ಮೇ 27ರಿಂದ 29ರವರೆಗೆ ಪಣಂಬೂರು ಬೀಚ್ ನಲ್ಲಿ ರಾಷ್ಟ್ರೀಯ ಸರ್ಫಿಂಗ್ ಚಾಂಪಿಯನ್ ಶಿಪ್

ಮಂಗಳೂರು, ಮೇ 25: ಪಣಂಬೂರು ಕಡಲ ತೀರದಲ್ಲಿ ಮೇ 27ರಿಂದ 29ರವರೆಗೆ ರಾಷ್ಟ್ರೀಯ ಸರ್ಫಿಂಗ್ ಚಾಂಪಿಯನ್ ಶಿಪ್ ಆಯೋಜಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಈ ವಿಷಯ ತಿಳಿಸಿದ ಅವರು ಸರ್ಫಿಂಗ್ ಫೆಡರೇಶನ್ ಆಫ್ ಇಂಡಿಯಾ ಮತ್ತು ಮಂತ್ರ ಸರ್ಫ್ ಕ್ಲಬ್ ಸಹಭಾಗಿತ್ವದಲ್ಲಿ ಈ ಚಾಂಪಿಯನ್ ಶಿಪ್ ನಡೆಯಲಿದೆ ಎಂದರು.

ಪ್ರವಾಸೋದ್ಯಮ ಇಲಾಖೆಯಿಂದ ‘ಇಂಡಿಯನ್ ಓಪನ್ ಆಫ್ ಸರ್ಫಿಂಗ್-2022’ಕ್ಕೆ 15 ಲಕ್ಷ ರೂ.ಗಳ ಪ್ರಾಯೋಜಕತ್ವವನ್ನು ನೀಡಲಾಗಿದೆ. 70ಕ್ಕೂ ಹೆಚ್ಚು ಕ್ರೀಡಾಪಟುಗಳು ರಾಜ್ಯ ಹಾಗೂ ಹೊರ ರಾಜ್ಯಗಳಿಂದ ರಾಷ್ಟ್ರೀಯ ಸರ್ಫಿಂಗ್ ಚಾಂಪಿಯನ್ ಗಳು ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.

2017ರಲ್ಲಿ ನಡೆದ ‘ಇಂಡಿಯನ್ ಓಪನ್ ಆಫ್ ಸರ್ಫಿಂಗ್ ಬಳಿಕ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ Surf Tourism 20 ಪಟ್ಟು ಅಭಿವೃದ್ಧಿಯಾಗಿದೆ ಎಂದು ಸರ್ಫಿಂಗ್ ಫೆಡರೇಶನ್ ಆಫ್ ಇಂಡಿಯಾದ ಅಧ್ಯಕ್ಷ ಗೌರವ್ ಹೆಗ್ಡೆ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಮಾಣಿಕ್ಯ, ಮಂಗಳ ಸರ್ಫಿಂಗ್ ಕ್ಲಬ್ ನ ರಾಮ್ ಮೋಹನ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಭಾರತದ ಕಲ್ಪನೆಗೆ ವಿರುದ್ಧವಾಗಿ ಮೋದಿ ನಡೆ: ರಾಹುಲ್ ಗಾಂಧಿ ಟೀಕೆ

Wed May 25 , 2022
ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿಯನ್ನು ಮುಂದುವರಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮೋದಿಯವರು ಭಾರತದ ಕಲ್ಪನೆಗೆ ವಿರುದ್ಧವಾಗಿ ನಡೆಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ಕಾರ್ಪಸ್ ಕ್ರಿಸ್ಟಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ `ಇಂಡಿಯಾ @ 75′ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು, ನರೇಂದ್ರ ಮೋದಿಯವರು ಭಾರತವನ್ನು ಒಳಗೊಳ್ಳದ ಮತ್ತು ದೇಶದ ಜನಸಂಖ್ಯೆಯ ಬಹುಭಾಗವನ್ನು ಹೊರಗಿಡುವ ಮನಸ್ಥಿತಿಯನ್ನು ಹೊಂದಿದ್ದಾರೆ. ಇದು ಮೋದಿಯವರು ದೇಶಕ್ಕೆ ಮಾಡುತ್ತಿರುವ ಅನ್ಯಾಯ ಮತ್ತು […]

Advertisement

Wordpress Social Share Plugin powered by Ultimatelysocial