ಪುರಸಭೆ ಕಾರ್ಯಾಲಯದಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆ .

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿ ಮಡಿವಾಳ ಮಾಚಿದೇವ ಅವರ ಭಾವಚಿತ್ರಕ್ಕೆ ಹೂಹಾರ ಹಾಕಿ ಪೂಜೆ ಸಲ್ಲಿಸುವ ಮೂಲಕ ಜಯಂತಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಮಡಿವಾಳ ಮಾಚಿದೇವ ಜಯಂತಿಯನ್ನು ಉದ್ದೇಶಿಸಿ ಮಾತನಾಡಿದ ಆನಂದ್ ಮಡಿವಾಳ ಅವರು
12ನೇ ಶತಮಾನದ ಬಸವಣ್ಣನವರ ಸಮಕಾಲೀನ ಶರಣರಲ್ಲಿ ಮಡಿವಾಳ ಮಾಚಿದೇವರು ಒಬ್ಬರಾಗಿದ್ದಾರೆ ಎಂದು.ಕಾಯಕ ನಿಷ್ಠೆ, ದಾಸೋಹದಂತಹ ಮೌಲ್ಯಯುತವಾದ ಕಾಣಿಕೆ ನೀಡಿದ್ದು, 12ನೇ ಶತಮಾನದ ಕಾಲದಲ್ಲಿ. ಇಂತಹ ಶರಣರು ಮಹಾಪುರುಷರು ಹಾಕಿಕೊಟ್ಟ ಮಾರ್ಗದರ್ಶನ ಹಾಗೂ ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.ಮಡಿವಾಳ ಮಾಚಿದೇವರು ಬದುಕಿನ ಸಾತ್ವಿಕತೆ ನೀಡಿ ಸತ್ಯ, ಶುದ್ಧ ಕಾಯಕ ಕೊಟ್ಟವರಾಗಿದ್ದಾರೆ. ಸಮಾಜದಲ್ಲಿ ಜಾತಿ ಮುಖ್ಯವಲ್ಲ ಜೀವನ ಮುಖ್ಯ ಎಂದು ತೋರಿಸಿಕೊಟ್ಟಿದ್ದಾರೆ.ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಮರಿಲಿಂಗಪ್ಪ, ಪುರಸಭೆ ಸಿಬ್ಬಂದಿ ನಿಸಾರ್ ಅಹ್ಮದ್, ಪುರಸಭೆ ಸದಸ್ಯ ಮಹೇಬೊಬ್ ಕಡ್ಡಿಪುಡಿ, ನೈರ್ಮುಲ್ಯಧಿಕಾರಿ ಆರೀಫಾವುನಿಸಾ , ಮಹೇಶ್, ರಂಗನಾಥ್ , ಮುಖಂಡ ಹುಸೇನ್ಅಲಿ,ನಾಗರಾಜ್ ತಳವಾರ ಸೈಯದ್ ಸಾಬ್ , ಶರಣಪ್ಪ ಮಡಿವಾಳ, ಗಂಗಾಧರ್ ಮಡಿವಾಳ, ಶರಣಪ್ಪ ಮಡಿವಾಳ, ವೀರೇಶ್ ಮಡಿವಾಳ ಲಿಂಗಪ್ಪ ಮಡಿವಾಳ, ಬಸವರಾಜ್ ಮಡಿವಾಳ, ಸೇರಿದಂತೆ ಮುಂತಾದವರು ಇದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನಾಳೆ ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ; ಜಿಲ್ಲಾ, ತಾಲ್ಲೂಕು ಕೇಂದ್ರಗಳಲ್ಲಿ ವೀಕ್ಷಣೆಗೆ ವ್ಯವಸ್ಥೆ

Tue Feb 1 , 2022
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 2 ರಂದು ಕೇಂದ್ರ ಬಜೆಟ್ ಗೆ ಸಂಬಂಧಿಸಿದಂತೆ ಭಾಷಣ ಮಾಡಲಿದ್ದು, ರಾಜ್ಯದಲ್ಲಿ ನೇರ ಪ್ರಸಾರ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ.ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಬೃಹತ್ ಪರದೆಗಳ ಮೂಲಕ ಪ್ರಧಾನಿ ಭಾಷಣದ ನೇರ ಪ್ರಸಾರ ಮಾಡಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಮಾಹಿತಿ ನೀಡಿದ್ದಾರೆ.ಜಿಲ್ಲಾ ಕೇಂದ್ರಗಳಲ್ಲಿ ಸಂಸದರು, ಶಾಸಕರು, ಸಚಿವರು, ಆರ್ಥಿಕ ತಜ್ಞರು ಈ ಸಂದರ್ಭದಲ್ಲಿ ಭಾಗವಹಿಸಲಿದ್ದಾರೆ.ರಾಜ್ಯದ ಜಿಲ್ಲಾ […]

Related posts

Advertisement

Wordpress Social Share Plugin powered by Ultimatelysocial