ತೆರೆಗೆ ‘ಮೇಡ್ ಇನ್ ಚೈನಾ’ ಸಿನಿಮಾ!

 

ನಾಗಭೂಷಣ್ ಹಾಗೂ ಪ್ರಿಯಾಂಕಾ ತಿಮ್ಮೇಶ್‌ ನಟನೆಯ ಮೇಡ್ ಇನ್ ಚೈನಾ ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಮಾಡಲಾಗಿದೆ. ಈಗಾಗಲೇ ಟೀಸರ್ ಮೂಲಕ‌ ಎಲ್ಲರ ಗಮನ ಸೆಳೆದ ಈ ಸಿನಿಮಾ ಮಾರ್ಚ್ 11ಕ್ಕೆ ಬಿಡುಗಡೆಯಾಗಲಿದೆ.
ಇನ್ನೂ ಹಲವು ಚಿತ್ರಗಳಿಗೆ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದ ಪ್ರೀತಂ ತೆಗ್ಗಿನಮನೆ ‘ಮೇಡ್ ಇನ್ ಚೈನಾ’ ಮೂಲಕ ಮೊದಲ ಬಾರಿಗೆ ಡೈರೆಕ್ಟರ್ ಕ್ಯಾಪ್ ಧರಿಸಿದ್ದು ಜೊತೆಗೆ ಚಿತ್ರಕ್ಕೆ ಛಾಯಾಗ್ರಹಣ, ವಿಎಫ್ ಎಕ್ಸ್ , ಸಂಕಲನದ ಜವಾಬ್ದಾರಿ ಹೊತ್ತಿದ್ದಾರೆ.ಮೇಡ್‌ ಇನ್‌ ಚೈನಾ ಚಿತ್ರದಲ್ಲಿ ಗೌರವ್ ಶೆಟ್ಟಿ, ಅಶ್ವಿನ್cರಾವ್ ಪಲ್ಲಕ್ಕಿ, ಅರುಣ ಬಾಲರಾಜ್, ರವಿ ಭಟ್ ಕೂಡ ನಟಿಸಿದ್ದಾರೆ. ನಿಶ್ಚಲ್ ವಿ ಹಾಗೂ ಪ್ರೀತಮ್ ತೆಗ್ಗಿನಮನೆ ಸಿನಿಮಾಗೆ ಚಿತ್ರಕಥೆ ಬರೆದಿದ್ದಾರೆ. ವಿವಾನ್ ರಾಧಾಕೃಷ್ಣ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ. ಎನ್.ಕೆ. ಸ್ಟುಡಿಯೋಸ್ ಬ್ಯಾನರ್‌ನಡಿ ನಂದಕಿಶೋರ್ ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಕ್ರಿಸ್ಟಲ್ ಪಾರ್ಕ್ ಬ್ಯಾನರ್ ನಡಿ‌ ಈ ಸಿನಿಮಾವನ್ನು ನಿರ್ಮಾಪಕ ಟಿ ಆರ್ ಚಂದ್ರಶೇಖರ್ ಪ್ರಸ್ತುತಪಡಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮುಂದಿನ ವಾರದಿಂದ ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ!

Wed Mar 2 , 2022
ಕೋಲ್ಕತ್ತಾದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಕ್ರಮವಾಗಿ ಲೀಟರ್‌ಗೆ 104.67 ಮತ್ತು 89.79 ರೂ. (ಪ್ರತಿನಿಧಿ ಚಿತ್ರ) ಅಂತಾರಾಷ್ಟ್ರೀಯ ತೈಲ ಬೆಲೆಗಳು ಬ್ಯಾರೆಲ್‌ಗೆ USD 100 ದಾಟಿದ ಕಾರಣ ಲೀಟರ್‌ಗೆ ರೂ 9 ಅಂತರವನ್ನು ಕಡಿಮೆ ಮಾಡಲು ಮುಂದಿನ ವಾರ ರಾಜ್ಯ ಚುನಾವಣೆಗಳು ಮುಗಿದ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಪುನರಾರಂಭವಾಗುವ ಸಾಧ್ಯತೆಯಿದೆ. ಉಕ್ರೇನ್‌ನಲ್ಲಿನ ಸಂಘರ್ಷ ಅಥವಾ ಪ್ರತೀಕಾರದ ಪಾಶ್ಚಿಮಾತ್ಯ ನಿರ್ಬಂಧಗಳಿಂದ ಇಂಧನ ದೈತ್ಯ ರಷ್ಯಾದಿಂದ ತೈಲ […]

Advertisement

Wordpress Social Share Plugin powered by Ultimatelysocial