ಪ್ರೇಮಿಗಳ ದಿನದಂದು ಬಿಡುಗಡೆಯಾಗಲಿದೆ ‘ಸರ್ಕಾರು ವಾರಿಪಾಟ’ ಚಿತ್ರದ ಮೊದಲ ಹಾಡು

ಈಗಾಗಲೇ ಟೀಸರ್ ನಿಂದಲೇ ಸಾಕಷ್ಟು ಸದ್ದು ಮಾಡಿರುವ ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ನಟನೆಯ ಬಹುನಿರೀಕ್ಷಿತ ‘ಸರ್ಕಾರು ವಾರಿಪಾಟ’ ಚಿತ್ರದ ಮೊದಲ ಹಾಡು ಫೆಬ್ರವರಿ 14ರಂದು ಬಿಡುಗಡೆಯಾಗಲಿದೆ. ‘ಕಲಾವತಿ’ ಎಂಬ ಈ ಹಾಡಿಗೆ ತಮನ್ ಸಂಗೀತವಿದೆ.ಪರಶುರಾಮ್ ನಿರ್ದೇಶನದ ಈ ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್, 14 ರೀಲ್ ಪ್ಲಸ್ ಹಾಗೂ ಮಹೇಶ್ ಬಾಬು ಎಂಟರ್ಟೈನ್ಮೆಂಟ್ ಬ್ಯಾನರ್ ನಡಿ ನಿರ್ಮಾಣ ಮಾಡಲಾಗಿದೆ.ಕೀರ್ತಿ ಸುರೇಶ್ ಈ ಸಿನಿಮಾ ನಾಯಕಿಯಾಗಿದ್ದು, ವೆನ್ನೆಲ ಕಿಶೋರ್, ಸುಬ್ಬರಾಜು ಸೇರಿದಂತೆ ಮೊದಲಾದ ಕಲಾವಿದರು ಬಣ್ಣ ಹಚ್ಚಿದ್ದಾರೆ. ಇದೊಂದು ಪಕ್ಕಾ ಆಕ್ಷನ್ ಕಾಮಿಡಿ ಚಿತ್ರ ಎಂದು ಹೇಳಲಾಗಿದ್ದು, ಮೇ 12 ರಂದು ಈ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹಿಜಾಬ್ ವಿವಾದ; ಮಧ್ಯಪ್ರವೇಶಕ್ಕೆ ಸುಪ್ರೀಂ ಕೋರ್ಟ್ ನಕಾರ

Thu Feb 10 , 2022
  ನವದೆಹಲಿ: ರಾಜ್ಯದಲ್ಲಿನ ಹಿಜಾಬ್ ವಿವಾದ ಕುರಿತು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆಯಾಗಿದ್ದು, ಆದರೆ ಈ ಕುರಿತು ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.ಹಿರಿಯ ವಕೀಲ ಕಪಿಲ್ ಸಿಬಲ್, ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು, ಹಿಜಾಬ್ ವಿವಾದ ಕುರಿತು ಮಧ್ಯಪ್ರವೇಶ ಮಾಡಿ, ತ್ವರಿತ ವಿಚಾರಣೆ ನಡೆಸುವಂತೆ ಮನವಿ ಮಾಡಿದ್ದಾರೆ.ಹಿಜಾಬ್ ವಿಚಾರವಾಗಿ ಮಧ್ಯಪ್ರವೇಶಕ್ಕೆ ನಿರಾಕರಿಸಿರುವ ಸುಪ್ರೀಂ ಕೋರ್ಟ್, ಮೊದಲು ಕರ್ನಾಟಕ ಹೈಕೋರ್ಟ್ ತೀರ್ಪು ಬರಲಿ. ಈ ಬಗ್ಗೆ ನಾವು ಕೂಡ […]

Advertisement

Wordpress Social Share Plugin powered by Ultimatelysocial