ಬೀಜಿಂಗ್‌: ಮಹಿಳೆಯರ ಸ್ಲಾಲೊಮ್ ಕ್ರೀಡೆಯಲ್ಲಿ ಇತ್ತೀಚಿನ ದಿನಗಳಲ್ಲಿ ಅಮೋಘ ಸಾಧನೆ!

ಮಹಿಳೆಯರ ಸ್ಲಾಲೊಮ್ ಕ್ರೀಡೆಯಲ್ಲಿ ಇತ್ತೀಚಿನ ದಿನಗಳಲ್ಲಿ ಅಮೋಘ ಸಾಧನೆ ಮಾಡುತ್ತಿರುವ ಪೆಟ್ರಾ ಹೋವ ಒಲಿಂಪಿಕ್ಸ್‌ನಲ್ಲೂ ಚಿನ್ನದ ಸಾಧನೆ ಮಾಡಿದರು. ಇಲ್ಲಿ ನಡೆಯುತ್ತಿರುವ ಚಳಿಗಾಲದ ಒಲಿಂಪಿಕ್ಸ್‌ನಲ್ಲಿ ಬುಧವಾರ ಅಮೋಘ ಸಾಧನೆ ಮಾಡಿದ ಅವರು ಸ್ಲೊವಾಕಿಯಾಗೆ ಅಲ್ಪೈನ್ ಸ್ಕೀಯಿಂಗ್‌ನಲ್ಲಿ ಮೊದಲ ಚಿನ್ನ ಗೆದ್ದುಕೊಟ್ಟರು.ಎರಡು ಬಾರಿಯ ಒಲಿಂಪಿಕ್ ಚಾಂಪಿಯನ್ ಮಿಕೇಲಾ ಶಿಫ್ರಿನ್ ನಿರಾಶೆಗೊಳಗಾದರು. ವಿಶ್ವಕಪ್ ಸ್ಲಾಲೊಮ್ ಬುಧವಾರ ಆರಂಭದಲ್ಲಿ ನೀರಸ ಆಟವಾಡಿದರೂ ನಂತರ ಚೇತರಿಸಿಕೊಂಡು ಲೇನಾ ಡೂರ್ ಅವರನ್ನು ಹಿಂದಿಕ್ಕಿದರು.ಮೊದಲ ಡೋಪಿಂಗ್ ಪ್ರಕರಣಚಳಿಗಾಲದ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳುತ್ತಿರುವ ಇರಾನ್‌ನ ಏಕೈಕ ಪುರುಷ ಅಥ್ಲೀಟ್ ಹೊಸೇನ್ ಶವೆಯ್ ಶಮ್‌ಶಾಕಿ ಅವರು ಡೋಪಿಂಗ್ ಪ್ರಕರಣದಲ್ಲಿ ಸಿಲುಕಿದ್ದಾರೆ. ಆಲ್ಪೈನ್ ಸ್ಕೀಯಿಂಗ್‌ನಲ್ಲಿ ಸ್ಪರ್ಧಿಸಲು ಬಂದಿದ್ದ ಅವರು ಉದ್ದೀಪನ ಮದ್ದು ಸೇವಿಸಿದ್ದು ಸಾಬೀತಾಗಿದೆ ಎಂದು ಅಂತರರಾಷ್ಟ್ರೀಯ ಡೋಪ್‌ ಟೆಸ್ಟಿಂಗ್ ಏಜನ್ಸಿ ತಿಳಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬೆಂಗಳೂರು: ರಾಜ್ಯದಲ್ಲಿ ಎದ್ದಿರುವಂತ ಹಿಜಾಬ್ ಮತ್ತು ಕೇಸರಿ ಶಾಲು!

Thu Feb 10 , 2022
ಬೆಂಗಳೂರು: ರಾಜ್ಯದಲ್ಲಿ ಎದ್ದಿರುವಂತ ಹಿಜಾಬ್  ಮತ್ತು ಕೇಸರಿ ಶಾಲು ಸಂಘರ್ಷಕ್ಕೆ ಹೊರಗಡೆಯವರು ಪ್ರಚೋದನೆ ನೀಡುತ್ತಿದ್ದಾರೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು  ಗಂಭೀರ ಆರೋಪ ಮಾಡಿದ್ದಾರೆ.ಇಂದು ನಗರದಲ್ಲಿ ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಈಗಾಗಲೇ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಕುರಿತಂತೆ ಹಲವರು, ಹಲವು ರೀತಿಯ ಹೇಳಿಕೆ ನೀಡುತ್ತಿದ್ದಾರೆ. ದಯವಿಟ್ಟು ಯಾರೂ ಪ್ರಚೋದಿಸಬೇಡಿ. ಎಲ್ಲರೂ ಶಾಂತಿಯಿಂದ ವರ್ತಿಸೋಣ ಎಂಬುದಾಗಿ ಮನವಿ ಮಾಡಿದರು.ಈ ಸಂಬಂಧದ ಪ್ರಕರಣ ಕೋರ್ಟ್ ನಲ್ಲಿ ವಿಚಾರಣೆ […]

Advertisement

Wordpress Social Share Plugin powered by Ultimatelysocial