ಕುಂದಗೋಳ ತಾಲೂಕಿನ ಯರಗುಪ್ಪಿಯಲ್ಲಿ ಕುರಿಗಾಹಿ ಮಹಿಳೆ ಕಟ್ಟಿಗೆ ತರಲು ಹೋಗಿದ್ದಾಗ ಆಕೆ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಗುಪ್ಪಿಯಲ್ಲಿ ನಡೆದ ಕುರಿಗಾಹಿ ಮಹಿಳೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು 24 ಗಂಟೆಗಳಲ್ಲೇ ಭೇದಿಸಿರುವ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಕೊಲೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಕೈಗೊಂಡಿದ್ದೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ಕೃಷ್ಣಕಾಂತ ಹೇಳಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ಕೃಷ್ಣಕಾಂತನಗರದಲ್ಲಿಂದು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಕೊಲೆ ಪ್ರಕರಣ ಹಿನ್ನೆಲೆಯಲ್ಲಿ ಕೇವಲ 24 ಗಂಟೆಯೊಳಗಾಗಿ ಕೊಲೆ ಆರೋಪಿಯನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆ ಹಾಗೂ ಕುಂದಗೋಳ ಪೊಲೀಸ್ ಠಾಣೆ ಸಿಬ್ಬಂದಿ ಕಾರ್ಯಾಚರಣೆ ಯಶಸ್ವಿಯಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ಕೃಷ್ಣಕಾಂತಕುಂದಗೋಳದ ಯರಗುಪ್ಪಿಯಲ್ಲಿ ಕುರಿಗಾಹಿ ಮಹಿಳೆಯೊಬ್ಬರು ಕಟ್ಟಿಗೆ ತರಲು ಹೋಗಿದ್ದಾಗ ಆಕೆ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿ ಬಳಿಕ ಆಕೆಯ ಮೈಮೇಲಿನ‌ ಬಂಗಾರದ ಆಭರಣಗಳನ್ನು ದೋಚಿ ಪರಾರಿಯಾಗಿದ್ದ ಆರೋಪಿ ಮಹಮ್ಮದ್ ಅಲಿ ಮಕ್ಬುಲಾ ಕೋಲಕಾರ ಎಂಬುವನನ್ನು ಕಾರ್ಯಾಚರಣೆ ಮೂಲಕ ವಶಕ್ಕೆ ಪಡೆಯಲಾಗಿದೆ ಎಂದು ಎಸ್​ಪಿ ಮಾಹಿತಿ ನೀಡಿದರು.

ಅಲ್ಲದೇ, ಮಹಿಳೆ ಮೇಲಿನ ಬಂಗಾರದ ಆಭರಣಗಳಾದ ಮಾಂಗಲ್ಯ ಸರ, ಕಿವಿಯೋಲೆ, ಕಾಲುಚೈನ್ ಸೇರಿದಂತೆ ಇತರೆ ವಸ್ತುಗಳ ಜಪ್ತಿ ಕುರಿತಂತೆ ತನಿಖೆ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

"ನಾವು ಮೋಸ ಹೋಗದಂತೆ, ಸೋತು ಹೋಗದಂತೆ ತಡೆಯಲು ಚಾಣಕ್ಯ ಕೆಲವು ನೀತಿಗಳನ್ನು ತಿಳಿಸಿಕೊಟ್ಟಿದ್ದಾನೆ"

Mon Feb 21 , 2022
ನಾವು ಮೋಸ ಹೋಗದಂತೆ, ಸೋತು ಹೋಗದಂತೆ ತಡೆಯಲು ಚಾಣಕ್ಯ ಕೆಲವು ನೀತಿಗಳನ್ನು ತಿಳಿಸಿಕೊಟ್ಟಿದ್ದಾನೆ. ಅದರಂತೆ ನಡೆದುಕೊಂಡರೆ ಆಗಬಹುದಾದ ದೊಡ್ಡ ಅನಾಹುತದಿಂದ ಆದರೂ ನಮ್ಮನ್ನು ನಾವು ರಕ್ಷಿಸಿಕೊಳ್ಳಬಹುದು.ಜೀವನದಲ್ಲಿ ಎಷ್ಟು ಎಚ್ಚರವಿದ್ದರೂ ಸಾಕಾಗುವುದಿಲ್ಲ. ಹಲವು ಬಾರಿ ಎಷ್ಟು ಜಾಗರೂಕರಾಗಿ ಇದ್ದರೂ ಎಡವಿ ಬೀಳುತ್ತೇವೆ. ಮೋಸ ಹೋಗುತ್ತೇವೆ. ಎಷ್ಟೇ ಅಚ್ಚುಕಟ್ಟಿನ ಜೀವನ ನಮ್ಮದಾಗಿದ್ದರೂ ಸಣ್ಣ ತಪ್ಪು ಹೆಜ್ಜೆಯೂ ಭಾರೀ ದೊಡ್ಡ ಸಮಸ್ಯೆಗೆ ಕಾರಣ ಆಗಬಹುದು. ನಮಗೆ ತಿಳಿದವರು, ತಿಳಿಯದವರು ಯಾರೂ ಕೂಡ ಮೋಸ ಮಾಡುವ […]

Advertisement

Wordpress Social Share Plugin powered by Ultimatelysocial