LATEST UPDATES : ಕನ್ನಡ ದ್ರೋಹಿಗಳ ವಿರುದ್ಧ ಕ್ರಮಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹ

ಕನ್ನಡ ದ್ರೋಹಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹ

ಬೆಂಗಳೂರು: ಕೊಲ್ಲಾಪುರದಲ್ಲಿ ನಮ್ಮ ಧ್ವಜ ದಹನ ಮಾಡಿರುವುದು ಅತ್ಯಂತ ನೀಚತನದ ಪರಮಾವಧಿ.ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟು ಕರ್ನಾಟಕ ಮತ್ತು ಕನ್ನಡಿಗರನ್ನು ಕೆಣಕಿರುವ ಎಂಇಎಸ್‌ ಪುಂಡರ ವಿರುದ್ಧ ಕಠಿಣವಾಗಿ ವರ್ತಿಸುವಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸರಕಾರವನ್ನು ಒತ್ತಾಯ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು; ಬಹುಭಾಷಾ ಪ್ರೇಮ, ಸಾಮರಸ್ಯ ಕನ್ನಡಿಗರ ದೌರ್ಬಲ್ಯವಲ್ಲ, ಔದಾರ್ಯ ಎಂದಿರುವ ಅವರು. ಕನ್ನಡ ದ್ರೋಹಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ವರ್ತಿಸಬೇಕು ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಎಂಇಎಸ್‌ ಪುಂಡರು ಕನ್ನಡ ಧ್ವಜಕ್ಕೆ ಅಪಮಾನ ಮಾಡಿರುವ ಘಟನೆ ಅತ್ಯಂತ ಹೇಯ. ಧ್ವಜವನ್ನು ಸುಟ್ಟು ವಿಕೃತಿ ಮೆರೆದಿರುವುದು ನೀಚ ಕೃತ್ಯ. ಅಖಂಡ ಕರ್ನಾಟಕದ ಆಸ್ಮಿತೆ ಸಾರುವ ನಮ್ಮ ಧ್ವಜದ ವಿಚಾರದಲ್ಲಿ ಆಗಿರುವ ಅಪಚಾರ ಕ್ಷಮಾರ್ಹವಲ್ಲ. ಬಹುಭಾಷಾ ಪ್ರೇಮ, ಸಾಮರಸ್ಯ ಕನ್ನಡಿಗರ ದೌರ್ಬಲ್ಯವಲ್ಲ, ಔದಾರ್ಯ. ಇದನ್ನು ಕಿಡಿಗೇಡಿಗಳು ಅರ್ಥ ಮಾಡಿಕೊಳ್ಳಬೇಕಿತ್ತು. ಈ ಪರಮ ಕಿರಾತಕ ಕೃತ್ಯಕ್ಕೆ ವಿರುದ್ಧ ರಾಜ್ಯ ಸರಕಾರ ಅತ್ಯಂತ ಕಠಿಣವಾಗಿ ವರ್ತಿಸಬೇಕು. ನಮ್ಮ ಧ್ವಜವನ್ನು ಅಪಮಾನಿಸಿದ ಕನ್ನಡ ದ್ರೋಹಿಗಳಿಗೆ ತಕ್ಕಶಾಸ್ತಿ ಮಾಡಬೇಕು ಎಂದಿದ್ದಾರೆ.

ಕನ್ನಡಕ್ಕಾಗಿ ಹೋರಾಡಿದವರನ್ನು ಕೂಡಲೇ ಬಿಡುಗಡೆ ಮಾಡಬೇಕು. ಒಂದು ವೇಳೆ; ಕನ್ನಡ ದ್ರೋಹಿಗಳನ್ನು ಹಾಗೆಯೇ ಬಿಟ್ಟರೆ ಕರ್ನಾಟಕ ನಿಮ್ಮನ್ನು ಕ್ಷಮಿಸುವುದಿಲ್ಲ. ತಕ್ಷಣವೇ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಕ್ರಮ ವಹಿಸಬೇಕು ಎಂಬುದಾಗಿ ಆಗ್ರಹಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಮಹಿಳೆಯರ ಮದುವೆ ವಯಸ್ಸಿನ ಮಿತಿ 21ವರ್ಷಕ್ಕೆ ಏರಿಕೆ

Thu Dec 16 , 2021
ಹಲವಾರು ತಜ್ಞರೊಟ್ಟಿಗೆ ವ್ಯಾಪಕವಾದ ಚರ್ಚೆ ನಡೆಸಿದ ಬಳಿಕ, ಅದರಲ್ಲೂ ಯುವ ವಯಸ್ಸಿನ ಮಹಿಳೆಯರೊಟ್ಟಿಗೆ ಆಳವಾಗಿ ಚರ್ಚಿಸಿದ ನಂತರ ಮದುವೆ ವಯಸ್ಸಿನ ಮಿತಿ ಏರಿಕೆಗೆ ಶಿಫಾರಸ್ಸು ಮಾಡಲಾಗಿದೆ. ಭಾರತದಲ್ಲಿ ಯುವತಿಯರಿಗೆ ಕನಿಷ್ಠ 18ವರ್ಷ ಆದ ವಿನಃ ಮದುವೆ ಮಾಡುವಂತೆ ಇಲ್ಲ ಎಂಬ ಕಾನೂನು ಇತ್ತು. ಅದನ್ನೀಗ ಬದಲಿಸಿ, ಮಹಿಳೆಯರ ಮದುವೆ ವಯಸ್ಸಿನ ಮಿತಿಯನ್ನು 21ಕ್ಕೆ ಏರಿಸುವ ಪ್ರಸ್ತಾಪವನ್ನು ಬುಧವಾರ ಕೇಂದ್ರ ಸಂಪುಟ ಅಂಗೀಕರಿಸಿದೆ. ಯುವತಿಯರ ಮದುವೆ ವಯಸ್ಸನ್ನು 18ವರ್ಷಕ್ಕೆ ನಿಗದಿಪಡಿಸಲಾಗಿದೆ. ಅದನ್ನು […]

Advertisement

Wordpress Social Share Plugin powered by Ultimatelysocial