ಲೋಕನಾಥ್ ಮಹಾನ್ ಕಲಾವಿದ

ನಾಗರಹಾವು ಚಿತ್ರದಲ್ಲಿ ರಾಮಾಚಾರಿ ಕಾಪಿ ಹೊಡೆದಾಗ ಆತನನ್ನು ಅವಮಾನಿಸಿದ್ದಕ್ಕಾಗಿ, ಆತನಿಂದ ಲೈಟು ಕಂಬಕ್ಕೆ ಕಟ್ಟಲ್ಪಟ್ಟ ಪ್ರಿನ್ಸಿಪಾಲ್ ಶ್ಯಾಮರಾಯರಾಗಿ, ಬೂತಯ್ಯನ ಮಗ ಅಯ್ಯು ಚಿತ್ರದಲ್ಲಿ ಚಪ್ಪಲಿ ಹೊಲೆಯುವ ಮಾಚನಾಗಿ; ಅದರಲ್ಲೂ ಬೂತಯ್ಯನ ಮನೆ ಉಪ್ಪಿನಕಾಯಿ ಜಾಡಿ ಕಾಲಿ ಮಾಡುವ ಅವರ ಅಭಿನಯ ಕನ್ನಡ ಚಲನಚಿತ್ರರಂಗ ಇರುವವರೆಗೂ ಅಜರಾಮರ. ಸಂಸ್ಕಾರ, ಮಿಂಚಿನ ಓಟ, ಕಾಕನ ಕೋಟೆ, ಕಾಡು ಬೆಳದಿಂಗಳು ಮುಂತಾದ ಕಲಾತ್ಮಕ ಚಿತ್ರಗಳಲ್ಲಿನ ನಿರ್ವಹಣೆಗೆ, ಒಲವಿನ ಆಸರೆ, ಮನೆ ಮನೆ ಕಥೆ, ಹೌಸ್ ಫುಲ್, ಪುಷ್ಪಕ ವಿಮಾನ, ಬೆಳದಿಂಗಳ ಬಾಲೆ, ಬಂಗಾರದ ಮನುಷ್ಯ, ಕಥಾ ಸಂಗಮ, ಗೆಜ್ಜೆಪೂಜೆ, ಹೊಸ ನೀರು, ಕಿಟ್ಟು ಪುಟ್ಟು, ಎಲ್ಲರಂಥಲ್ಲ ನನ್ನ ಗಂಡ, ಪ್ರೇಮಾಚಾರಿ ಅಂತಹ ಚಿತ್ರಗಳಲ್ಲಿನ ಅಸಂಖ್ಯಾತ ಪಾತ್ರಗಳಿಗಾಗಿ ಅವರ ಬಗೆಗಿನ ಪ್ರಶಂಸೆಗಳನ್ನು, ಪತ್ರಿಕೆಗಳಿಂದಲೂ ಜನಸಾಮಾನ್ಯರಿಂದಲೂ ಕಾಣುತ್ತಲೇ ಬೆಳೆದವರು ನಾವು. ಚಿತ್ರರಂಗವಲ್ಲದೆ ರಂಗಭೂಮಿಯ ಬಹಳಷ್ಟು ಉತ್ತಮ ಪ್ರಯೋಗಗಳಿಗೂ, ಕಿರುತೆರೆಯ ಉತ್ತಮ ಪಾತ್ರಗಳಿಗೂ ಲೋಕನಾಥರು ಮೆರುಗು ತಂದಿದ್ದರು.
ಶಿಸ್ತುಬದ್ಧ ಜೀವನದ, ರಂಗಭೂಮಿ ಮತ್ತು ಚಲನಚಿತ್ರಲೋಕದ ಮೇರು ಕಲಾವಿದರಾದ ಲೋಕನಾಥರು 1927ರ ಆಗಸ್ಟ್ 14ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಹನುಮಂತಪ್ಪನವರು ಮತ್ತು ತಾಯಿ ಗೌರಮ್ಮನವರು. ಅವರದ್ದು ಜವಳಿ ವಾಣಿಜ್ಯ ವಹಿವಾಟಿನ ಕುಟುಂಬ. ಹೆಣ್ಣು ಮಕ್ಕಳು ಗಂಡು ಮಕ್ಕಳು ಎಂಬ ಭೇದವಿಲ್ಲದೆ ಸಂಜೆಯ ಒಳಗೆ ಮನೆ ಸೇರಬೇಕು ಎಂಬಂತಹ ಕಟ್ಟುಪಾಡಿನ ವಾತಾವರಣವಿದ್ದ ಸುಮಾರು 40 ಜನರಿದ್ದ ಸಂಪ್ರದಾಯಸ್ತ ಅವಿಭಕ್ತ ಕುಟುಂಬ ಅವರದ್ದು. ಮೂಲತ ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದ ಲೋಕನಾಥರು ಕುಟುಂಬದ ವ್ಯಾಪಾರಕ್ಕೆ ಆಸರೆಯಾಗಿರಲು ಓದು ಬಿಟ್ಟರು. ಮನೆಯಲ್ಲಿದ್ದ ವೇಳೆಯಲ್ಲಿ ಸಂಗೀತದ ಮೇಲಿನ ಆಸೆಯಿಂದ ಸಂಗೀತವನ್ನು ಸುಮ್ಮನೆ ಗುನುಗುತ್ತಿದ್ದರು. ತಬಲಾ ಕಲಿಯಬೆಕೆಂಬ ಆಸೆಗೆ ತಬಲಾ ತಂದಿಟ್ಟುಕೊಂಡಾಗ ಮನೆಯ ವಾತಾವರಣ ಅದಕ್ಕೆ ಸರಿಹೋಗುವುದಿಲ್ಲ ಎಂದು ಅದನ್ನು ಕೈ ಬಿಟ್ಟರು.
ವ್ಯಾಯಾಮ ಕಲಿಯಲು ಪ್ರಖ್ಯಾತ ಬರಹಗಾರ ಹಾಗೂ ಅಂಗಸೌಷ್ಟವದ ಮೇರು ಆಚಾರ್ಯರಾದ ಕೆ.ವಿ. ಅಯ್ಯರ್ ಸಂಪರ್ಕಕ್ಕೆ ಬಂದ ಸಂದರ್ಭದಲ್ಲಿ ಕೈಲಾಸಂ ಅವರಿಂದಾಗಿ ನಾಟಕರಂಗಕ್ಕೆ ಪ್ರವೇಶವಾಯಿತು. ಮುಂದೆ 1952ರಲ್ಲಿ ರವಿ ಕಲಾವಿದರು ಸಂಸ್ಥೆ ಸೇರಿ ಅಭಿನಯಿಸಿದ ಮೊದಲ ನಾಟಕ ‘ಬಂಡವಾಳವಿಲ್ಲದ ಬಡಾಯಿ’. ಒಲ್ಲೆನೆಂದರೂ ಬಿಡದೆ ಮತ್ತೊಮ್ಮೆ ಬಣ್ಣ ಹಚ್ಚಿದ್ದು ದಾಶರಥಿ ದೀಕ್ಷಿತರ ‘ಅಳಿಯ ದೇವರು’ ನಾಟಕ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಎಂ. ವಿ. ಗೋಪಾಲಸ್ವಾಮಿ ಮನಃಶಾಸ್ತ್ರದ ಪ್ರಾಧ್ಯಾಪಕರು

Sat Dec 31 , 2022
ಮನಃಶಾಸ್ತ್ರದ ಪ್ರಾಧ್ಯಾಪಕರಾದ ಪ್ರೊ. ಎಂ. ವಿ. ಗೋಪಾಲಸ್ವಾಮಿ ಅವರು ಕರ್ನಾಟಕದಲ್ಲಿ ರೇಡಿಯೋ ಪ್ರಸಾರ, ಮೈಸೂರು ವಿಶ್ವವಿದ್ಯಾಲಯದಲ್ಲಿ ಮನಃಶಾಸ್ತ್ರ ವಿಭಾಗದ ಸ್ಥಾಪನೆ, ಮಕ್ಕಳ ಶಿಶುವಿಹಾರ ಸ್ಥಾಪನೆ ಮುಂತಾದ ಅನೇಕ ಕಾರ್ಯಗಳಿಂದ ಅವಿಸ್ಮರಣೀಯರೆನಿಸಿದ್ದಾರೆ. ಎಂ. ವಿ. ಗೋಪಾಲಸ್ವಾಮಿ ಅವರು 1896ರ ಡಿಸೆಂಬರ್ 31ರಂದು ತಮಿಳುನಾಡಿನಲ್ಲಿ ಜನಿಸಿದರು. ಮದರಾಸಿನ ಪಾಚಿಯಪ್ಪ ಕಾಲೇಜಿನಲ್ಲಿ ಪದವಿ ಪಡೆದು, ಉನ್ನತ ಸಂಶೋಧನಾ ವ್ಯಾಸಂಗಕ್ಕೆ ಲಂಡನ್ನಿಗೆ ಹೋದರೆ ಭಾರತದಲ್ಲಿನ ಪದವಿಗೆ ಮಾನ್ಯತೆ ಇಲ್ಲ ಎಂಬ ಕಾರಣದಿಂದ ಅಲ್ಲಿ ಮತ್ತೊಂದು ಪದವಿ […]

Advertisement

Wordpress Social Share Plugin powered by Ultimatelysocial