ಸಂತೋಷ್ ಕುಟುಂಬಕ್ಕೆ 1 ಕೋಟಿ ರೂ.ಪರಿಹಾರ ನೀಡಬೇಕು. ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಆಗ್ರಹಿಸಿದ್ದಾರೆ.

ಬೆಳಗಾವಿ : ರಾಜ್ಯ ಸರ್ಕಾರ ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಂತೋಷ್ ಕುಟುಂಬಕ್ಕೆ 1 ಕೋಟಿ ರೂ.ಪರಿಹಾರ ನೀಡಬೇಕು. 4 ಕೋಟಿ ರೂ. ಬಿಲ್ ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಆಗ್ರಹಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಮೂವರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಎಫ್ ಐಆರ್ ಆಗಿದ್ದರೂ ಆರೋಪಿಗಳ ಬಂಧನವಾಗಿಲ್ಲ. ಮೂವರು ಬಂಧಿಸಲು ಸಂತೋಷ್ ಮೊಬೈಲ್ ನಲ್ಲಿ ಸಾಕ್ಷ್ಯವಿದೆ. ಆದರೆ ಈವರೆಗೆ ಏಕೆ ಬಂದಿಸಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.

ಕೆ.ಎಸ್. ಈಶ್ವರಪ್ಪನವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಸಚಿವ ಸಂಪುಟದಿಂದ ಈಶ್ವರಪ್ಪನವರನ್ನು ವಜಾ ಮಾಡಬೇಕು. ಸಚಿವ ಕೆ.ಎಸ್.ಈಶ್ವರಪ್ಪರನ್ನು ಬಂಧಿಸಿ ಶಿಕ್ಷೆಯಾಗಬೇಕು. ಪ್ರಕರಣವನ್ನು ಸಿಬಿಐಗೆ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬುಧವಾರ ರಾತ್ರಿ ಖಾಸಗಿ ಹೋಟೆಲ್’ನಲ್ಲಿ ಸುರ್ಜೆವಾಲರನ್ನು ಭೇಟಿ ಮಾಡಿದ್ದಾರೆ.ಜಮೀರ್ ಅಹಮದ್

Thu Apr 14 , 2022
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಅಸಮಾಧಾನ ಮುಂದುವರಿದಿದೆ. ಬುಧವಾರ ರಾತ್ರಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲರನ್ನು ಭೇಟಿಯಾಗಿದ್ದ ಜಮೀರ್ ಅಹಮದ್ ಕೈ ನಾಯಕರ ವಿರುದ್ಧದ ತನ್ನ ಅಸಮಾಧಾನವನ್ನು ತೋಡಿಕೊಂಡಿದ್ದಾರೆ. ರಾಜ್ಯ ಕಾಂಗ್ರೆಸ್ ನಾಯಕರಿಂದ ಅಂತರ ಕಾಯ್ದುಕೊಂಡಿರುವ ಜಮೀರ್, ಕೆಪಿಸಿಸಿ ಕಚೇರಿಯಲ್ಲಿ ಕರೆದ ಸಭೆಗಳಿಗೆ ಹಾಜರಾಗಿಲ್ಲ. ಬುಧವಾರ ರಾತ್ರಿ ಖಾಸಗಿ ಹೋಟೆಲ್’ನಲ್ಲಿ ಸುರ್ಜೆವಾಲರನ್ನು ಭೇಟಿ ಮಾಡಿದ್ದಾರೆ. ಭೇಟಿ ವೇಳೆಯ ವೇಳೆ ಮುಸ್ಲಿಂ […]

Advertisement

Wordpress Social Share Plugin powered by Ultimatelysocial