ಶಾಲೆ, ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಸೂಕ್ತ ಬಸ್‌ ವ್ಯವಸ್ಥೆಇಲ್ಲದೆವಿದ್ಯಾರ್ಥಿಗಳು ನಿತ್ಯ ಪರದಾಡುವಂತಾಗಿದೆ.

ಲಕ್ಷ್ಮೇಶ್ವರ ಪಟ್ಟಣದಿಂದ ಬೆಳ್ಳಟ್ಟಿ ಹಾಗೂ ಇತರೆ ಗ್ರಾಮಗಳಿಗೆ ಶಾಲೆ, ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಸೂಕ್ತ ಬಸ್‌ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳು ನಿತ್ಯ ಪರದಾಡುವಂತಾಗಿದೆ ತಾಲೂಕಿನ ಹರದಗಟ್ಟಿ ಗ್ರಾಮದಲ್ಲಿ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದರು.ಬಸ್‌ ಬಾರದೆ ಹೋದರೆ ಶಾಲೆ, ಕಾಲೇಜು ವಿದ್ಯಾರ್ಥಿಗಳು ತರಗತಿಗಳಿಂದ ವಂಚಿತರಾಗಬೇಕಾಗಿದೆ. ಸಮಯಕ್ಕೆ ಸರಿಯಾಗಿ ಬಸ್‌ ಸೌಲಭ್ಯ ಕಲ್ಪಿಸುವಂತೆ ವಿದ್ಯಾರ್ಥಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಕ್ರಮ ಕೈಗೊಂಡಿಲ್ಲ. ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಂದ ಮನೆಗೆ ತೆರಳಬೇಕಾದರೂ ಬಸ್‌ಗಳಿಲ್ಲದೆ, ಪರ್ಯಾಯ ಮಾರ್ಗವಿಲ್ಲದೆ ಕಷ್ಟ ಪಡುತ್ತಿದ್ದಾರೆ.ಈ ಬಗ್ಗೆ ಹರದಗಟ್ಟಿ, ಹೀರೆಮಲ್ಲಾಪೂರ, ಅಮಾರಪುರ, ಹುಲ್ಲುರು ಸೇರಿ ಹಲವು ಗ್ರಾಮಗಳ ವಿದ್ಯಾರ್ಥಿಗಳು ಹಾಗೂ ಗ್ರಾಮಗಳ ಯುವಕರು ಸ್ಥಳೀಯ ಕೆಎಸ್‌ಆರ್‌ಟಿಸಿ ಘಟಕದ ವ್ಯವಸ್ಥಾಪಕರಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ.ಗ್ರಾಮೀಣ ಭಾಗಗಳಿಗೆ ಒಂದೊಂದೆ ಬಸ್‌ಗಳು ಸಂಚರಿಸುತ್ತಿದ್ದು , ಆ ಬಸ್ ಗಳು ಬಂದ್ ಮಾಡಿದ್ದಾರೆ, ವಿದ್ಯಾರ್ಥಿಗಳಿಗೆ ಆ ಬಸ್‌ ತಪ್ಪಿದರೆ ಅಂದು ತರಗತಿಗೇ ಗೈರಾಗಬೇಕಿದೆ. ಹರದಗಟ್ಟಿ ಗ್ರಾಮಕ್ಕೆ ಬಸ್ ಬಾರದ್ದರಿಂದ ವಿದ್ಯಾರ್ಥಿಗಳು ಗ್ರಾಮದಿಂದ ಮೂರು ಕಿ.ಮೀ ರಸ್ತೆಯವರೆಗೂ ನಡೆದುಕೊಂಡು ಬಂದು ಬಸ್‌ ಹಿಡಿಯಬೇಕು.ಹರದಗಟ್ಟಿ ಗ್ರಾಮದಲ್ಲಿ ಬಸ್ ಸೌಲಭ್ಯಕ್ಕಾಗಿ ಬಸ್ ತೆಡೆದು ಪ್ರತಿಭಟನೆ ನಡೆಸುತ್ತಿರುವುದು ಒಂದು ಕಡೆಯಾದರೆ, ಇನ್ನೊಂದಡೆ ಬಸ್ ಕಲ್ಪಿಸುವಂತೆ ತಾಲೂಕಿನ ಗುಲಗಂಜಿಕೊಪ್ಪ ಗ್ರಾಮದ ವಿದ್ಯಾರ್ಥಿಗಳು ಪೋಲಿಸ್ ಠಾಣೆಗೆ ತೆರಳಿದ್ದಾರೆ, ನಮಗೆ ಡಿಪೋ ಮ್ಯಾನೇಜರ್ ಬೇಜವಾಬ್ದಾರಿಯ ಉತ್ತರ ನೀಡಿತ್ತಾರೆ, ನಮ್ಮ ಸಮಸ್ಯೆಗೆ ಕ್ಯಾರೆ ಎನ್ನುತ್ತಿಲ್ಲ, ನೀವಾದರೂ ನಮ್ಮ ಸಮಸ್ಯೆ ಗೆ ಪರಿಹಾರ ಕೊಡಿಸಿ ಎಂದು ಪೋಲಿಸ್ ಗೆ ವಿದ್ಯಾರ್ಥಿಗಳು ಮನವಿ ಮಾಡಿದರು‌.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:
Please follow and like us:

Leave a Reply

Your email address will not be published. Required fields are marked *

Next Post

ತಕ್ಷಣ ಬೇಕಾಗಿದ್ದರೆ...

Thu Dec 22 , 2022
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/de…. Please follow and like us:

Advertisement

Wordpress Social Share Plugin powered by Ultimatelysocial