ಲೂಯಿ ಪಾಸ್ತರ್ ಫ್ರಾನ್ಸಿನ ಸೂಕ್ಷ್ಮಾಣುಜೀವಿ ವಿಜ್ಞಾನಿ.

ಅದ್ಭುತ ಪ್ರಾಯೋಗಿಕ ವ್ಯಾಸಂಗಗಳನ್ನು ಇತಿಹಾಸ ಪ್ರವರ್ತಕ ಫಲಿತಾಂಶಗಳನ್ನು ಪಡೆದು ಸಾರ್ವಜನಿಕ ಆರೋಗ್ಯ ಪಾಲನೆಗೆ ಹಿರಿಯ ಕೊಡುಗೆಗಳನ್ನು ನೀಡಿದ ಮಹಾ ಪ್ರತಿಭಾಶಾಲಿ ಅನ್ವೇಷಕ. ಮೂಲತಃ ರಸಾಯನವಿಜ್ಞಾನ, ಮಾದಕ ಪಾನೀಯ ಬೀರಿನ ಕಂಪು ಮತ್ತು ರುಚಿ ರಕ್ಷಣೆ, ರೇಷ್ಮೆ ಹುಳುಗಳಿಗೆ ಅಂಟಿ ಮಾರಕವಾಗಿ ಪರಿಣಮಿಸುತ್ತಿದ್ದ ಸೋಂಕು ಮುಂತಾದವನ್ನು ಕುರಿತು ತೀವ್ರ ಸಂಶೋಧನೆ ಹಾಗೂ ಅಧ್ಯಯನ ಮಾಡಿದ ಪಾಸ್ತರ್ ಮುಂದೆ ಪ್ರೌಢ ವೈದ್ಯಕೀಯ ಆವಿಷ್ಕಾರಗಳನ್ನು ಮಾಡಲು ವಿಶೇಷ ಅರ್ಹತೆ ಗಳಿಸಿದ.
ಲೂಯಿ ಪಾಸ್ತರ್ 1822 ಡಿಸೆಂಬರ್ 27ರಂದು ಫ್ರಾನ್ಸಿನ ಜ್ಯೂರ ಪ್ರದೇಶಕ್ಕೆ ಸೇರಿದ ಡೋಲಿ ಎಂಬಲ್ಲಿ ಜನಿಸಿದ. ಇವನ ತಂದೆ ಜೀನ್ ಜೋಸೆಫ್ ಪಾಸ್ತರ್, ನೆಪೋಲಿಯನ್ನನ ಸೈನ್ಯದಲ್ಲಿ ಸಾರ್ಜೆಂಟ್-ಮೇಜರ್ ಆಗಿದ್ದ. ನೆಪೋಲಿಯನ್ನನ ಪತನಾನಂತರ ವಂಶಪರಂಪರೆಯಾಗಿ ನಡೆದು ಬಂದಿದ್ದ ಚರ್ಮ ಹದ ಮಾಡುವ ಉದ್ಯಮಕ್ಕೆ ಇಳಿದ. ಲೂಯಿಯ ಜನನವಾದ ಸ್ವಲ್ಪ ಕಾಲದಲ್ಲಿ ಸಂಸಾರ ಹತ್ತಿರದ ಆರ್ಬಾಯ್ ಎಂಬಲ್ಲಿಗೆ ಹೋಗಿ ನೆಲೆಸಿತು. ಅಲ್ಲೆ ಲೂಯಿಯ ಪ್ರಾಥಮಿಕ ಹಾಗೂ ಮಾಧ್ಯಮಿಕ ವಿದ್ಯಾಭ್ಯಾಸ ನಡೆಯಿತು. ಈತ ಪ್ರತಿಭಾನ್ವಿತ ವಿದ್ಯಾರ್ಥಿ ಎಂದು ಶಾಲೆಯ ಮುಖ್ಯೋಪಾಧ್ಯಾಯನಿಗೆ ಮನದಟ್ಟಾಗಿದ್ದುದರಿಂದ ಪ್ಯಾರಿಸ್ಸಿನ ಇಕೋಲಿ ನಾರ್ಮೇಲಿಗೆ ಸೇರಿಕೊಳ್ಳಲು ತಯಾರಾಗುವಂತೆ ಶಿಕ್ಷಣ ಪಡೆಯಬೇಕೆಂದೂ ಅದಕ್ಕಾಗಿ ಇವನನ್ನು ಪ್ಯಾರಿಸ್ಸಿಗೆ ಕಳುಹಿಸಬೇಕೆಂದೂ ಆತ ಆಗ್ರಹ ಮಾಡಿದ. ಅದರಂತೆ ಲೂಯಿಯನ್ನು ದೂರದ ಪ್ಯಾರಿಸ್ಸಿಗೆ ಕಳುಹಿಸಲಾಯಿತು (1838). ಆದರೆ ಮನೆ ಗೀಳು ಹಿಡಿದು ವ್ಯಾಸಂಗ ಮುಂದುವರಿಸಲಾಗದೆ ಅವನು ಶೀಘ್ರದಲ್ಲಿ ಆರ್ಬಾಯಿಗೆ ವಾಪಸಾದ. ಅನಂತರ ಹತ್ತಿರದ ಪರಿಚಿತ ಬೆಸಾನ್ಕಾನಿನ ರಾಯಲ್ ಕಾಲೇಜಿನಲ್ಲಿ ವ್ಯಾಸಂಗ ಮುಂದುವರಿಸಿ 1840 ಮತ್ತು 1842 ರಲ್ಲಿ ಪದವಿಗಳನ್ನು ಪಡೆದ. ಇಕೋಲಿ ನಾರ್ಮೆಲೀಗೆ ಸೇರುವ ಉದ್ದೇಶದಿಂದ ಪುನಃ ಪ್ಯಾರಿಸ್ಸಿಗೆ ತೆರಳಿ (1843) ಆಯ್ಕೆಗಾಗಿ ನಡೆದ ಪರೀಕ್ಷೆಯನ್ನು ತೆಗೆದುಕೊಂಡು ಉತ್ತೀರ್ಣರಾದ ವಿದ್ಯಾರ್ಥಿಗಳ ಪೈಕಿ ನಾಲ್ಕನೆಯ ಸ್ಥಾನ ಗಳಿಸಿದ. ಪ್ಯಾರಿಸ್ಸಿನಲ್ಲಿ ಆಗ ಪ್ರಸಿದ್ಧ ವಿಜ್ಞಾನಿಗಳಾಗಿದ್ದ ಡ್ಯೂಮಾಸ್, ಬಲಾರ್ಡ್ ಮುಂತಾದವರ ಸಂಪರ್ಕ ಹೊಂದಿ ವ್ಯಾಸಂಗ ಮುಂದುವರಿಸಿ ಡಾಕ್ಟರೇಟ್ ಪದವಿ ಪಡೆದ (1847).
ರೆಸಿಮಿಕ್ ಆಮ್ಲಜನ್ಯ ಲವಣಗಳ ಸ್ಪಟಿಕಗಳು ಎರಡು ಬಗೆಯವಾಗಿರುವುವೆಂದು ಪಾಸ್ತರ್ ಮೊತ್ತಮೊದಲಿಗೆ ಕಂಡುಕೊಂಡು ಸೂಕ್ಷ್ಮದರ್ಶಕದ ಸಹಾಯದಿಂದ ಈ ಎರಡು ಬಗೆಯ ಸ್ಫಟಿಕಗಳನ್ನೂ ಬೇರ್ಪಡಿಸಿದ. ಇದರಿಂದ ಪಾಸ್ತರ್ ಬಲು ಮೇಲ್ಮಟ್ಟದ ವಿಜ್ಞಾನಿಯೆಂದು ಪ್ರಸಿದ್ಧನಾದ. (ಮುಂದೆ ಟಾರ್ಟಾರಿಕ್ ಆಮ್ಲದ ನಾಲ್ಕನೆಯ ರೂಪ ಮಿಸೋಟಾರ್ಟಾರಿಕ್ ಆಮ್ಲವನ್ನೂ ಅವನೇ ಆವಿಷ್ಕರಿಸಿದ.) ಈ ವ್ಯಾಸಂಗಗಳನ್ನು ಆತ ಮುಂದೆ ವರ್ಗವಾಗಿ ಹೋದ ಡಿಜಾನ್ ಹಾಗೂ ಸ್ಯಾಸ್ಬರ್ಗಿನಲ್ಲಿಯೂ ಮುಂದುವರಿಸಿ ಮುಕ್ತಾಯ ಮಾಡಿದ್ದು ಆತನ ಸಾಧನೆಯ ಪ್ರತೀಕ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de…

Please follow and like us:

Leave a Reply

Your email address will not be published. Required fields are marked *

Next Post

ಉದಯ್ ಕುಮಾರ್ ಕನ್ನಡ ಚಲನಚಿತ್ರರಂಗದ ಅಪ್ರತಿಮ ಪ್ರತಿಭೆಗಳಲ್ಲಿ ಒಬ್ಬರು.

Wed Dec 28 , 2022
ಉದಯ್ ಕುಮಾರ್ 1935ರ ಮಾರ್ಚ್ 5ರಂದು ಜನಿಸಿದರು. ಅವರ ತಂದೆ ಶ್ರೀನಿವಾಸ ಶಾಸ್ತ್ರಿಗಳು ಆನೇಕಲ್ಲಿನಲ್ಲಿ ಶಾನುಭೋಗರಾಗಿದ್ದರು. ಉದಯ್ ಕುಮಾರ್ ಅವರ ಮೂಲ ಹೆಸರು ಸೂರ್ಯನಾರಾಯಣ ಶಾಸ್ತ್ರಿ. ವ್ಯಾಯಾಮ ಶಿಕ್ಷಣ ನೀಡುತ್ತಿದ್ದ ಉದಯ್ ಕುಮಾರ್ ಆಕಸ್ಮಿಕವಾಗಿ ಗುಬ್ಬಿ ಕಂಪನಿಯ ಮೂಲಕ ರಂಗಭೂಮಿ ಸೇರಿ, ‘ಭಾಗ್ಯೋದಯ’ ಚಿತ್ರದ ಮೂಲಕ ಚಿತ್ರರಂಗವನ್ನು ಪ್ರವೇಶಿಸಿದರು. ‘ರತ್ನಗಿರಿ ರಹಸ್ಯ’ ಚಿತ್ರದ ಟಾರ್ಜಾನ್ ಮಾದರಿಯ ಪಾತ್ರ ಉದಯ್ ಕುಮಾರ್ ಅವರಿಗೆ ಅಪಾರ ಜನಪ್ರಿಯತೆ ತಂದಿತು. ಅಂದಿನ ದಿನಗಳಲ್ಲಿ ಕನ್ನಡ […]

Advertisement

Wordpress Social Share Plugin powered by Ultimatelysocial