ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರಿಂದ ಭೂಮಿ ಪೂಜೆ.

ಮುಖ್ಯ ಮಂತ್ರಿಗಳ ಅಮೃತ ನಗರೋತ್ಥಾನ ಯೋಜನಯಡಿ ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಶಾಸಕ‌ನಿರಂಜನ್ ಕುಮಾರ್ ಭೂಮಿ‌ಪೂಜೆ ನೆರವೇರಿಸಿದರು.ಪಟ್ಟಣದ ಅಶ್ವಿನಿ ಬಡಾವಣೆಯಲ್ಲಿ ಸುಮಾರು 60 ಲಕ್ಷ ರೂ ವೆಚ್ಚದಲ್ಲಿ ಚರಂಡಿ ಮತ್ತು ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಶಾಸಕ ನಿರಂಜನ್ ಕುಮಾರ್ ಗುಂಡ್ಲುಪೇಟೆ ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ಮುಖ್ಯ ಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿ ಹಣ ಬಿಡುಗಡೆ ಮಾಡಿದೆ ಈ ನಿಟ್ಟಿನಲ್ಲಿ ಪಟ್ಟಣದ ವಿವಿಧ ವಾರ್ಡ್ ಗಳಲ್ಲಿ ಅಭಿವೃದ್ಧಿ ಕಾರ್ಯವನ್ನು ಕೈಗೊಳ್ಳಲಾಗಿದೆ ಎಂದರು.ಅಶ್ವಿನಿ ಬಡಾವಣೆಯ ಹಲವಾರು ವರ್ಷಗಳ ಬೇಡಿಕೆಯಾದ ಕಾಂಕ್ರೀಟ್ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ ಮತ್ತು ಕುಡಿಯುವ ನೀರಿನ ಸಮಸ್ಯೆಯನ್ನು ಬಹುಪಾಲು ‌ನಿವಾರಿಸಲಾಗಿದೆ ಮತ್ತು ಮನೆಯಲ್ಲಿ ಕಸ ಸಂಗ್ರಹಣೆ ಮಾಡುವುದರ ಮೂಲಕ ಸ್ವಚ್ಚತೆಗೆ ಆದ್ಯತೆ ನೀಡಲಾಗಿದೆ ಈಗಾಗಲೇ157 ಕೋಟಿ ರೂ ವೆಚ್ಚದಲ್ಲಿ ಪಟ್ಟಣಕ್ಕೆ ಕಬಿನಿ ಕುಡಿಯುವ ನೀರಿನ ಎಕ್ಸ್ ಪ್ರೆಸ್ ಲೈನ್ ಯೋಜನೆಗೆ ಟೆಂಡರ್ ಕರೆಯಲಾಗಿದ್ದು ಶೀಘ್ರದಲ್ಲೇ ಕಾರ್ಯರಂಭ ಮಾಡಲಿದೆ ಎಂದು ಹೇಳಿದರು.ಅಶ್ವಿನಿ ಬಡಾವಣೆಯಲ್ಲಿ ಇ ಸ್ವತ್ತಿ ಗೆ ಸಂಬಂಧಿಸಿದಂತೆ ಸಮಸ್ಯೆ ಇದ್ದು ಸರಕಾರದ ಮಟ್ಟದಲ್ಲಿ ಚರ್ಚೆಯಾಗಿದ್ದು ಮುಂದಿನ ದಿನಗಳಲ್ಲಿ ಇದರ ಸಮಸ್ಯೆ ಬಗೆಹರಿಯಲಿದ್ದು ಇದರಿಂದ ನಿವೇಶನ ಕೊಳ್ಳಲು ಮತ್ತು ಮನೆ ನಿರ್ಮಿಸಲು ಅನುಕೂಲವಾಗಲಿದೆ ಎಂದರು.ಸರ್ಕಾರ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಹಣ ಬಿಡುಗಡೆ ಮಾಡುತ್ತದೆ ಗುತ್ತಿಗೆದಾರರು ಉತ್ತಮ ಗುಣಮಟ್ಟದಲ್ಲಿ ರಸ್ತೆ ಮತ್ತು ಚರಂಡಿ ಕಾಮಗಾರಿಗಳನ್ನು ನಿರ್ಮಾಣ ಮಾಡುವಂತೆ ಹೇಳಿದರು.ನಂತರ ಕೆ.ಎಸ್ ಎನ್ ಬಡಾವಣೆ ,ಬರಗಿ ಅಶ್ವಿನಿ ಬಡಾವಣೆ ,ಮಾರಿಗುಡಿ ಮತ್ತು ಕೊತ್ವಾಲ್ ಚಾವಡಿ ವೃತ್ತದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಭೂಮಿ ಪೂಜೆ ನೆರವೇರಿಸಿದರು.ಕಾರ್ಯಕ್ರಮದಲ್ಲಿ ಪುರಸಭಾ ಅಧ್ಯಕ್ಷ ಪಿ.ಗಿರೀಶ್, ಉಪಾಧ್ಯಕ್ಷೆ ದೀಪಿಕಾ ಅಶ್ವಿನ್, ಪುರಸಭಾ ಸದಸ್ಯರಾದ ನಾಗೇಶ್ ರಂಗಸ್ವಾಮಿ ,‌ಶ್ರೀನಿವಾಸ್, ಕಿರಣ್ ,ಸಿದ್ಧಯ್ಯ, ಪುರಸಭಾ ಮುಖ್ಯಾಧಿಕಾರಿ ಹೇಮಂತ್ ರಾಜ್ ಬಿಜೆಪಿ ಯುವ ಮುಖಂಡ ಜಗದೀಶ್.ಇನ್ನಿತರರು ಉಪಸ್ಥಿತರಿದ್ದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸುರಕ್ಷಿತ ಕ್ಷೇತ್ರವೆಂದು ಕೋಲಾರದತ್ತ ಮುಖ ಮಾಡಿದ ಸಿದ್ದರಾಮಯ್ಯ.

Thu Jan 12 , 2023
ಈ ಬಾರಿಯ ವಿಧಾನಸಭೆ ಚುನಾವಣೆಗೆ ಕೋಲಾರ ಕ್ಷೇತ್ರ ಸುರಕ್ಷಿತ ಎಂದು ಭಾವಿಸಿಕೊಂಡು ಕಾಂಗ್ರೆಸ್ ಶಾಸಕಾಂಗ ಪಕ್ಷ (CLP)ನಾಯಕ ಸಿದ್ದರಾಮಯ್ಯ ಆಯ್ಕೆ ಮಾಡಿಕೊಳ್ಳುತ್ತಿದ್ದಂತೆ, ಕಾಂಗ್ರೆಸ್ ನ ಘಟಾನುಘಟಿ ನಾಯಕರು ಕೂಡ ಸುರಕ್ಷಿತ ಕ್ಷೇತ್ರದ ಹುಟುಕಾಟ ನಡೆಸುತ್ತಿದ್ದಾರೆ. ಬೆಂಗಳೂರು: ಈ ಬಾರಿಯ ವಿಧಾನಸಭೆ ಚುನಾವಣೆಗೆ ಕೋಲಾರ ಕ್ಷೇತ್ರ ಸುರಕ್ಷಿತ ಎಂದು ಭಾವಿಸಿಕೊಂಡು ಕಾಂಗ್ರೆಸ್ ಶಾಸಕಾಂಗ ಪಕ್ಷ (CLP)ನಾಯಕ ಸಿದ್ದರಾಮಯ್ಯ ಆಯ್ಕೆ ಮಾಡಿಕೊಳ್ಳುತ್ತಿದ್ದಂತೆ, ಕಾಂಗ್ರೆಸ್ ನ ಘಟಾನುಘಟಿ ನಾಯಕರು ಕೂಡ ಸುರಕ್ಷಿತ ಕ್ಷೇತ್ರದ ಹುಟುಕಾಟ ನಡೆಸುತ್ತಿದ್ದಾರೆ. […]

Advertisement

Wordpress Social Share Plugin powered by Ultimatelysocial