ಲತಾ ಮಂಗೇಶ್ಕರ್‌ ಆರೋಗ್ಯ ಸ್ಥಿತಿ ಇಲ್ಲಿದೆ;

ಮುಂಬೈ: ಕೊರೊನಾ ಸೋಂಕಿಗೆ ತುತ್ತಾಗಿ, ಕೆಲ ವಾರದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಗಾಯಕಿ ಲತಾ ಮಂಗೇಶ್ಕರ್‌(92) ಅವರ ಆರೋಗ್ಯ ಸ್ಥಿರವಾಗಿದೆ. ಅವರಿಗೆ ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಲತಾ ಅವರಿಗೆ ಅಳವಡಿಸಲಾಗಿರುವ ವೆಂಟಿಲೇಟರ್‌ ಅನ್ನು ಗುರುವಾರ ಬೆಳಗ್ಗೆ ಪ್ರಾಯೋಗಿಕವಾಗಿ ತೆಗೆಯಲಾಗಿತ್ತು. ಆರೋಗ್ಯದಲ್ಲಿ ಕೊಂಚ ಪ್ರಗತಿ ಕಂಡುಬಂದಿದೆ. ಡಾ. ಸಾಮ್ದಾನಿ ಅವರ ತಂಡ ಚಿಕಿತ್ಸೆ ನೀಡುತ್ತಿದೆ. ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತಿರುವ ಎಲ್ಲರಿಗೂ ಧನ್ಯವಾದಗಳು ಎಂದು ಲತಾ ಅವರ ಕುಟುಂಬ ತಿಳಿಸಿದೆ.

ಅವರ ಆರೋಗ್ಯದ ಬಗ್ಗೆ ಯಾವುದೇ ಸುಳ್ಳು ಸುದ್ದಿ ಹರಡದಿರಿ ಎಂದು ಕುಟುಂಬಸ್ಥರು ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ದೆಹಲಿಯಲ್ಲಿ ಕಳೆದ 19 ದಿನದಲ್ಲಿ 106 ಮಂದಿ ಚಳಿಗೆ ಬಲಿ..!

Sat Jan 29 , 2022
ನವದೆಹಲಿ, ಜ.29- ಕೊರೆಯುವ ಚಳಿಯಿಂದಾಗಿ ದೆಹಲಿಯಲ್ಲಿ ಜನವರಿ 1 ರೀಂದ 19ರ ನಡುವೆ ಕನಿಷ್ಠಪಕ್ಷ 106 ಮಂದಿ ವಸತಿ ರಹಿತರು ಮೃತಪಟ್ಟಿದ್ದಾರೆ ಎಂದು ಸ್ವಯಂಸೇವಾ ಸಂಸ್ಥೆಯೊಂದು ಪ್ರತಿಪಾದಿಸಿದೆ.ಅಕೃತ ಅಂಕಿ-ಅಂಶವನ್ನು ಉದಾಹರಿಸಿರುವ ಸ್ವಯಂಸೇವಾ ಸಂಸ್ಥೆ ಸೆಂಟರ್ ಫಾರ್ ಹೋಲಿಸ್ಟಿಕ್ ಡೆವಲಪ್‍ಮೆಂಟ್ (ಸಿಎಚ್‍ಡಿ) ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಪತ್ರ ಬರೆದಿದ್ದು, ಚಳಿಗಾಲದಲ್ಲಿ ವಸತಿರಹಿತರಿಗೆ ಸೂಕ್ತ ವ್ಯವಸ್ಥೆ ಮಾಡಬೇಕೆಂದು ಆಗ್ರಹಿಸಿದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please […]

Advertisement

Wordpress Social Share Plugin powered by Ultimatelysocial