LATEST UPDATES : ಜಮ್ಮು ಮತ್ತು ಕಾಶ್ಮೀರ – ಇಬ್ಬರು ಉಗ್ರರ ಹತ್ಯೆ

ಜಮ್ಮು ಮತ್ತು ಕಾಶ್ಮೀರ - ಇಬ್ಬರು ಉಗ್ರರ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಬುಧವಾರ ರಾತ್ರಿ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರು ಎನ್‌ಕೌಂಟರ್‌ಗೆ ಬಲಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರೆಡ್ವಾನಿ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಶೋಧ ಕಾರ್ಯಾಚರಣೆಯ ವೇಳೆ ಉಗ್ರರು ಗುಂಡು ಹಾರಿಸಿದರು.

ಈ ವೇಳೆ ಎನ್‌ಕೌಂಟರ್ ಭುಗಿಲೆದ್ದಿದೆ. ಗುರುವಾರ ಮುಂಜಾನೆ ವರೆಗೂ ಮುಂದುವರಿದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರ ಬಲಿಯಾಗಿದೆ ಎಂದು ಪೊಲೀಸ್ ವಕ್ತಾರ ತಿಳಿಸಿದ್ದಾರೆ. ಇವರು ಯಾವ ಭಯೋತ್ಪಾದನಾ ಸಂಘಟನೆಗೆ ಸೇರಿದ ಉಗ್ರರು ಎಂಬುದು ತಿಳಿದು ಬಂದಿಲ್ಲ. ಈ ಕುರಿತು ತನಿಖೆ ನಡೆಸಲಾಗುತ್ತಿದೆ.

ನಿನ್ನೆ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಉಗ್ರನೊಬ್ಬ ಬಲಿಯಾಗಿದ್ದನು.

Please follow and like us:

Leave a Reply

Your email address will not be published. Required fields are marked *

Next Post

CRIME : ಪಾಗಲ್​ ಪ್ರೇಮಿಯ ಬೆದರಿಕೆ ಕರೆ: ಭಯಗೊಂಡ ಯುವತಿ ಆತ್ಮಹತ್ಯೆಗೆ ಶರಣು

Fri Dec 17 , 2021
ಪ್ರೀತಿಸು ಎಂದು ಪೀಡಿಸುತ್ತಿದ್ದ ಯುವಕನೊಬ್ಬ ಯುವತಿಯೊಬ್ಬಳಿಗೆ ಗೆಳೆಯನ ಮೂಲಕ ಬೆದರಿಕೆ ಕರೆ ಮಾಡಿಸಿದ ಪರಿಣಾಮ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ದೊಡ್ಡಬಿದರಕಲ್ಲು ಬಳಿ ನಡೆದಿದೆ. ಸಾಕ್ಷಿ (24) ಆತ್ಮಹತ್ಯೆಗೆ ಶರಣಾದ ಯುವತಿ.ಬೆಂಗಳೂರು: ಪಾಗಲ್​ ಪ್ರೇಮಿಯೊಬ್ಬ ಯುವತಿಯೊಬ್ಬಳಿಗೆ ಗೆಳೆಯನ ಮೂಲಕ ಬೆದರಿಕೆ ಕರೆ ಮಾಡಿಸಿದ ಪರಿಣಾಮ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ದೊಡ್ಡಬಿದರಕಲ್ಲು ಬಳಿ ನಡೆದಿದೆ . ಸಾಕ್ಷಿ (24) ಆತ್ಮಹತ್ಯೆಗೆ ಶರಣಾದ ಯುವತಿ […]

Advertisement

Wordpress Social Share Plugin powered by Ultimatelysocial