ಮನೀಶ್ ಸಿಸೋಡಿಯಾ ಬಂಧನ!

ದೆಹಲಿಯ ಅಬಕಾರಿ ಹಗರಣದಲ್ಲಿ ಬಂಧಿತರಾಗಿರುವ ಆಮ್ ಆದ್ಮಿ ಪಕ್ಷದ ಹಿರಿಯ ನಾಯಕ ಮನೀಶ್ ಸಿಸೋಡಿಯಾ ಅವರನ್ನು ಬೇಷರತ್ತಾಗಿ ಬಿಡುಗಡೆ ಮಾಡುವಂತೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಮನೀಶ್ ಸಿಸೋಡಿಯಾ ಬಂಧನ ವಿಚಾರದಲ್ಲಿ ಸ್ಟಾಲಿನ್ ನಿಲುವು, ಅದರ ಮಿತ್ರ ಪಕ್ಷವಾದ ಕಾಂಗ್ರೆಸ್‌ನ ನಿಲುವಿನಿಂದ ತುಂಬಾ ಬದಲಾಗಿದೆ. ಆಮ್ ಆದ್ಮಿ ಪಕ್ಷದ ಬಗ್ಗೆ ಡಿಎಂಕೆ ಇದು ಸೂಕ್ಷ್ಮ ದೃಷ್ಟಿಕೋನ ಹೊಂದಿದೆ ಎಂಬುದಕ್ಕೆ ಈ ಪತ್ರ ಸಾಕ್ಷಿಯಾಗಿದೆ. ಕಾಂಗ್ರೆಸ್ ಮನೀಶ್ ಸಿಸೋಡುಯಾ ವಿಚಾರದಲ್ಲಿ ತಟಸ್ಥವಾಗಿದೆ. ಆದರೆ, ಕೇಂದ್ರ ಸರ್ಕಾರ ಕೇಂದ್ರೀಯ ತನಿಖಾ ಸಂಸ್ಥೆಗಳ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಹಲವು ಬಾರಿ ವಾದಾಳಿ ನಬಡೆಸಿದರೂ ಎಲ್ಲೂ ಸಿಸೋಡಿಯಾ ಅವರ ಹೆಸರು ತೆಗೆದುಕೊಂಡಿಲ್ಲ.

ಇತ್ತೀಚೆಗೆ ನ ದೆಹಲಿ ಉಪಮುಖ್ಯಮಂತ್ರಿ ಮನೀರ್ಶ ಸಿಸೋಡಿಯಾ ಬಂಧನ ಖಂಡಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ತೃಣಮೂಲ ಕಾಂಗ್ರೆಸ್‌ನ ಮಮತಾ ಬ್ಯಾನರ್ಜಿ, ಶಿವಸೇನೆಯ (ಯುಬಿಟಿ) ಉದ್ಧವ್ ಠಾಕ್ರೆ, ಎನ್‌ಸಿಪಿಯ ಶರದ್ ಪವಾರ್ ಮತ್ತು ಬಿಆರ್‌ಎಸ್‌ನ ಕೆ ಚಂದ್ರಶೇಖರ ರಾವ್ ಸೇರಿದಂತೆ ಎಂಟು ಪ್ರತಿಪಕ್ಷ ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಈ ಪತ್ರಕ್ಕೂ ಕಾಂಗ್ರೆಸ್ ಸಹಿ ಹಾಕಿರಲಿಲ್ಲ.

ಆದರೆ, ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಈ ವಿಷಯದಲ್ಲಿ ಸ್ಪಷ್ಟ ನಿಲುವು ತೆಗೆದುಕೊಂಡಿದ್ದು, ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. “ದೆಹಲಿಯ ಚುನಾಯಿತ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸುಳ್ಳು ಆರೋಪಗಳ ಮೇಲೆ ಬಂಧಿಸಲಾಗಿದೆ. ವೈಯಕ್ತಿಕ ಸ್ವಾತಂತ್ರ್ಯದ ಸಾಂವಿಧಾನಿಕ ಖಾತರಿಯನ್ನು ಕಸಿದುಕೊಕೊಂಡು ಅವರನ್ನು ನೋವು ಮತ್ತು ಒತ್ತಡಕ್ಕೆ ಒಳಗಾಗುವಂತೆ ಮಾಡಿರುವುದನ್ನು ನೋಡಿ ನಾನು ದುಃಖಿತನಾಗಿದ್ದೇನೆ ಮತ್ತು ನಿರಾಶೆಗೊಂಡಿದ್ದೇನೆ” ಎಂದು ಪತ್ರದಲ್ಲಿ ಬರೆಯಲಾಗಿದೆ.

” ನ್ಯಾಯ ವ್ಯವಸ್ಥೆಯ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಒಕ್ಕೂಟದಲ್ಲಿ ಆಡಳಿತ ಪಕ್ಷದ ವೈಯಕ್ತಿಕ ತೃಪ್ತಿಗಾಗಿ ಕಾನೂನಿನ ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ. ಮನೀಶ್ ಸಿಸೋಡಿಯಾ ಅವರನ್ನು ಬೇಷರತ್ತಾಗಿ ಬಿಡುಗಡೆ ಮಾಡಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಾನು ನಿಮಗೆ ಮನವಿ ಮಾಡುತ್ತೇನೆ. ಏಳು ದಶಕಗಳಷ್ಟು ಹಳೆಯದಾದ ನಮ್ಮ ಸಂವಿಧಾನದ ಕಾನೂನು ಮತ್ತು ಮೂಲಭೂತ ತತ್ವಗಳ ಸರಿಯಾದ ಪ್ರಕ್ರಿಯೆಯನ್ನು ಅವಮಾನಿಸಿ ಅವರನ್ನು ಬಂಧಿಸಲಾಗಿದೆ” ಎಂದು ಸ್ಟಾಲಿನ್ ಬರೆದಿದ್ದಾರೆ.

ಈ ಪತ್ರವು ಆಡಳಿತಾರೂಢ ಡಿಎಂಕೆಯ ನಿಲುವಿನಲ್ಲಿ ದೊಡ್ಡ ಬದಲಾವಣೆಯನ್ನು ಸೂಚಿಸುತ್ತದೆ. ಮಾರ್ಚ್ 1 ರಂದು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಿದ್ದ ಸ್ಟಾಲಿನ್ ಅವರ ಜನ್ಮದಿನದ ಆಚರಣೆಗೆ ಎಎಪಿಯನ್ನು ಆಹ್ವಾನಿಸಿರಲಿಲ್ಲ. ಪಕ್ಷದ ನಾಯಕರು, ಆ ದಿನ ಕಾರ್ಯಕ್ರಮಕ್ಕೆ ಬರುವವರಿಗೆ ಮಾತ್ರ ಆಹ್ವಾನಗಳನ್ನು ಕಳುಹಿಸಲಾಗಿದೆ ಎಂದು ಹೇಳಿದ್ದರು. ಆದರೆ, ಫೆಬ್ರವರಿ 28 ರಂದು, ಹಿರಿಯ ನಾಯಕ ಟಿಆರ್ ಬಾಲು ನೀಡಿದ ಹೇಳಿಕೆಯಲ್ಲಿ ಡಿಎಂಕೆ ಮನೀಶ್ ಸಿಸೋಡುಯಾ ಬಂಧನವನ್ನು ಖಂಡಿಸಿತ್ತು.

“ಕೇಂದ್ರ ಸರ್ಕಾರವು ಉದ್ದೇಶಪೂರ್ವಕವಾಗಿ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧ ಪಕ್ಷಗಳನ್ನು ಗುರಿಯಾಗಿಸುತ್ತಿದೆ. ಬಿಜೆಪಿಯು ತನ್ನ ಮೈತ್ರಿ ಪಕ್ಷಗಳಂತೆ ಈ ಸಂಸ್ಥೆಗಳನ್ನು ಹೇಗೆ ಬಳಸಿಕೊಳ್ಳುತ್ತಿದೆ ಎಂಬುದನ್ನು ನೋಡಿದರೆ ಬೇಸರವಾಗುತ್ತದೆ. ಇದು ಪ್ರಜಾಪ್ರಭುತ್ವದ ವಿರುದ್ಧ ಮಾತ್ರವಲ್ಲದೆ ಕಾನೂನಿಘು ವಿರುದ್ಧವಾಗಿದೆ” ಎಂದು ಹಿರಿಯ ನಾಯಕ ಟಿಆರ್ ಬಾಲು ಹೇಳಿಕೆಯಲ್ಲಿ ತಿಳಿಸಿದ್ದರು.

ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಮತ್ತು ದೆಹಲಿ ಸಿಎಂ ಕೇಜ್ರಿವಾಲ್ ಉತ್ತಮ ಸಂಬಂಧ ಹೊಂದಿದ್ದಾರೆ. ಸ್ಟಾಲಿನ್ ಅವರು ದೆಹಲಿ ಸರ್ಕಾರ ನಡೆಸುತ್ತಿರುವ ಮಾದರಿ ಶಾಲೆಗಳು ಮತ್ತು ಮೊಹಲ್ಲಾ ಕ್ಲಿನಿಕ್‌ಗಳಿಗೆ ಭೇಟಿ ನೀಡಿದ್ದಾರೆ. ತಮಿಳುನಾಡಿನಲ್ಲಿ ಸ್ಮಾರ್ಟ್ ಶಾಲೆಗಳನ್ನು ಪ್ರಾರಂಭಿಸಲು ಅರವಿಮದ್ ಕೇಜ್ರಿವಾಲ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿದ್ದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಾಂಗ್ರೆಸ್ ಸೇರ್ಪಡೆ ಬಗ್ಗೆ ಸ್ಪಷ್ಟನೆ ಕೊಟ್ಟ ವಿ ಸೋಮಣ್ಣ!

Wed Mar 8 , 2023
ರಾಜ್ಯ ಸಾರ್ವತ್ರಿಕ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿಯ ಆಂತರಿಕ ವಲಯದಲ್ಲಿ ಅಸಮಧಾನದ ಕಿಚ್ಚು ಹೆಚ್ಚಾದಂತೆ ತೋರುತ್ತಿದೆ. ಹೀಗಾಗಿ ಸಚಿವ ವಿ ಸೋಮಣ್ಣ ಬಿಜೆಪಿ ತೊರೆದು ಪುನ: ಕಾಂಗ್ರೆಸ್ ಸೇರುತ್ತಾರೆನ್ನುವ ಮಾತು ಕೇಳಿ ಬರುತ್ತಿದೆ. ಆದರೆ ಇದಕ್ಕೆ ಸಚಿವ ವಿ ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಜ್ಜಾಗಿರುವ ಬಿಜೆಪಿ ವಿಜಯಸಂಕಲ್ಪ ಯಾತ್ರೆ ಮೂಲಕ ಮತದಾರರನ್ನು ಸೆಳೆಯಲು ಸಾಕಷ್ಟು ಕಸರತ್ತು ಮಾಡುತ್ತಿದೆ. ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಆಡಳಿತ ರೂಢ ಬಿಜೆಪಿ ಪಕ್ಷ […]

Advertisement

Wordpress Social Share Plugin powered by Ultimatelysocial