ತೃಣಮೂಲ ಕಾಂಗ್ರೆಸ್​ ಪಕ್ಷದ ಅಧ್ಯಕ್ಷೆಯಾಗಿ ಮಮತಾ ಮರು ಆಯ್ಕೆ

ಕೋಲ್ಕತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತೃಣಮೂಲ ಕಾಂಗ್ರೆಸ್​ ಪಕ್ಷದ ಅಧ್ಯಕ್ಷೆಯಾಗಿ ಮರು ಆಯ್ಕೆಯಾಗಿದ್ದಾರೆ.ಕೋಲ್ಕತಾದ ನೇತಾಜಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪಕ್ಷದ ಚುನಾವಣೆಗಳಲ್ಲಿ ಟಿಎಂಸಿ ಅಧ್ಯಕ್ಷರು ಮತ್ತು ಕಾರ್ಯಕಾರಿ ಸಮಿತಿಯನ್ನು ರಚನೆ ಮಾಡಲಾಯಿತು.ಈ ಸಂದರ್ಭದಲ್ಲಿ ನಡೆದ ಪಕ್ಷದ ಸಾಂಸ್ಥಿಕ ಚುನಾವಣೆಯಲ್ಲಿ ಮಮತಾ ಅವರನ್ನು ಮತ್ತೊಂದು ಅವಧಿಗೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.ಮರು ಆಯ್ಕೆ ಬಳಿಕ ಮಾತನಾಡಿದ ಮಮತಾ, 2024ರ ಲೋಕಸಭೆ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್​​ ಉತ್ತರ ಪ್ರದೇಶದಿಂದ ಸ್ಪರ್ಧೆ ಮಾಡಲಿದೆ. ಭಾರತೀಯ ಜನತಾ ಪಾರ್ಟಿ ವಿರುದ್ಧ ಹೋರಾಡಲು ಎಲ್ಲ ಪ್ರಾದೇಶಿಕ ಪಕ್ಷಗಳು ಒಂದಾಗಬೇಕು ಎಂದು ಹೇಳಿದರು. ಬಿಜೆಪಿಯನ್ನು ಸೋಲಿಸಲು ಎಲ್ಲರೂ ಒಂದಾಗಿ ಹೋರಾಡಬೇಕಾದ ಅನಿವಾರ್ಯತೆ ಇದೆ ಎಂದ ದೀದೀ, ಬಿಜೆಪಿ ಸೋಲಿಸುವುದಾಗಿ ಇದೇ ವೇಳೆ ಪ್ರತಿಜ್ಞೆ ಮಾಡಿದರು.ತಮ್ಮ ಪಕ್ಷವು ಇನ್ನೂ ಬಲಪಡಲಿದೆ ಎಂದು ಇದೇ ವೇಳೆ ಹೇಳಿದ ಮಮತಾ, 7-8 ಬಿಜೆಪಿ ನಾಯಕರು ಟಿಎಂಸಿ ಸೇರುವ ಇಂಗಿತ ವ್ಯಕ್ತಪಡಿಸಿದ್ದಾರೆಂದು ನುಡಿದರು. ಈ ಬಾರಿಯ ಕೇಂದ್ರ ಬಜೆಟ್ ವಿರುದ್ಧ ಮಾತನಾಡಿದ ಅವರು, ಬಜೆಟ್​ನಲ್ಲಿ ಕಾರ್ಮಿಕರು, ರೈತರು ಮತ್ತು ಜನಸಾಮಾನ್ಯರಿಗೆ ಯಾವುದೇ ರೀತಿಯ ಯೋಜನೆ ಘೋಷಣೆಯಾಗಿಲ್ಲ ಎಂದು ಟೀಕಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಡೇಟಿಂಗ್ ಮಾಡುತ್ತಿದ್ದಾರೆಯೇ?

Wed Feb 2 , 2022
ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಸಂಬಂಧದಲ್ಲಿದ್ದಾರೆ ಎಂಬ ವದಂತಿಗಳಿವೆ. ಒಟ್ಟಿಗೆ ಜಿಮ್‌ಗೆ ಹೋಗುವುದರಿಂದ ಹಿಡಿದು ಡಿನ್ನರ್ ಡೇಟ್‌ಗಳಿಗೆ ಹೋಗುವವರೆಗೆ, ಈ ಜೋಡಿಯು ಸಾಮಾನ್ಯವಾಗಿ ಸಾರ್ವಜನಿಕವಾಗಿ ಗುರುತಿಸಲ್ಪಡುತ್ತದೆ. ಆದರೆ, ರಶ್ಮಿಕಾ ಅಥವಾ ವಿಜಯ್ ದೇವರಕೊಂಡ ತಮ್ಮ ಸಂಬಂಧದ ಬಗ್ಗೆ ಸಾರ್ವಜನಿಕವಾಗಿ ತೆರೆದುಕೊಂಡಿಲ್ಲ. ಆದಾಗ್ಯೂ, ದಂಪತಿಗಳು ಸ್ವಲ್ಪ ಸಮಯದವರೆಗೆ ಪರಸ್ಪರ ಡೇಟಿಂಗ್ ಮಾಡುತ್ತಿದ್ದಾರೆ ಎಂದು ಅವರ ಅಭಿಮಾನಿಗಳು ಮನಗಂಡಿದ್ದಾರೆ. ವಿಜಯ್ ದೇವರಕೊಂಡ ಜೊತೆ ರಶ್ಮಿಕಾ ಮಂದಣ್ಣ ಡೇಟಿಂಗ್? ರಶ್ಮಿಕಾ ಮಂದಣ್ಣ ಮತ್ತು […]

Advertisement

Wordpress Social Share Plugin powered by Ultimatelysocial