ಮಂಗಳೂರು ಹಾಸ್ಟೆಲ್‌ನಲ್ಲಿ ವಿಷಾಹಾರ ಸೇವನೆ.

ಮಂಗಳೂರಿನ ಪ್ರತಿಷ್ಠಿತ ಸಿಟಿ ಆಸ್ಪತ್ರೆಯ ನರ್ಸಿಂಗ್ ಕಾಲೇಜಿನ ಹಾಸ್ಟೆಲ್‌ನಲ್ಲಿ ಏಕಾಏಕಿ ಅಸ್ವಸ್ಥಗೊಂಡಿದ್ದರಿಂದ 89ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಫುಡ್ ಪಾಯಿಸನ್ ಆಗಿದ್ದರಿಂದ ವಿದ್ಯಾರ್ಥಿಗಳು ಅನಾರೋಗ್ಯಕ್ಕೀಡಾಗಿದ್ದಾರೆ ಎನ್ನಲಾಗಿದೆ.ಮಂಗಳೂರು ಹೊರವಲಯದ ಶಕ್ತಿ ನಗರದಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ಹಾಸ್ಟೆಲ್ ಇದೆ. ಸೋಮವಾರ ಮುಂಜಾನೆಯಿಂದ ವಿದ್ಯಾರ್ಥಿಗಳು ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅಸ್ವಸ್ಥಗೊಂಡ 89ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಮಂಗಳೂರಿನ ಸಿಟಿ ಆಸ್ಪತ್ರೆ, ಎ.ಜೆ. ಹಾಸ್ಪಿಟಲ್ ಹಾಗೂ ಕೆ.ಎಂ.ಸಿ ಆಸ್ಪತ್ರೆಗಳಿಗೆ ದಾಖಲಾಗಿಸಲಾಗಿದೆ.ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕಾಲೇಜು ಆಡಳಿತ ಮಂಡಳಿ ನಿರ್ಲಕ್ಷ್ಯದಿಂದ ಘಟನೆ ಸಂಭವಿಸಿದೆ ಎಂಬ ಆರೋಪ ಕೇಳಿಬಂದಿದೆ. ಆಸ್ಪತ್ರೆಗಳಿಗೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

25 ಕೋಟಿ ರೂಪಾಯಿ ದಾಟಿದ ಟ್ರಾಫಿಕ್‌ ದಂಡ.

Tue Feb 7 , 2023
  ಟ್ರಾಫಿಕ್ ನಿಯಮ ಉಲ್ಲಂಘನೆ  ಪ್ರಕರಣಗಳ ದಂಡ ಪಾವತಿಗೆ ಶೇಕಡಾ 50ರಷ್ಟು ರಿಯಾಯಿತಿ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ನಾಲ್ಕನೇ ದನವೂ ಸ್ವಯಂಪ್ರೇರಿತರಾಗಿ ದಂಡ ಪಾವತಿ (Traffic Fines) ಮುಂದುವರಿದಿದೆ. ನಾಲ್ಕನೇ ದಿನವಾದ ಸೋಮವಾರ ಆರಂಭದ ಮಾಹಿತಿ ಪ್ರಕಾರ ಇದುವರೆಗೆ ೮,೬೮,೪೦೫ ಕೇಸ್‌ಗಳನ್ನು ವಿಲೇವಾರಿ ಮಾಡಿದ್ದು, 25,42,52,೦೦೦ಕ್ಕೂ ಹೆಚ್ಚು ರೂಪಾಯಿ ಸಂಗ್ರಹಿಸಲಾಗಿದೆ.ಈ ಮೂಲಕ ದಂಡ ಸಂಗ್ರಹ ಮೊತ್ತ 25 ಕೋಟಿ 42 ಲಕ್ಷ 52 ಸಾವಿರ ರೂಪಾಯಿಗೂ ಅಧಿಕ […]

Advertisement

Wordpress Social Share Plugin powered by Ultimatelysocial