಳುಗಿಹೋಗುತ್ತಿದ್ದಿರಿ. ಅನುಮಾನ ಇದ್ದರೆ ಒಮ್ಮೆ ಅವರನ್ನೇ ಕೇಳಿ. ನನ್ನ ನಡುಕದ ಬಗ್ಗೆ ಆಮೇಲೆ ಮಾತನಾಡಿ ಎಂದು ತಿರುಗೇಟು ನೀಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಉದ್ಧವ್​ ಠಾಕ್ರೆ ವಿರುದ್ಧ ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ ಲೇವಡಿ

Wed Jul 6 , 2022
ಕಲಬುರಗಿ: ನೀವು ನೆಟ್ಟಗೆ ಇಟ್ಟುಕೊಂಡು ಕಂಟ್ರೋಲ್​ ಮಾಡದೆ ಹೋದ್ರೆ ನಿನ್​ ಹೆಂಡ್ತೀನೂ ಓಡಿ ಹೋಗ್ತಾಳೆ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ವಿರುದ್ಧ ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ ಲೇವಡಿ ಮಾಡಿದ್ದಾರೆ. ಠಾಕ್ರೆ ವಿರುದ್ಧ ಕೆಂಡಕಾರುವ ಭರದಲ್ಲಿ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಯಾವ ಪಕ್ಷದಲ್ಲಿ ಶಿಸ್ತು, ನಾಯಕತ್ವ ಇರುವುದಿಲ್ಲವೋ ಆ ಪಕ್ಷ ಪ್ರಜಾಪ್ರಭುತ್ವದಲ್ಲಿ ಉಳಿಯುವುದಿಲ್ಲ ಎಂದು ಮಹಾರಾಷ್ಟ್ರದಲ್ಲಿನ ರಾಜಕೀಯ ವಿದ್ಯಮಾನಗಳ ಕುರಿತು ವಿಶ್ಲೇಷಿಸಿದರು. ಸಿಎಂ […]

Advertisement

Wordpress Social Share Plugin powered by Ultimatelysocial