ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ 2022ರ ಮಹೀಂದ್ರಾ ಸ್ಕಾರ್ಪಿಯೋ:

ಮಹೀಂದ್ರಾ ಕಂಪನಿಯು(Mahindra) ತನ್ನ ನ್ಯೂ ಜನರೇಷನ್ ಕಾರು ಮಾದರಿಗಳಾದ ಥಾರ್ ಮತ್ತು ಎಕ್ಸ್‌ಯುವಿ700 ಬಿಡುಗಡೆಯ ನಂತರ ಸ್ಕಾರ್ಪಿಯೋ ಎಸ್‌ಯುವಿ ಮಾದರಿಯನ್ನು ಬಿಡುಗಡೆ ಮಾಡಲು ಸಜ್ಜಾಗುತ್ತಿದ್ದು, ಹೊಸ ಕಾರು ಮಾದರಿಯು ಶೀಘ್ರದಲ್ಲೇ ಮಾರುಕಟ್ಟೆ ಪ್ರವೇಶಿಸುವುದು ಬಹುತೇಕ ಖಚಿತವಾಗಿದೆ.ನ್ಯೂ ಜನರೇಷನ್ ಸ್ಕಾರ್ಪಿಯೋ ಎಸ್‌ಯುವಿ ಮಾದರಿಯ ಬಿಡುಗಡೆಗಾಗಿ ಮಹೀಂದ್ರಾ ಕಂಪನಿಯು ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದ್ದು, ಹೊಸ ತಲೆಮಾರಿನ ಆವೃತ್ತಿಯು ಪ್ರಸ್ತುತ ಮಾರುಕಟ್ಟೆಯಲ್ಲಿನ ಮಾದರಿಗಿಂತಲೂ ಹಲವು ಹೊಸ ಬದಲಾವಣೆಗಳೊಂದಿಗೆ ಬಿಡುಗಡೆಗೆ ಸಿದ್ದವಾಗುತ್ತಿದೆ.ಸ್ಕಾರ್ಪಿಯೋ ಹೊಸ ಮಾದರಿಯನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿರುವ ಮಹೀಂದ್ರಾ ಮಹತ್ವದ ಬದಲಾವಣೆಯೊಂದಿಗೆ ಎಸ್‌ಯುವಿ ಕಾರು ಮಾರಾಟದಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದ್ದು, ಅಂತಿಮ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿರುವ ಕಂಪನಿಯು ಈ ವರ್ಷದ ಮೊದಲ ತ್ರೈಮಾಸಿಕ ಅವಧಿಯಲ್ಲಿ ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ.ಹೊಸ ಸ್ಕಾರ್ಪಿಯೋ ಕಾರು ಮಾದರಿಯ ಮಾರಾಜೋ ಎಂಪಿವಿ ಹೊಸ ಆವೃತ್ತಿಯಿಂದಲೂ ಕೆಲವು ಪ್ರೀಮಿಯಂ ಫೀಚರ್ಸ್‌ಗಳನ್ನು ಎರವಲು ಪಡೆದುಕೊಂಡಿದ್ದು, ಹೊಸ ಫೀಚರ್ಸ್‌ಗಳಿಂದಾಗಿ ಸ್ಕಾರ್ಪಿಯೋ ಕಾರು ಮತ್ತಷ್ಟು ಬಲಿಷ್ಠ ವಿನ್ಯಾಸದೊಂದಿಗೆ ವಿಸ್ತರಿತ ವೀಲ್ಹ್ ಬೆಸ್ ಮೂಲಕ ಅರಾಮದಾಯಕ ಕ್ಯಾಬಿನ್ ಸ್ಪೆಸ್ ಹೊಂದಿದೆ.ಹೊಸ ಕಾರಿನಲ್ಲಿ ಆಕರ್ಷಕವಾದ ಪ್ರೀಮಿಯಂ ಫೀಚರ್ಸ್ ಜೊತೆಗೆ ಹೆಚ್ಚಿನ ಮಟ್ಟದ ಸುರಕ್ಷಾ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗುತ್ತಿದ್ದು, ಆರಾಮದಾಯಕವಾದ ಆಸನ ಸೌಲಭ್ಯದೊಂದಿಗೆ ಅಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್ ಪ್ಲೇ ಸರ್ಪೊಟ್ ಮಾಡುವ ಇನ್ಪೋಟೈನ್‌ಮೆಂಟ್ ಸಿಸ್ಟಂ, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್, ಎಲೆಕ್ಟ್ರಿಕ್ ಸನ್‌ರೂಫ್ ಮತ್ತು ವಿವಿಧ ಡ್ರೈವ್ ಮೋಡ್ ಕಂಟ್ರೋಲ್ ಸೇರಿದಂತೆ ಹಲವು ಹೊಸ ಸೌಲಭ್ಯಗಳಿವೆ.ಹಾಗೆಯೇ ಹೊಸ ಕಾರಿನಲ್ಲಿ ಈ ಬಾರಿ ಮಲ್ಟಿ ಏರ್‌ಬ್ಯಾಗ್, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಆಯ್ದ ವೆರಿಯೆಂಟ್‌ಗಳಲ್ಲಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಕ್ರೂಸ್ ಕಂಟ್ರೋಲ್, ಸನ್‌ರೂಫ್, ಪುಶ್ ಬಟನ್ ಆನ್/ಆಫ್, ಕೀ ಲೆಸ್ ಎಂಟ್ರಿ, ರೂಫ್ ರೈಲ್ಸ್, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಫಾಗ್ ಲ್ಯಾಂಪ್, ಟರ್ನ್ ಇಂಡಿಕೇಟಕ್ ಲೈಟ್, ಸಿಲ್ವರ್ ಸ್ಕೀಡ್ ಪ್ಲೇಟ್ ಸೌಲಭ್ಯಗಳಿರಲಿವೆ.ಇದರೊಂದಿಗೆ ಹೊಸ ವಿನ್ಯಾಸದ 17 ಇಂಚಿನ ಅಲಾಯ್ ವೀಲ್ಹ್‌ಗಳು, ಹೊಸ ವಿನ್ಯಾಸದ ಫ್ರಂಟ್ ಅಂಡ್ ರಿಯರ್ ಬಂಪರ್ ಮತ್ತು ವಿಸ್ತರಿತ ವೀಲ್ಹ್‌ಬೆಸ್‌ನಿಂದಾಗಿ ಮೂರನೇ ಸಾಲಿನ ಪ್ರಯಾಣಿಕರಿಗೆ ಹೆಚ್ಚಿನ ಮಟ್ಟದ ಸ್ಥಳಾವಕಾಶ ನೀಡಲಿದೆ.ಹೊಸ ಕಾರಿನಲ್ಲಿ ರಿಯರ್ ಎಸಿ ವೆಂಟ್ಸ್, ಲೆದರ್ ಸೀಟುಗಳು, 6 ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟ್ ಸೇರಿದಂತೆ ಹೊಸ ಕಾರಿನಲ್ಲಿ ಹಲವಾರು ಸುರಕ್ಷಾ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗುತ್ತಿದೆ.ಹೊಸ ಕಾರಿನ ವಿನ್ಯಾಸದ ಕುರಿತು ಹೇಳುವುದಾದರೆ ನವೀಕರಿಸಲಾದ ಗ್ರಿಲ್‌ನೊಂದಿಗೆ ಅಡ್ಡಲಾಗಿ ಮತ್ತು ನಡುವೆ ಐದು ಲಂಬ ಸ್ಲೇಟ್ಗಳನ್ನು ನೀಡಲಾಗಿದೆ. ಇದರೊಂದಿಗೆ ಎರಡು ಭಾಗಗಳಲ್ಲಿ ಹೆಡ್‌ಲೈಟ್ ಘಟಕಗಳನ್ನು ನೀಡಲಾಗಿದ್ದು, ಅದನ್ನು ಎರಡು ಭಾಗಗಳಾಗಿ ವಿಂಗಡಿಸಲಾಗಿದೆ, ಕೆಳಗಿನ ಭಾಗದಲ್ಲಿ ಫಾಗ್ ಲೈಟ್ ಇರಿಸಲಾಗಿದೆ. ಅದರ ಪಕ್ಕದಲ್ಲಿ ನೋಂದಣಿ ಫಲಕವನ್ನು ಹಾಕಲಾಗಿದ್ದು, ವಾಹನವನ್ನು ಟೊಯಿಂಗ್ ಮಾಡಲು ಸಹ ಸಹಕಾರಿಯಾಗಿದೆ.ಮುಂಭಾಗದಿಂದ ಬಲವಾದ ನೋಟವನ್ನು ನೀಡುವ ಅದರ ಬಾನೆಟ್ ಮೇಲೆ ಗೆರೆಗಳನ್ನು ಕಾಣಬಹುದು. ಅದರ ಬದಿಯಲ್ಲಿ ದೊಡ್ಡ ಮಿಶ್ರಲೋಹದ ಚಕ್ರಗಳು ಕಂಡುಬರುತ್ತವೆ. ಇದು ಈ ಎಸ್‌ಯುವಿಯ ಗಾತ್ರಕ್ಕೆ ಸಾಕಾಗಲಿದ್ದು, ಇದರ ಪಕ್ಕದಲ್ಲಿರುವ ಪುಟ್ ಸ್ಟೆಪ್‌ಗಳನ್ನು ಮೊದಲಿಗಿಂತ ದೊಡ್ಡದಾಗಿ ಇರಿಸಬಹುದಾಗಿದ್ದು, ಪ್ರಯಾಣಿಕರು ಏಳಲು ಮತ್ತು ಇಳಿಯಲು ಸಹಾಯ ಮಾಡುತ್ತದೆ. ಹಿಂಭಾಗದಲ್ಲಿ ಟೈಲ್ ಗೇಟ್ ಮತ್ತು ಅದನ್ನು ತೆರೆಯಲು ಬದಿಯಲ್ಲಿ ಡೋರ್ ಹ್ಯಾಂಡಲ್ ಇದ್ದು, ಎಲ್‌ಇಡಿ ಟೈಲ್ ಲೈಟ್ ಇದರಲ್ಲಿ ಕಾಣಬಹುದಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಾವೇರಿ-ಪೆನ್ನಾರ್ ನದಿ ಜೋಡಣೆಗೆ ಸಮ್ಮತಿ ನೀಡಿದ ನಿರ್ಮಲಾ ಸೀತಾರಾಮನ್

Tue Feb 1 , 2022
ನವದೆಹಲಿ: ಮುಂದಿನ 25 ವರ್ಷಗಳ ಅಭಿವೃದ್ಧಿ ಆಧಾರಾದಲ್ಲಿ ಕೇಂದ್ರ ಬಜೆಟ್ ಮಂಡಿಸಲಾಗುತ್ತಿದ್ದು, ಪ್ರಧಾನ ಮಂತ್ರಿ ಗತಿಶಕ್ತಿ ಮಾಸ್ಟರ್ ಪ್ಲಾನ್ ಮೂಲಕ ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ.ಕೇಂದ್ರ ಬಜೆಟ್ ನಲ್ಲಿ ಪ್ರಮುಖವಾಗಿ ನದಿ ಜೊಡಣೆಗೆ ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದೆ. ಕಾವೇರಿ ಪೆನ್ನಾರ್ ನದಿ ಜೋಡಣೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಅಲ್ಲದೇ ಗೋದಾವರಿ-ಕೃಷ್ಣ, ಕೃಷ್ಣ-ಪೆನ್ನಾರ್, ಪೆನ್ನಾರ್-ಕಾವೇರಿ ನದಿಗಳ ಜೋಡಣೆಗೂ ಅನುಮತಿ ನೀಡಲಾಗಿದೆ.ನದಿ ಜೋಡಣೆಗೆ ಕೇಂದ್ರ ಸರ್ಕಾರ […]

Advertisement

Wordpress Social Share Plugin powered by Ultimatelysocial