ಕುಮಾರಸ್ವಾಮಿಗೆ ಇರುವಷ್ಟು ಬುದ್ದಿ, ತಿಳಿವಳಿಕೆ ಯಾರಿಗೂ ಇಲ್ಲ: ಡಿ.ಕೆ. ಸುರೇಶ್ ಟಾಂಗ್

ರಾಮನಗರ: ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿರುವುದಕ್ಕೆ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಟಾಂಗ್ ಕೊಟ್ಟಿದ್ದಾರೆ.ಕುಮಾರಸ್ವಾಮಿ ಅವರು ಪ್ರಧಾನಮಂತ್ರಿ ಕುಟುಂಬದವರು.ಅವರಿಗೆ ಇರುವಷ್ಟು ಬುದ್ಧಿ, ತಿಳಿವಳಿಕೆ ರಾಜ್ಯದಲ್ಲಿ ಯಾರಿಗೂ ಇಲ್ಲ. ರಾಜ್ಯಕ್ಕಾಗಿ, ರಾಷ್ಟ್ರಕ್ಕಾಗಿ ಕುಮಾರಸ್ವಾಮಿಯವರು ಏನು ಹೇಳುತ್ತಾರೆಯೋ ಅದನ್ನು ಕೇಳಬೇಕು. ಪ್ರಶ್ನಿಸಬಾರದು ಎಂದು ಟಾಂಗ್ ಕೊಟ್ಟಿದ್ದಾರೆ.ಫೆಬ್ರವರಿ 27ರಿಂದ ಮೇಕೆದಾಟು ಎರಡನೇ ಹಂತದ ಪಾದಯಾತ್ರೆ ಆರಂಭವಾಗಲಿದ್ದು, ಕೆಂಗಲ್ ನಲ್ಲಿ ನಡೆದ ಪೂರ್ವಭಾವಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಸುರೇಶ್, ರಾಮನಗರದಲ್ಲಿ ಫೆಬ್ರವರಿ 27 ರಂದು ಬೆಳಿಗ್ಗೆ 9 ಗಂಟೆಗೆ ಮೇಕೆದಾಟು ಎರಡನೇ ಹಂತದ ಪಾದಯಾತ್ರೆಗೆ ಚಾಲನೆ ನೀಡಲಾಗುವುದು. 5 ದಿನಗಳ ಕಾಲ ಯಾತ್ರೆ ನಡೆಯಲಿದೆ. ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯ ಕಾಂಗ್ರೆಸ್ ನಾಯಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಶಾಸಕನ ತೋಟದ ಕಾರ್ಮಿಕನಿಂದ ಗೋಮಾಂಸ ಮಾರಾಟ: ತೋಟದ ಆಸುಪಾಸೇ ಇವನ ಕೃತ್ಯ..

Mon Feb 21 , 2022
ಚಿಕ್ಕಮಗಳೂರು: ಕಾಂಗ್ರೆಸ್‌ ಶಾಸಕ ಟಿ.ಡಿ ರಾಜೇಗೌಡರ ಅವರ ತೋಟದಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದ ಅಸ್ಸಾಂ ಮೂಲದ ಜಲೀಲ್ ಶೇಖ್‌ ಎಂಬಾತ ಹಿಂದೂ ಪರ ಸಂಘಟನೆಗಳ ಕೈಗೆ ಸಿಕ್ಕಿಬಿದ್ದಿದ್ದಾನೆ. ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ ರಾಜೇಗೌಡರ ತೋಟದಲ್ಲಿ ಕೆಲಸ ಮಾಡುವ ಈತ ಅಕ್ರಮವಾಗಿ ಗೋಮಾಂಸ ಸಾಗಾಣೆ ಮಾಡುತ್ತಿದ್ದ. ಚಿಕ್ಕಮಗಳೂರಿನಿಂದ ಅಕ್ರಮವಾಗಿ ಗೋ ಮಾಂಸವನ್ನು ತಂದು ಶಾಸಕರ ತೋಟದ ಲೈನ್ ಜನರಿಗೆ ಗೋಮಾಂಸ ಸಾಗಾಟ ಮಾಡುತ್ತಿದ್ದ ಈತ. 10 ಕೆ.ಜಿ ಗೋಮಾಂಸದೊಂದಿಗೆ ಈತ ಹಿಂದೂ ಸಂಘಟನೆಯ […]

Advertisement

Wordpress Social Share Plugin powered by Ultimatelysocial