ಮದ್ವೆ ಮನೆಯಲ್ಲಿ ಕೊರಗಜ್ಜನ ವೇಷ ಧರಿಸಿ ಕುಣಿತ: ತಲೆಮರೆಸಿಕೊಂಡಿದ್ದ ಮದುಮಗ ಕೊನೆಗೂ ಸಿಕ್ಕಿಬಿದ್ದ

 

ವಿಟ್ಲ: ಅನ್ಯ ಧರ್ಮದ ಮದುಮಗನೊಬ್ಬ ತನ್ನ ಮದುವೆಯಲ್ಲಿ ತುಳುನಾಡ ಆರಾಧ್ಯ ದೈವ ಕೊರಗಜ್ಜನ ವೇಷ ಧರಿಸಿ ಕುಣಿದಿದ್ದ ಪ್ರಕರಣದಲ್ಲಿ ಈತನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.ಉಪ್ಪಳದ ಉಮರುಲ್ಲಾ ಬಾಷಿತ್ ಬಂಧಿತ. ವಧುವಿನ ಮನೆಗೆ ಬರುವ ಸಂದರ್ಭದಲ್ಲಿ ಈತ, ಕೊರಗಜ್ಜನ ವೇಷ ಧರಿಸಿ ತಲೆಗೆ ಅಡಿಕೆ ಹಾಳೆಯ ಟೋಪಿ ಹಾಕಿ ಮುಖಕ್ಕೆ ಮಸಿ ಬಳಿದುಕೊಂಡು ನೃತ್ಯ ಮಾಡುತ್ತಾ ಬಂದಿದ್ದ.ಇದಕ್ಕೆ ಈತನ ಸ್ನೇಹಿತರೂ ಸಾಥ್​ ಕೊಟ್ಟಿದ್ದರು. ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದಲ್ಲಿ ಕಳೆದ ತಿಂಗಳು ನಡೆದಿದ್ದ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಮುಸ್ಲಿಂ ಯುವಕರ ವರ್ತನೆಗೆ ಹಿಂದೂ ಹಾಗೂ ಮುಸ್ಲಿಂ ಎರಡೂ ಸಮುದಾಯದವರು ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರತಿಭಟನೆಗಳೂ ನಡೆದಿದ್ದವು. ವರ ಹಾಗೂ ಆತನ ಸ್ನೇಹಿತರ ವಿರುದ್ಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಈ ಪ್ರಕರಣ ಸಂಬಂಧ ಜ.11ರಂದು ಮಂಗಳೂರಿನ ಮಂಗಲ್ಪಾಡಿ ನಿವಾಸಿ ಅಹ್ಮದ್ ಮುಜಿತಾಬು(28) ಮತ್ತು ಬಾಯಾರು ಪದವು ನಿವಾಸಿ ಮೊಯ್ದೀನ್ ಮುನಿಶ್(19) ಎಂಬುವರನ್ನು ಪೊಲೀಸರು ಬಂಧಿಸಿದ್ದರು. ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ, ಮದುಮಗ ಉಮರುಲ್ಲಾ ಬಾಷಿತ್​ ಇದೀಗ ಸಿಕ್ಕಿಬಿದ್ದಿದ್ದಾನೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೋವಿಡ್ -19: 90% ಕ್ಕಿಂತ ಹೆಚ್ಚು ಸಿಬ್ಬಂದಿಗೆ ಸಂಪೂರ್ಣವಾಗಿ ಲಸಿಕೆ;

Fri Feb 4 , 2022
ರಾಷ್ಟ್ರೀಯ ಮಟ್ಟದಲ್ಲಿ, 97% ಬೋಧಕ ಮತ್ತು 93% ಬೋಧಕೇತರ ಸಿಬ್ಬಂದಿಗೆ ಲಸಿಕೆ ಹಾಕಲಾಗಿದೆ, ಆದರೆ ಶೇಕಡಾವಾರು ಹಲವಾರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪ್ರತ್ಯೇಕವಾಗಿ ಉತ್ತಮವಾಗಿದೆ. ಉತ್ತಮ ವ್ಯಾಕ್ಸಿನೇಷನ್ ವ್ಯಾಪ್ತಿಯ ಹೊರತಾಗಿಯೂ ಬಿಹಾರ, ಉತ್ತರ ಪ್ರದೇಶ, ಒಡಿಶಾ, ಜಾರ್ಕಾಂಡ್ ಮತ್ತು ದೆಹಲಿ ಸೇರಿದಂತೆ ಒಂಬತ್ತು ರಾಜ್ಯಗಳಲ್ಲಿ ಶಾಲೆಗಳನ್ನು ಮುಚ್ಚಲಾಗಿದೆ ಮತ್ತು 16 ರಾಜ್ಯಗಳಲ್ಲಿ ಭಾಗಶಃ ತೆರೆಯಲಾಗಿದೆ. ಶಾಲೆಗಳು 11 ರಾಜ್ಯಗಳಲ್ಲಿ ಮಾತ್ರ ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿವೆ. 11 ರಲ್ಲಿ ನಾಲ್ಕು ದಕ್ಷಿಣದ […]

Advertisement

Wordpress Social Share Plugin powered by Ultimatelysocial