ಮಾಜಿ ಶಾಸಕ ಎಚ್.ಡಿ.ಚೌಡಯ್ಯ ನಿಧನ: ಗಣ್ಯರ ಸಂತಾಪ

ಮಂಡ್ಯ ಫೆಬ್ರವರಿ 16: ಮಾಜಿ ಶಾಸಕರು ಹಾಗೂ ಜನಮುಖಿ ಮುತ್ಸದ್ಧಿ ರಾಜಕಾರಣಿ ಆಗಿದ್ದ ಎಚ್.ಡಿ.ಚೌಡಯ್ಯ (94) ವಯೋ ಸಹಜ ಆರೋಗ್ಯ ಸಮಸ್ಯೆಗಳಿಂದ ನಿಧನರಾಗಿದ್ದಾರೆ. ಅವರ ಅಗಲಿಕೆಗೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಮಾಜಿ ಶಾಸಕ ಡಾ. ಎಚ್.ಡಿ.ಚೌಡಯ್ಯ ಅನಾರೋಗ್ಯದಿಂದ ಕಳೆದ ರಾತ್ರಿ ಮಂಡ್ಯದ ಹೊಳಲು ನಿವಾಸದಲ್ಲಿ ನಿಧನರಾದರು. ಇವರು ನಾಲ್ಕು ಬಾರಿ ಶಾಸಕರಾಗಿದ್ದರು.

ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿಯೂ ಜನಸೇವೆ ಮಾಡಿದ್ದಾರೆ. ಕಾವೇರಿ ಹೋರಾಟದಲ್ಲಿ ಮಾದೇಗೌಡರೊಂದಿಗೆ ಚೌಡಯ್ಯ ಪಾಲ್ಗೊಂಡಿದ್ದರು. ಪಿಇಟಿ ಶಿಕ್ಷಣ ಸಂಸ್ಥೆ ಬೆಳೆಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇವರ ಅಗಲಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

‘ನನ್ನ ಆತ್ಮೀಯರೂ, ಹಿತೈಶಿಗಳೂ ಆಗಿದ್ದ ಮಂಡ್ಯದ ಹಿರಿಯ ಮುತ್ಸದ್ದಿ ಹೆಚ್.ಡಿ.ಚೌಡಯ್ಯ ಅವರ ನಿಧನ ಅತೀವ ದುಃಖದ ಸಂಗತಿ’ ಎಂದು ಬರೆದಿದ್ದಾರೆ. 94 ವರ್ಷದ ಹಿರಿಯರಾಗಿದ್ದ ಮಾಜಿ ಶಾಸಕರು ಹಾಗೂ ಜನಮುಖಿ ಮುತ್ಸದ್ಧಿ ರಾಜಕಾರಣಿ ಆಗಿದ್ದ ಇವರಿಗೆ ವಯೋ ಸಹಜ ಆರೋಗ್ಯ ಸಮಸ್ಯೆಗಳಿದ್ದವು. ಪತ್ನಿಯವರ ಅಗಲಿಕೆ ಬಳಿಕ ಬಹಳ ನೊಂದಿದ್ದರು. ಈ ನೋವು ಇವರ ಆರೋಗ್ಯವನ್ನು ಹದಗೆಡಿಸಿತ್ತು. ಶತಾಯುಶಿ ಆಗುತ್ತಾರೆ ಎನ್ನುವ ನನ್ನ ನಿರೀಕ್ಷೆಯನ್ನು ನಿರಾಸೆಗೊಳಿಸಿ ನಮ್ಮನ್ನು ಅಗಲಿದ್ದಾರೆ. ಇವರ ಅಗಲಿಕೆಯನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಕುಟುಂಬ ವರ್ಗ ಮತ್ತು ಬಂಧುಗಳಿಗೆ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ’ ಎಂದು ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.

‘ಚೌಡಯ್ಯ ಅವರು ಪಿಇಎಸ್ ಟ್ರಸ್ಟ್‌ನ ಮಾಜಿ ಅಧ್ಯಕ್ಷರಾಗಿ, ಹಿರಿಯ ಸಹಕಾರಿ ಧುರೀಣರಾಗಿ, ಕಾವೇರಿ ಹೋರಾಟದ ಮುಂಚೂಣಿ ನಾಯಕರಾಗಿದ್ದವರು. 4 ಬಾರಿ ಕೆರಗೋಡು ಕ್ಷೇತ್ರದ ಶಾಸಕರಾಗಿ, 2 ಬಾರಿ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿ, ಮಂಡ್ಯದ ಪ್ರತಿಷ್ಟಿತ ಪಿಇಟಿ ಅಧ್ಯಕ್ಷರಾಗಿ 31 ವರ್ಷಗಳ ಸುಧೀರ್ಘ ಸೇವೆ ಸಲ್ಲಿಸಿದ್ದರು. ಚೌಡಯ್ಯನವರು ಮಂಡ್ಯದ ಸ್ವಾಭಿಮಾನಿ ರಾಜಕಾರಣದ ಪ್ರತೀಕವಾಗಿದ್ದರು. ಇವರ ಅಗಲಿಕೆಯಿಂದ ನನ್ನ ಸಹೃದಯಿ ಹಿತೈಶಿಯೊಬ್ಬರನ್ನು ಕಳೆದುಕೊಂಡಿದ್ದೀನಿ’ ಎಂದು ಬರೆದಿದ್ದಾರೆ.

ಇನ್ನೂ ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಅವರು ಎಚ್.ಡಿ.ಚೌಡಯ್ಯ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಮಾಜಿ ಶಾಸಕರು, ಶಿಕ್ಷಣ ತಜ್ಞರು, ಶಿಸ್ತು, ದಕ್ಷ ಆಡಳಿಗಾರರೂ ಆಗಿದ್ದ ಎಚ್.ಡಿ.ಚೌಡಯ್ಯ ಅವರ ನಿಧನ ನನಗೆ ಬಹಳ ನೋವನ್ನುಂಟು ಮಾಡಿದೆ. ನಾಲ್ಕು ಅವಧಿಗೆ ಶಾಸಕರು, ಎರಡು ಅವಧಿಗೆ ವಿಧಾನ ಪರಿಷತ್‌ ಸದಸ್ಯರೂ ಆಗಿದ್ದ ಅವರು ಆದರ್ಶ ಜನಪ್ರತಿನಿಧಿ ಆಗಿದ್ದರು. ವಿವಿಧ ಕ್ಷೇತ್ರಗಳಲ್ಲಿ ಸಮಾಜಕ್ಕೆ ಎಣೆ ಇಲ್ಲದಷ್ಟು ಸೇವೆ ಸಲ್ಲಿಸಿದ್ದರು.

ಎಚ್.ಡಿ.ಚೌಡಯ್ಯ ಅವರ ಅಗಲಿಕೆಯೊಂದಿಗೆ ಪ್ರಾಮಾಣಿಕ, ಸೇವಾತತ್ಪರ, ನಿಸ್ವಾರ್ಥ ರಾಜಕಾರಣದ ಕೊಂಡಿಯೊಂದು ಕಳಚಿದಂತಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬದವರು ಹಾಗೂ ಅಭಿಮಾನಿಗಳಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದು ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಚಿರು ಇಲ್ಲ ಅಂತ ನಾನು ನಂಬಲ್ಲ |

Wed Feb 16 , 2022
  ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada   Please follow and like us:

Advertisement

Wordpress Social Share Plugin powered by Ultimatelysocial