ಬಿಜೆಪಿಗೆ ಮುಜುಗರ ತಂದ ಮಾಡಾಳ್ ಪ್ರಕರಣ!

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಲೋಕಾಯುಕ್ತ ಪ್ರಕರಣದಿಂದ ಮುಜುಗರಕ್ಕೀಡಾದ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ ಎನ್ನಲಾಗಿದೆ.

ಚನ್ನಗಿರಿ ಕ್ಷೇತ್ರದಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದಲ್ಲಿ ಅವರ ಪುತ್ರ ಮಲ್ಲಿಕಾರ್ಜುನ್, ಹೆಚ್.ಎಸ್.

ಶಿವಕುಮಾರ್ ಸೇರಿದಂತೆ ಹಲವರು ಆಕಾಂಕ್ಷಿಗಳಾಗಿದ್ದಾರೆ. ಆದರೆ, ಲೋಕಾಯುಕ್ತ ಪ್ರಕರಣ ಬಿಜೆಪಿಯಲ್ಲಿ ಹೊಸ ಬದಲಾವಣೆಗೆ ದಾರಿ ಮಾಡಿಕೊಟ್ಟಿದೆ. ಶಿವಮೊಗ್ಗ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಚನ್ನಗಿರಿ ಮೂಲದ ಡಾ. ಧನಂಜಯ ಸರ್ಜಿ ಅವರಿಗೆ ಟಿಕೆಟ್ ನೀಡುವ ಚಿಂತನೆ ನಡೆದಿದೆ ಎಂದು ಹೇಳಲಾಗಿದೆ.

ಚನ್ನಗಿರಿ ತಾಲೂಕಿನ ಗೊಪ್ಪೇನಹಳ್ಳಿಯ ಸರ್ಜಿ ಕುಟುಂಬದ ಡಾ. ಧನಂಜಯ ಸರ್ಜಿ ಅವರು ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಯಲ್ಲಿ ಜನಾನುರಾಗಿ ವೈದ್ಯರಾಗಿದ್ದಾರೆ. ಆರ್.ಎಸ್.ಎಸ್. ಸಕ್ರಿಯ ಕಾರ್ಯಕರ್ತರಾಗಿರುವ ಅವರು ಬಿಜೆಪಿ ಸೇರಿ ಸಂಘಟನೆಯಲ್ಲಿ ತೊಡಗಿದ್ದಾರೆ.

ಶಿವಮೊಗ್ಗ ಅಥವಾ ಚನ್ನಗಿರಿಯಲ್ಲಿ ಬದಲಿ ಅಭ್ಯರ್ಥಿ ಆಯ್ಕೆ ಮಾಡಿದಲ್ಲಿ ತಮಗೆ ಅವಕಾಶ ನೀಡಬೇಕೆಂದು ಧನಂಜಯ ಸರ್ಜಿ ಮನವಿ ಮಾಡಿದ್ದು, ಅವರಿಗೆ ಯಡಿಯೂರಪ್ಪ ಕುಟುಂಬದ ಬೆಂಬಲ ಇದೆ, ಲೋಕಾಯುಕ್ತ ಪ್ರಕರಣದಿಂದ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಟಿಕೆಟ್ ಕೈತಪ್ಪಿದಲ್ಲಿ ಧನಂಜಯ ಸರ್ಜಿ ಅವರನ್ನು ಕಣಕ್ಕಿಳಿಸುವ ಬಗ್ಗೆ ಬಿಜೆಪಿ ಹೈಕಮಾಂಡ್ ಚಿಂತನೆ ನಡೆಸಿದೆ. ಚುನಾವಣೆ ಸಂದರ್ಭದಲ್ಲಿ ನಡೆದ ಮಾಡಾಳ್ ವಿರೂಪಾಕ್ಷಪ್ಪ ಪ್ರಕರಣ ಬಿಜೆಪಿಗೆ ಮುಜುಗರ ತಂದಿದ್ದು, ಹೀಗಾಗಿ ಕ್ಲೀನ್ ಇಮೇಜ್ ಹೊಂದಿರುವ ವ್ಯಕ್ತಿಗೆ ಮಣೆ ಹಾಕಲು ಪಕ್ಷದ ನಾಯಕರು ಚರ್ಚೆ ನಡೆಸಿದ್ದು, ಧನಂಜಯ ಸರ್ಜಿ ಅವರನ್ನು ಪರಿಗಣಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಭ್ಯರ್ಥಿ ಆಯ್ಕೆ 2ನೇ ಪಟ್ಟಿಗೆ ಕಾಂಗ್ರೆಸ್‌ ಕಸರತ್ತು!

Wed Mar 8 , 2023
ಬೆಂಗಳೂರು: ಕಾಂಗ್ರೆಸ್‌ ಅಭ್ಯರ್ಥಿಗಳ 2ನೇ ಪಟ್ಟಿ ಅಂತಿಮ ಗೊಳಿಸಲು ಆಯ್ಕೆ ಸಮಿತಿ ಕಸರತ್ತು ಆರಂಭಿಸಿದೆ. ಮಂಗಳವಾರದ ಸಭೆಯಲ್ಲಿ ಆಯ್ಕೆ ಸಮಿತಿ ಅಧ್ಯಕ್ಷ ಮೋಹನ್‌ ಪ್ರಕಾಶ್‌, ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿ.ಕೆ. ಹರಿಪ್ರಸಾದ್‌, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್‌, ಪ್ರಣಾಳಿಕೆ ಸಮಿತಿ ಅಧ್ಯಕ್ಷ ಪರಮೇಶ್ವರ್‌ ಭಾಗವಹಿಸಿದ್ದರು. ತಡರಾತ್ರಿಯವರೆಗೆ ಚರ್ಚೆ ನಡೆಸಿದ ಸಮಿತಿ, ಹಾಲಿ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳ ಪೈಕಿ 65 ಕ್ಷೇತ್ರಗಳಲ್ಲಿ ಒಂದೊಂದೇ ಹೆಸರು ಅಂತಿಮ ಗೊಳಿಸಿದ್ದು, 4 ಹಾಗೂ 3 […]

Advertisement

Wordpress Social Share Plugin powered by Ultimatelysocial