ಮಾ. 9 ರಂದು ಕಾಂಗ್ರೆಸ್ ನಿಂದ ಕರ್ನಾಟಕ ಬಂದ್ ಕರೆ!

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 9 ರಿಂದ 29 ರವರೆಗೆ ನಡೆಯಲಿದೆ.

ರಾಜ್ಯದಲ್ಲಿ ಪರೀಕ್ಷೆ ಆರಂಭದ ದಿನವೇ ಮಾರ್ಚ್ 9 ರಂದು ಕಾಂಗ್ರೆಸ್ ಕರ್ನಾಟಕ ಬಂದ್ ಗೆ ಕರೆ ನೀಡಿದೆ.

ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುವ ಆತಂಕ ಎದುರಾಗಿದೆ. ಆದರೆ, ಮಾರ್ಚ್ 9 ರ ಬಂದ್ ವೇಳೆ ಪಿಯುಸಿ ಪರೀಕ್ಷೆಗೆ ಅಡ್ಡಿ ಮಾಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಕರ್ನಾಟಕದ ಸ್ವಾಭಿಮಾನ ಉಳಿಸಲು, ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಮತ್ತು 40% ಕಮಿಷನ್ ವಿರುದ್ಧ ಮಾರ್ಚ್ 9 ರಂದು ಕಾಂಗ್ರೆಸ್ ಪಕ್ಷ ರಾಜ್ಯಾದ್ಯಂತ ಸಾಂಕೇತಿಕ ಬಂದಗೆ ಕರೆ ನೀಡಿದೆ. ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆ, ಆಸ್ಪತ್ರೆಗಳ ಕಾರ್ಯನಿರ್ವಹಣೆ, ಸಾರಿಗೆ ವ್ಯವಸ್ಥೆಗೆ ಯಾವುದೇ ಅಡ್ಡಿಯುಂಟು ಮಾಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ತೆರಳಲು ಯಾವುದೇ ಅಡ್ಡಿಯಾಗುವುದಿಲ್ಲ. ಶಿಕ್ಷಣ ಸಂಸ್ಥೆಗಳು, ಸಾರಿಗೆ ವ್ಯವಸ್ಥೆ, ಆಸ್ಪತ್ರೆಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ. ಕಾನೂನು ಕೈಗೆತ್ತಿಕೊಳ್ಳುವುದಿಲ್ಲ. ಕೇವಲ ಎರಡು ಗಂಟೆ ವ್ಯಾಪಾರ, ವಹಿವಾಟು ಬಂದ್ ಮಾಡಿ ಸಹಕಾರ ನೀಡುವಂತೆ ಜನರಲ್ಲಿ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮದುವೆಗೂ ಮುನ್ನವೇ ಪ್ರಗ್ನೆಂಟ್‌?

Tue Mar 7 , 2023
ನಟಿ ರಮ್ಯಾ ಕೃಷ್ಣ ಸೌತ್‌ ಸಿನಿ ಇಂಡಸ್ಟ್ರಿಯಲ್ಲಿ ತಮ್ಮದೇ ಛಾಪು ಮೂಡಿಸಿದವರು. ಅನೇಕ ಕನ್ನಡ ಸಿನಿಮಾಗಳಲ್ಲಿಯೂ ಅವರು ಕೆಲಸ ಮಾಡಿದ್ದಾರೆ. 90 ರ ದಶಕದಿಂದಲೂ ತಮ್ಮ ನಟನೆ ಮತ್ತು ಅಂದಕ್ಕೆ ಹೆಸರುವಾಸಿ. ಆದರೆ ರಮ್ಯಾ ಕೃಷ್ಣ ಅವರ ವೈಯಕ್ತಿಕ ಜೀವನದ ಬಗ್ಗೆಯೂ ಸಾಕಷ್ಟು ವದಂತಿಗಳಿವೆ. ನಿರ್ದೇಶಕ ಕೆ.ಎಸ್.ರವಿಕುಮಾರ್ ಅವರ ಅಫೇರ್ ಬಗ್ಗೆ ಸೃಷ್ಟಿಯಾಗಿದ್ದ ವಿವಾದ ದೊಡ್ಡ ಚರ್ಚೆಗೆ ಗರಾಸವಾಗಿತ್ತು. ರಮ್ಯಾ ಕೃಷ್ಣ ಅವರು ನಿರ್ದೇಶಕ ಕೆ.ಎಸ್.ರವಿಕುಮಾರ್ ಜೊತೆಗೆ ಅನೇಕ ಚಿತ್ರಗಳಲ್ಲಿ […]

Advertisement

Wordpress Social Share Plugin powered by Ultimatelysocial