ದೆಹಲಿಯಲ್ಲಿ ಇಂದು ರಾತ್ರಿಯಿಂದಲೇ 6 ದಿನ ಲಾಕ್​ಡೌನ್

ದೆಹಲಿಯಲ್ಲಿ ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಹೀಗಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಇಂದು ಬೆಳಗ್ಗೆ ಲೆಫ್ಟಿನೆಂಟ್​ ಗವರ್ನರ್​​ ಅನಿಲ್​ ಜೈಜಲ್​ ಜೊತೆ ಸಭೆ ನಡೆಸಿದ್ದರು. ಸಭೆ ಬಳಿಕ ದೆಹಲಿಯಾದ್ಯಂತ ಒಂದು ವಾರ ಕಾಲ ಕರ್ಫ್ಯೂ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ.

ದೇಶದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ, ಇಂದು ಪ್ರಧಾನಿ ನರೇಂದ್ರ ಮೋದಿ ಅಧಿಕಾರಿಗ ಜೊತೆ ಸಭೆ ನಡೆಸುತ್ತಿದ್ದಾರೆ. ಕೊರೋನಾ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗುತ್ತಿದೆ. ಈ ನಡುವೆಯೇ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪರಿಸ್ಥಿತಿ ಕೈ ಮೀರಿ ಹೋಗಿದೆ. ಹೀಗಾಗಿ ವಾರಾಂತ್ಯಕ್ಕೆ ಮಾತ್ರ ನಿಗದಿಯಾಗಿದ್ದ ಕರ್ಫ್ಯೂವನ್ನು ಒಂದು ವಾರ ಕಾಲ ವಿಸ್ತರಿಸಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​​ ಆದೇಶ ಹೊರಡಿಸಿದ್ದಾರೆ.

ಇಂದು ರಾತ್ರಿಯಿಂದ ಮುಂದಿನ ಸೋಮವಾರ ಬೆಳಗ್ಗೆ 5 ಗಂಟೆವರೆಗೂ ಅಂದರೆ ಒಂದು ವಾರ ಕಾಲ ದೆಹಲಿಯಲ್ಲಿ ಕರ್ಫ್ಯೂ ಜಾರಿಯಲ್ಲಿರುತ್ತದೆ. ಈ ಹೊಸ ಆದೇಶ ಇಂದು ರಾತ್ರಿಯಿಂದಲೇ ಅನ್ವಯವಾಗಲಿದೆ.

Please follow and like us:

Leave a Reply

Your email address will not be published. Required fields are marked *

Next Post

Comprehensive Guide to Virtual Accountants

Tue Apr 20 , 2021
Content Cost-saving Who Should Use Accounting Firms? How to Pay Remote International Accountants What’s a virtual accounting firm and how does it work? Virtual Accounting Services ONLINE MASTER OF PUBLIC HEALTH Credit card account management As you’ll find with some of the firms in this review, billing methods can vary […]

Advertisement

Wordpress Social Share Plugin powered by Ultimatelysocial