ಮಹಾವಿರ್ಯಾರ ಚಿತ್ರದ ಫಸ್ಟ್ ಲುಕ್ ರಿಲೀಸ್

 

ನಿವಿನ್ ಪೌಲಿ ಮತ್ತು ಸ್ಯಾಂಡಲ್​ವುಡ್ ನಟಿ ಶಾನ್ವಿ ಶ್ರೀವಾತ್ಸವ ನಟನೆಯ ಬಹುಕೋಟಿ ವೆಚ್ಚದ ಸಿನಿಮಾ

ಮಾಲಿವುಡ್ ನಟ ನಿವಿನ್ ಪೌಲಿ ನಾಯಕನಾಗಿ ನಟಿಸಿರುವ, ಶಾನ್ವಿ ಶ್ರೀವಾತ್ಸವ ನಾಯಕಿಯಾಗಿ ನಟಿಸಿರುವ ಬಹುನಿರೀಕ್ಷಿತ ಮಲಯಾಳಂನ ‘ಮಹಾವಿರ್ಯಾರ’ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಕೊಚ್ಚಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಲ್ಲಿನ ಖ್ಯಾತ ಲೇಖಕ ಎಂ. ಮುಕುಂದನ್ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿ ತಂಡಕ್ಕೆ ಶುಭಕೋರಿದ್ದಾರೆ.
ನಿವಿನ್ ಪೌಲಿ ಜತೆಗೆ ಆಸಿಫ್ ಅಲಿ ಮುಖ್ಯಭೂಮಿಕೆಯಲ್ಲಿರುವ ಈ ಸಿನಿಮಾ ಸಂಪೂರ್ಣ ಫ್ಯಾಂಟಸಿ ಕಥೆಯ ಹಿನ್ನೆಲೆಯಲ್ಲಿ ಸಾಗಲಿದೆ. ಟೈಮ್​ ಟ್ರಾವೆಲಿಂಗ್ ಸೇರಿ ಕಾನೂನು, ಕಟ್ಟಳೆ ಬಗ್ಗೆಯೂ ಚಿತ್ರ ಮಾತನಾಡಲಿದೆ. ವಿಶೇಷ ಏನೆಂದರೆ ನಿವಿನ್ ಅವರ ಹೋಮ್ ಬ್ಯಾನರ್ ನಿವಿನ್ ಜೂನಿಯರ್ ಪಿಕ್ಚರ್ಸ್ ಸಂಸ್ಥೆ ಅಡಿಯಲ್ಲಿ ಚಿತ್ರ ನಿರ್ಮಾಣವಾಗಿದೆ. ಪಿ.ಎಸ್​ ಶ್ಯಾಮ್​ನಾಸ್​ಅವರ ಇಂಡಿಯನ್ ಮೂವಿ ಮೇಕರ್ಸ್ ಸಂಸ್ಥೆಯೂ ಜಂಟಿಯಾಗಿ ಬಂಡವಾಳ ಹೂಡುತ್ತಿದೆ.

ವಿಶೇಷ ಏನೆಂದರೆ ಈ ಹಿಂದೆ ನಿವಿನ್ ಜತೆಗೆ ‘1983‘ ಮತ್ತು ‘ಆ್ಯಕ್ಷನ್ ಹೀರೋ ಬಿಜು’ ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದ ಅಬ್ರಿದ್ ಶೈನ್, ‘ಮಹಾವಿರ್ಯಾರ’ ಚಿತ್ರಕ್ಕೂ ಆ್ಯಕ್ಷನ್ ಕಟ್ ಹೇಳಿದ್ದು, ಮೂರನೇ ಬಾರಿ ಒಂದಾಗಿದ್ದಾರೆ. ಪ್ರಮುಖ ಪಾತ್ರದಲ್ಲಿ ನಟಿಸಿರುವ ನಿಮಿನ್ ಮತ್ತು ಆಸಿಫ್ ಅಲಿ ಒಟ್ಟಿಗೆ ನಟಿಸದೇ 10 ವರ್ಷವಾಯ್ತು. ಇದೀಗ ದಶಕದ ಬಳಿಕ ಈ ಜೋಡಿ ಒಂದಾಗಿದೆ.
ಚಿತ್ರದಲ್ಲಿ ಲಾಲ್, ಲಾಲು ಅಲೆಕ್ಸ್, ಸಿದ್ದೀಕಿ, ಶಾನ್ವಿ ಶ್ರೀವಾತ್ಸವ, ವಿಜಯ್ ಮೆನನ್, ಮೇಜರ್ ರವಿ, ಮಲ್ಲಿಕಾ ಸುಕುಮಾರನ್, ಕೃಷ್ಣಪ್ರಸಾದ್, ಸೂರಜ್ ಎಸ್ ಕುರುಪ್, ಸುಧೀರ್ ಕರಾಮನ, ಪದ್ಮರಾಜನ್ ರತೀಶ್, ಸುಧೀರ್ ಪರವೂರ್ ಸೇರಿ ಹಲವರು ನಟಿಸಿದ್ದಾರೆ. ಕರೊನಾ ಹಾವಳಿ ನಡುವೆಯೂ ದೊಡ್ಡ ಬಜೆಟ್​ನ ಈ ಸಿನಿಮಾದ ಶೂಟಿಂಗ್​ ರಾಜಸ್ಥಾನ, ಕೇರಳ ಸೇರಿ ಹಲವೆಡೆ ನಡೆದಿದ್ದು, ಚಂದ್ರು ಸೆಲ್ವರಾಜ್ ಛಾಯಾಗ್ರಹಣ ಮಾಡಿದ್ದಾರೆ. ಇಶಾನ್ ಛಾಬ್ರಾ ಸಂಗೀತ, ಮನೋಜ್ ಸಂಕಲನ, ಅನೀಸ್ ನಡೋಡಿ ಕಲಾ ನಿರ್ದೇಶನ ಚಿತ್ರಕ್ಕಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ವಿಧಾನಸಭಾ ಚುನಾವಣೆ: ಎಎಪಿ ಹೊಸ ಪ್ರಚಾರ ಗೀತೆಯನ್ನು ಬಿಡುಗಡೆ ಮಾಡಿದೆ, 'ಪಂಜಾಬ್ ದಾ ಪುಟ್ ಜಿತೌನಾ ಹೈ'

Fri Feb 11 , 2022
  ಆಮ್ ಆದ್ಮಿ ಪಾರ್ಟಿ (ಎಎಪಿ) ಪಂಜಾಬ್‌ನ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ಗುರುವಾರ ಅಮೃತಸರದಿಂದ ವಿಧಾನಸಭೆ ಚುನಾವಣೆಗಾಗಿ ಪಕ್ಷದ ಹೊಸ ಚುನಾವಣಾ ಹಾಡನ್ನು ಬಿಡುಗಡೆ ಮಾಡಿದರು. ಹಾಡಿನ ಸಾಹಿತ್ಯವು “ಪಂಜಾಬ್ ದಾ ಪುಟ್ಟ್ (ಮಗ) ಜಿತೌನಾ ಹೈ” (ಪಂಜಾಬ್‌ನ ಮಗನನ್ನು ವಿಜಯಿ ಮಾಡು). ಬಾಲಿವುಡ್ ನ ಖ್ಯಾತ ಗಾಯಕ ಸುಖ್ವಿಂದರ್ ಸಿಂಗ್ ಹಾಡನ್ನು ಹಾಡಿದ್ದಾರೆ. ಅಮೃತಸರದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾನ್ ಹಾಡನ್ನು ಬಿಡುಗಡೆ ಮಾಡಿದರು. ಈ ಹಾಡು […]

Advertisement

Wordpress Social Share Plugin powered by Ultimatelysocial