ಮದ್ದೂರಿನಲ್ಲಿ ರಸ್ತೆ ಅಪಘಾತ: ಇಬ್ಬರು ಯುವಕರು ಮೃತ್ಯು

ಮಂಡ್ಯ, ಜ.29: ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮದ್ದೂರು ತಾಲೂಕಿನ ಬೆಸಗರಹಳ್ಳಿ ಬಳಿ ಶುಕ್ರವಾರ ತಡರಾತ್ರಿ ನಡೆದಿರುವುದು ವರದಿಯಾಗಿದೆ.ಮೃತರನ್ನು ಬೆಸಗರಹಳ್ಳಿ ಸಮೀಪದ ಪಣ್ಣೆದೊಡ್ಡಿ ಗ್ರಾಮದ ವಿನಯ್ (27) ಹಾಗೂ ಹರಳಹಳ್ಳಿ ಗ್ರಾಮದ ಪ್ರಸನ್ನ (29) ಎಂದು ಗುರುತಿಸಲಾಗಿದೆ.
ಯುವಕರು ಬೆಸಗರಹಳ್ಳಿ ಗ್ರಾಮದ ಮೆಡಿಕಲ್ ಸ್ಟೋರ್ ಒಂದರಲ್ಲಿ ಕೆಲಸ ಮಾಡುತ್ತಿದ್ದು, ತಡರಾತ್ರಿ ಕೆಲಸ ಮುಗಿಸಿಕೊಂಡು ಬೈಕ್ ನಲ್ಲಿ ತಮ್ಮ ಗ್ರಾಮಕ್ಕೆ ತೆರಳುತ್ತಿದ್ದಾಗ ಅಪರಿಚಿತ ವಾಹನ ಢಿಕ್ಕಿಯಾಗಿ ಅಪಘಾತ ಸಂಭವಿಸಿದೆ.ಬೆಸಗರಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅಪರಿಚಿತ ವಾಹನದ ಪತ್ತೆಗೆ ಕ್ರಮ ವಹಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕುಮಾರಸ್ವಾಮಿ ಸಿಎಂ ಇಬ್ರಾಹಿಂ ನಿವಾಸಕ್ಕೆ ಭೇಟಿ ನೀಡಿ ಮಹತ್ವದ ಚರ್ಚೆ ನಡೆಸಿದರು.

Sat Jan 29 , 2022
ಬೆಂಗಳೂರು ಜನವರಿ 28: ‘ಕೈ’ ಬಿಟ್ಟು ‘ತೆನೆ’ ಹೋರುವುದಾಗಿ ಘೋಷಿಸಿದ್ದ ಕೇಂದ್ರದ ಮಾಜಿ ಸಚಿವ ಸಿಎಂ ಇಬ್ರಾಹಿಂ ಅವರ ಜತೆ ಇಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಪಕ್ಷದ ಶಾಸಕಾಂಗ ನಾಯಕರೂ ಅದ ಎಚ್.ಡಿ.ಕುಮಾರಸ್ವಾಮಿ ಅವರು ಮಹತ್ವದ ಮಾತುಕತೆ ನಡೆಸಿದರು. ಮಾತುಕತೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ಇಬ್ರಾಹಿಂ ಇನ್ನೂ ತೀರ್ಮಾನ ತೆಗೆದುಕೊಳ್ಳಬೇಕಿದೆ ಎಂದಿದ್ದಾರೆ.ತಮ್ಮ ಸ್ವಕ್ಷೇತ್ರಕ್ಕೆ ಇಂದು ಬೆಳಗ್ಗೆಯಿಂದಲೇ ಬಿಡುವಿಲ್ಲದ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ಮಾಜಿ ಮುಖ್ಯಮಂತ್ರಿಗಳು, ಸಂಜೆ ಹೊತ್ತಿಗೆ ಇಬ್ರಾಹಿಂ ಅವರ […]

Advertisement

Wordpress Social Share Plugin powered by Ultimatelysocial