ಲಕ್ಷ್ಮೇಶ್ವರ ತಾಲ್ಲೂಕಿನ ಹಲವೆಡೆ ಜಲಜೀವನ ಮಿಷನ್(ಜೆಜೆಎಂ) ಯೋಜನೆ

(ಜೆಜೆಎಂ) ಯೋಜನೆಯಲ್ಲಿ ಅಕ್ರಮ ಹಾಗೂ ಕಾಮಗಾರಿ ಕಳಪೆ ನಡೆಯುತ್ತಿದೆ ಎಂದು ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆ ತಾಲೂಕ ಅಧ್ಯಕ್ಷ ಸೋಮಣ್ಣ ಬೆಟಗೇರಿ ಆರೋಪಿಸಿದರು.

ಲಕ್ಷ್ಮೇಶ್ವರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು
2024ರ ಒಳಗೆ ಪ್ರತಿಯೊಂದು ಮನೆ ಮನೆಗೆ ಶುದ್ಧ ಕುಡಿಯುವ ನೀರು ಒದಗಿಸುವ ಕಾಮಗಾರಿಯಲ್ಲಿ ಅಧಿಕಾರಿಗಳ ಬೇಜವಾಬ್ದಾರಿತನ ಹಾಗು ಗುತ್ತಿಗೆದಾರ ಹಣಬಾಕತನದಿಂದಾಗಿ ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರು ಬಹುನಿರೀಕ್ಷಿತ ಜಲ ಜೀವನ ಮಿಷನ್ ಲಕ್ಷ್ಮೇಶ್ವರ ತಾಲೂಕಿನಲ್ಲಿ ಕಳಪೆ ಕಾಮಗಾರಿ ಹಾಗೂ ಅದರಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿದ ಅವರು, ನಮ್ಮ ಸಂಸ್ಥೆಯಿಂದ ಮಾಹಿತಿ ಕೇಳಿಲಾಗಿದ್ದು, ನಮಗೆ ತಪ್ಪು ಮಾಹಿತಿ ನೀಡಿ ಸಾರ್ವಜನಿಕರಿಗೆ ದಿಕ್ಕು ತಪ್ಪಿಸುವ ಕೆಲಸ ಸಂಬಂಧಿಸಿದ ಅಧಿಕಾರಿಗಳು ಮಾಡುತ್ತಿದ್ದಾರೆ. ಲಕ್ಷ್ಮೇಶ್ವರ ತಾಲೂಕಿನಲ್ಲಿ 40 ಗ್ರಾಮದಲ್ಲಿ ಕಾಮಗಾರಿ ನಡೆದಿದ್ದು, 27 ಗ್ರಾಮದಲ್ಲಿ ಕಾಮಗಾರಿ ಪೂರ್ಣಗೊಂಡಿದೆ ಎಂದು ಮಾಹಿತಿಯಲ್ಲಿ ಹೇಳಲಾಗಿದೆ ಆದರೆ ಅದು ತಪ್ಪಾಗಿದೆ. ಮಾಹಿತಿ ಕಾಮಗಾರಿ ಪೂರ್ಣಗೊಂಡಿದೆ ಆದರೆ ಕೆಲಸ ಮಾತ್ರ ಅರ್ದ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಯೋಜನೆ ಅನುಷ್ಠಾನಗೊಳಿಸುವಲ್ಲಿ, ಗ್ರಾಮಗಳ ಆಯ್ಕೆ ಹಾಗೂ ಎಸ್ಟಿಮೇಟ್ ತಯಾರಿಕೆಯಿಂದ ಕಾಮಗಾರಿ ಮುಕ್ತಾಯ ದವರೆಗೆ ಹಾಗೂ ಅಂತಿಮ ಬಿಲ್ ಪಾವತಿಸುವವರೆಗೆ ಸಮರ್ಪಕವಾಗಿ ನಿರ್ವಹಣೆ ಮಾಡಲು ಬೇಜವಾಬ್ದಾರಿತನ ತೋರುತ್ತಿರುವ ಅಧಿಕಾರಿಗಳು ಹಾಗೂ ಯೋಜನೆಯ ಲಾಭ ಪಡೆಯಲು ಹವಣಿಸುತ್ತಿರುವ ಗುತ್ತಿಗೆದಾರರು, ಅಧಿಕಾರಿಗಳು ಸ್ಥಳದಲ್ಲಿ ನಿಂತು ಕಾಮಗಾರಿಯ ಗುಣಮಟ್ಟ ನೋಡಿಕೊಳ್ಳಲು ನಿರ್ಲಕ್ಷಿಸುತ್ತಿದ್ದಾರೆ. ಇದರ ಲಾಭ ಪಡೆಯುತ್ತಿರುವ ಗುತ್ತಿಗೆದಾರರು ಕಳಪೆ ಸಾಮಗ್ರಿಗಳನ್ನು ಅಳವಡಿಸಿ ಯಾಮಾರಿಸುವ ಕೆಲಸ ಮಾಡುತ್ತಿದ್ದಾರೆ.‌ ತಾಲೂಕಿನಲ್ಲಿ ಜಲ ಜೀವನ ಮಿಷನ್ ಯೋಜನೆಯಲ್ಲಿ ನಡೆದ ಅವ್ಯವಹಾರ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ಜಿಲ್ಲಾ ಅಧಿಕಾರಿಗಳ ಕಛೇರಿ ಮುಂದು ಧರಣಿ ನಡೆಸಲಾಗುವುದು ಎಂದು ಸೋಮಣ್ಣ ಬೆಟಗೇರಿ ಎಚ್ಚರಿಕೆ ನೀಡಿದರು..

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಹಡಪದ ಸಮಾಜದ ಅಭಿವೃದ್ಧಿಗಾಗಿ ಸರ್ಕಾರದ ಯೋಜನೆಗಳು ಬೇಕಾಗಿದೆ: ಗುಡ್ಡಪ್ಪ ಹಡಪದ.

Tue Jul 26 , 2022
12 ನೆಯ ಶತಮಾನದ ಮಹಾಶರಣ ಬಸವಣ್ಣನವರ ಅನುಭವ ಮಂಟಪದಲ್ಲಿ ಆಪ್ತ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಮಹಾಶರಣ ಹಡಪದ ಅಪ್ಪಣ್ಣನವರ ತತ್ವ ಆದರ್ಶ ಗುಣಗಳನ್ನು ಸಮಾಜ ಬಾಂಧವರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ತಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಿ ಸಮಾಜವನ್ನು ಮುಖ್ಯ ವಾಹಿನಿಗೆ ತರಬೇಕು ಎಂದು ಸಮಾಜದ ಮುಖಂಡ ವೀರಣ್ಣ ಹಡಪದ ಹೇಳಿದರು. ಅವರು ಲಕ್ಷ್ಮೇಶ್ವರ ಪಟ್ಟಣದಲ್ಲಿ ಏರ್ಪಡಿಸಿದ್ದ ಹಡಪದ ಅಪ್ಪಣ್ಣನವರ 888ನೇಯ ಜಯಂತಿಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಹಾಶರಣ ಹಡಪದ ಅಪ್ಪಣ್ಣನವರ […]

Advertisement

Wordpress Social Share Plugin powered by Ultimatelysocial